ಬಿಹಾರ ಚುನಾವಣೆ | ಗೆಲುವಿಗೂ ಮುನ್ನವೇ ‘ಎನ್‌ಡಿಎ’ಯಲ್ಲಿ ಸಿಎಂ ಗಾದಿಗೆ ಜಂಗಿಕುಸ್ತಿ

Date:

ಬಿಹಾರ ಚುನಾವಣೆಗೆ ಕೆಲವೇ ದಿನಗಳ ಬಾಕಿ ಇವೆ. ಮೊದಲ ಹಂತದ ಮತದಾನ ನವೆಂಬರ್ 6ರಂದು ನಡೆಯಲಿದ್ದು, ಅಂದು ಮತದಾನ ನಡೆಯುವ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯೂ ಶುಕ್ರವಾರ ಮುಗಿದಿದೆ. ಆದಾಗ್ಯೂ, ಸೀಟು ಹಂಚಿಕೆ ಸೇರಿದಂತೆ ನಾನಾ ವಿಚಾರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯಲ್ಲಿ ಅಸಮಾಧಾನ ಹೊಗೆಯಾಡುತ್ತಿದೆ. ಇದು ಮುಖ್ಯಮಂತ್ರಿ ಹುದ್ದೆ ವಿಚಾರದಲ್ಲಿ ಬಹಿರಂಗಗೊಂಡಿದೆ.

ಆಡಳಿತಾರೂಢ ಎನ್‌ಡಿಎ ಮತ್ತೊಮ್ಮೆ ಅಧಿಕಾರದ ಗದ್ದುಗೆ ಪಡೆಯಲು ಹವಣಿಸುತ್ತಿದೆ. ಆದರೆ, ಬಿಜೆಪಿ ಮತ್ತು ಜೆಡಿಯು ನಡುವಿನ ತಿಕ್ಕಾಟವು ಎನ್‌ಡಿಎ ಗೆಲುವಿಗೆ ತೊಡಕಾಗುವ ಸಾಧ್ಯತೆಗಳೂ ಇವೆ ಎನ್ನಲಾಗುತ್ತಿದೆ. ಚುನಾವಣೆಯಲ್ಲಿ ಎನ್‌ಡಿಎ ಗೆದ್ದರೆ ಮುಖ್ಯಮಂತ್ರಿ ಹುದ್ದೆ ಬಿಜೆಪಿಗಾ ಅಥವಾ ಜೆಡಿಯುಗಾ ಎಂಬ ಚರ್ಚೆ ಈಗಾಗಲೇ ಚುನಾವಣಾ ಕಣದಲ್ಲಿ ಹೆಚ್ಚು ಸದ್ದು ಮಾಡುತ್ತಿದೆ.

ಟಿವಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, “ಎನ್‌ಡಿಎ ಮತ್ತೊಮ್ಮೆ ಗೆಲುವು ಸಾಧಿಸಿದರೆ, ಗೆದ್ದ ಶಾಸಕರು ತಮ್ಮ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ನಿರ್ಧರಿಸುತ್ತಾರೆ” ಎಂದು ಹೇಳಿದ್ದಾರೆ. ಆದರೆ, ಅಮಿತ್ ಶಾ ಹೇಳಿಕೆಯನ್ನು ಜೆಡಿಯು ತಿರಸ್ಕರಿಸಿದೆ. ಎನ್‌ಡಿಎ ಗೆದ್ದರೆ ನಿತೀಶ್‌ ಕುಮಾರ್ ಅವರೇ ಮತ್ತೆ ಮುಖ್ಯಮಂತ್ರಿ ಆಗುತ್ತಾರೆ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಮಿತ್ ಶಾ ಹೇಳಿಕೆಗೆ ತೀಕ್ಷ್ಣವಾಗಿ ಉತ್ತರಿಸಿರುವ ಜೆಡಿಯು ವಕ್ತಾರ ನೀರಜ್ ಕುಮಾರ್, “ನಿತೀಶ್ ಕುಮಾರ್ ಅವರ ನಾಯಕತ್ವದಲ್ಲಿಯೇ ಚುನಾವಣೆ ಎದುರಿಸುತ್ತಿದ್ದೇವೆ. ಹೀಗಿದ್ದಮೇಲೆ, ಫಲಿತಾಂಶದ ಬಳಿಕ ಮತ್ಯೇರೋ ಮುಖ್ಯಮಂತ್ರಿ ಆಗಲು ಹೇಗೆ ಸಾಧ್ಯ? ನಿತೀಶ್‌ ಅವರೇ ಎನ್‌ಡಿಎ ಪ್ರತಿನಿಧಿ, ಅವರೇ ಮುಖ್ಯಮಂತ್ರಿ ಆಗುತ್ತಾರೆ” ಎಂದು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ನಿತೀಶ್ ಅಲ್ಲ, ತೇಜಸ್ವಿ ಅಲ್ಲ, ಮೋದಿಯೂ ಅಲ್ಲ- ಬಿಹಾರದ ಭವಿಷ್ಯ ನಿರ್ಧರಿಸಲಿವೆ 11 ಶಕ್ತಿಗಳು

ಇದು, ಬಿಜೆಪಿ-ಜೆಡಿಯು ನಡುವಿನ ಹಗ್ಗಜಗ್ಗಾಟವನ್ನು ಬಹಿರಂಗಗೊಳಿಸಿದೆ. ಮಾತ್ರವಲ್ಲದೆ, ವಿಪಕ್ಷಗಳ ಮೈತ್ರಿಕೂಟ ಮಹಾಘಟಬಂಧನ್‌ಗೆ ಚುನಾವಣಾ ಪ್ರಚಾರದ ದಾಳವೂ ಆಗಿದೆ. ಬಿಜೆಪಿ-ಜೆಡಿಯು ಕಿತ್ತಾಟದ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ನಿತೀಶ್ ನಹಿ ಬನೇಂಗೆ ಸಿಎಂ, ಅಮಿತ್ ಶಾ ನೇ ಕರ್ ದಿಯಾ ಕ್ಲಿಯರ್ (ನೀತಿಶ್ ಸಿಎಂ ಆಗುವುದಿಲ್ಲ, ಅಮಿತ್ ಶಾ ಅವರು ಸ್ಪಷ್ಟಪಡಿಸಿದ್ದಾರೆ)” ಎಂದು ವ್ಯಂಗ್ಯವಾಡಿದೆ.

ಬಿಹಾರದಲ್ಲಿ ಒಟ್ಟು 243 ವಿಧಾನಸಭಾ ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಒಟ್ಟು ಕ್ಷೇತ್ರಗಳಲ್ಲಿ ಎನ್‌ಡಿಎಯೊಳಗೆ ಬಿಜೆಪಿ 101, ಜೆಡಿಯು 101, ಎಲ್‌ಜೆಪಿ 29. ಎಚ್‌ಎಎಂಎಸ್‌ 6 ಹಾಗೂ ಆರ್‌ಎಲ್‌ಎಂ 6 ಕ್ಷೇತ್ರಗಳನ್ನು ಹಂಚಿಕೊಂಡಿವೆ. ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...