ಬಿಹಾರ ಚುನಾವಣೆ | ಚಿರಾಗ್‌ರ ‘ಎಲ್‌ಜೆಪಿ’ – ಪ್ರಶಾಂತ್‌ ಕಿಶೋರ್‌ರ ‘ಜನ ಸುರಾಜ್’ ಮೈತ್ರಿ?

Date:

ಬಿಹಾರ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಚುನಾವಣಾ ಕಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ-ಜೆಡಿಯು ಮೈತ್ರಿಕೂಟ ಅಧಿಕಾರ ಉಳಿಸಿಕೊಳ್ಳಲು ತಂತ್ರಗಳನ್ನು ಹೆಣೆಯುತ್ತಿದೆ. ಆಡಳಿತರಾಢ ಸರ್ಕಾರದಿಂದ ಅಧಿಕಾರ ಕಿತ್ತುಕೊಳ್ಳಲು ಆರ್‌ಜೆಡಿ-ಕಾಂಗ್ರೆಸ್‌ ಮೈತ್ರಿ ಕೂಟ ಎದುರು ನೋಡುತ್ತಿದೆ. ಈ ನಡುವೆ, ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಬಹುದಾದ ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ (ಎಲ್‌ಜೆಪಿ) ಮತ್ತು ಚುನಾವಣಾ ತಂತ್ರಜ್ಞ ಪ್ರಶಾಂತ್‌ ಕಿಶೋರ್ ಅವರ ‘ಜನ ಸುರಾಜ್‌‘ ಪಕ್ಷಗಳು ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಸದ್ಯ, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಲ್ಲಿ ಎಲ್‌ಜೆಪಿ ಕೂಡ ಭಾಗವಾಗಿದೆ. ಆದರೆ, ಸೀಟು ಹಂಚಿಕೆ ವಿಚಾರದಲ್ಲಿ ಬಿಜೆಪಿ-ಜೆಡಿಯು ಜೊತೆ ಎಲ್‌ಜೆಪಿ ಜಟಾಪಟಿ ನಡೆಸುತ್ತಿದೆ. ಚಿರಾಗ್ ಪಾಸ್ವಾನ್ ಅವರು ಕೇಳುತ್ತಿರುವ 40 ಕ್ಷೇತ್ರಗಳನ್ನು ಬಿಟ್ಟುಕೊಡಲು ಬಿಜೆಪಿ ಸಿದ್ದವಾಗಿಲ್ಲ. ಹೀಗಾಗಿ, ಎನ್‌ಡಿಎಯಿಂದ ಎಲ್‌ಜೆಪಿ ಹೊರಬರಲಿದೆ ಎಂದು ವರದಿಯಾಗಿದೆ.

ಒಂದು ವೇಳೆ, ಎನ್‌ಡಿಎಯಿಂದ ಎಲ್‌ಜೆಪಿ ಹೊರಬಂದರೆ, ಪ್ರಶಾಂತ್‌ ಕಿಶೋರ್ ಅವರೊಂದಿಗೆ ಚಿರಾಗ್‌ ಪಾಸ್ವಾನ್ ಮಾತುಕತೆ ನಡೆಸಬಹುದು. ಎಲ್‌ಜೆಪಿ ಮತ್ತು ಜನ ಸುರಾಜ್‌ ಮೈತ್ರಿ ಮಾಡಿಕೊಳ್ಳಬಹುದು ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಬಿಹಾರ ಚುನಾವಣೆ | 35 ವರ್ಷಗಳಲ್ಲಿ ಲಾಲೂ-ನಿತೀಶ್‌ ದೋಸ್ತಿ-ಕುಸ್ತಿಯದ್ದೇ ಆಡಳಿತ

ಮೂಲಗಳ ಪ್ರಕಾರ, ಎನ್‌ಡಿಎಯಲ್ಲಿ ಸೀಟು ಹಂಚಿಕೆ ಅಂತಿಮ ಹಂತದಲ್ಲಿದ್ದು, ಒಟ್ಟು 243 ಕ್ಷೇತ್ರಗಳ ಪೈಕಿ ಬಿಜೆಪಿ ಹಾಗೂ ಎನ್‌ಡಿಎ ತಲಾ 100 ಸ್ಥಾನ ಹಂಚಿಕೊಳ್ಳಲು ನಿರ್ಧರಿಸಿವೆ. ಉಳಿದ ಸ್ಥಾನಗಳನ್ನು ಇತರ ಮೈತ್ರಿ ಪಕ್ಷಗಳಿಗೆ ಬಿಟ್ಟುಕೊಡಲು ಯೋಜಿಸಿವೆ ಎಂದು ಹೇಳಲಾಗುತ್ತಿದೆ.

ಬಿಹಾರದ ಎನ್‌ಡಿಎ ಮೈತ್ರಿಕೂಟದಲ್ಲಿ ಬಿಜೆಪಿ, ಜೆಡಿಯು, ಎಲ್‌ಜೆಪಿ, ಹಿಂದುಸ್ತಾನಿ ಅವಾಮಿ ಮೋರ್ಚಾ (ಜಾತ್ಯತೀತ) ಹಾಗೂ ರಾಷ್ಟ್ರೀಯ ಲೋಕ್ ಮೋರ್ಚಾ (ಆರ್‌ಎಲ್‌ಎಂ) ಭಾಗವಾಗಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...