ಬಿಹಾರ ಚುನಾವಣೆ | ಮಹಾಘಟಬಂಧನ್ ಪ್ರಣಾಳಿಕೆ ಬಿಡುಗಡೆ; ರಾಜ್ಯವನ್ನು ದೇಶದ ನಂ.1 ಮಾಡುವ ಭರವಸೆ

Date:

ಬಿಹಾರ ಚುನಾವಣಾ ಕಣ ಬಿರುಸು ಪಡೆದುಕೊಂಡಿದೆ. ವಿಪಕ್ಷಗಳ ಮಹಾಘಟಬಂಧನ್ ಮೈತ್ರಿಕೂಟವು ಬಿಹಾರಕ್ಕೆ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಪ್ರತಿಯೊಂದು ಕುಟುಂಬಕ್ಕೂ ಸರ್ಕಾರಿ ಉದ್ಯೋಗ ಒದಗಿಸಲಾಗುತ್ತದೆ. ಬಿಹಾರವನ್ನು ದೇಶದ ನಂಬರ್ ಒನ್ ರಾಜ್ಯವನ್ನಾಗಿ ಮಾಡಲು ಕೆಲಸ ಮಾಡಲಾಗುತ್ತದೆ ಎಂದು ಮೈತ್ರಿಕೂಟವು ಘೋಷಿಸಿದೆ.

ಮೈತ್ರಿಕೂಟದ ನಾಯಕರು ಪಾಟ್ನಾದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, “ನಮಗೆ ರಾಜ್ಯದ ಬೆಳವಣಿಗೆ ಬಗ್ಗೆ ಒಂದು ದೃಷ್ಟಿಕೋನವಿದೆ. ಈ ಪ್ರಣಾಳಿಕೆಯು ಕೇವಲ ಮಹಾಘಟಬಂಧನ್‌ನ ಭರವಸೆಗಳು ಮಾತ್ರವಲ್ಲ, ‘ತೇಜಸ್ವಿ ಪ್ರಾಣ್ ಪತ್ರ’ವೂ ಆಗಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಪ್ರಣಾಳಿಕೆಯ ಪ್ರಮುಖ ಅಂಶಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
  • ಎಲ್ಲಅಲ್ಪಸಂಖ್ಯಾತ ಸಮುದಾಯಗಳ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಲಾಗುವುದು.
  • ಜನ ಸ್ವಾಸ್ಥ್ಯ ಸುರಕ್ಷಾ ಯೋಜನೆಯಡಿ ಪ್ರತಿಯೊಬ್ಬ ವ್ಯಕ್ತಿಗೂ 25 ಲಕ್ಷ ರೂ.ಗಳವರೆಗೆ ಉಚಿತ ಆರೋಗ್ಯ ವಿಮೆ ನೀಡಲಾಗುವುದು.
  • ಪಂಚಾಯತ್ ಮತ್ತು ಪುರಸಭೆ ಚುನಾವಣೆಗಳಲ್ಲಿ ಅತ್ಯಂತ ಹಿಂದುಳಿದ ವರ್ಗಗಳಿಗೆ (ಇಬಿಸಿ) ಪ್ರಸ್ತುತ ಇರುವ 20% ಮೀಸಲಾತಿಯನ್ನು 30%ಗೆ ಹೆಚ್ಚಿಸಲಾಗುವುದು.
  • ಬೋಧ್ ಗಯಾದಲ್ಲಿರುವ ಬೌದ್ಧ ದೇವಾಲಯಗಳ ನಿರ್ವಹಣೆಯನ್ನು ಬೌದ್ಧ ಸಮುದಾಯದ ಜನರಿಗೆ ಹಸ್ತಾಂತರಿಸಲಾಗುವುದು.
  • ಮಹಿಳೆಯರಿಗೆ ತಿಂಗಳಿಗೆ 2,500 ರೂ. ಸಹಾಯಧನ
  • ಪ್ರತಿ ಮನೆಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್
  • ಬಿಹಾರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಕಾರ್ಮಿಕರಾಗಿರುವ ‘ಜೀವಿಕಾ ದೀದೀಸ್’ ಅವರನ್ನು ಖಾಯಂ ಮಾಡಲು ಕ್ರಮ
  • ಐಟಿ ಪಾರ್ಕ್‌ಗಳು, ವಿಶೇಷ ಆರ್ಥಿಕ ವಲಯಗಳು, ಡೈರಿ, ಕೃಷಿ ಆಧಾರಿತ ಕೈಗಾರಿಕೆಗಳು, ಶಿಕ್ಷಣಕ್ಕೆ ಹೆಚ್ಚು ಗಮನ
  • 5 ಹೊಸ ಎಕ್ಸ್‌ಪ್ರೆಸ್‌ವೇಗಳ ನಿರ್ಮಾಣ
  • ಅಧಿಕಾರಕ್ಕೆ ಬಂದ 20 ತಿಂಗಳೊಳಗೆ ಬಿಹಾರದಾದ್ಯಂತ ಉದ್ಯೋಗ ಖಾತರಿ ಯೋಜನೆ ಅನುಷ್ಠಾನ ಮತ್ತು ಉದ್ಯೋಗ ಖಾತರಿಯ ಕುರಿತು ಹೊಸ ಕಾನೂನು ರಚನೆ.

ಇದೇ ಸಂದರ್ಭದಲ್ಲಿ, ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡದ ಎನ್‌ಡಿಎ ವಿರುದ್ಧ ವಾಗ್ದಾಳಿ ನಡೆಸಿದ ತೇಜಸ್ವಿ ಯಾದವ್, “ನಾವು ಚುನಾವಣೆಗೆ ಮುಂಚಿತವಾಗಿ ನಮ್ಮ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದ್ದೇವೆ… ನಾವು ಇಂದು ನಮ್ಮ ಪ್ರಣಾಳಿಕೆಯನ್ನು ಬಿಡುಗಡೆ ಮಾಡುತ್ತಿದ್ದೇವೆ. ಎನ್‌ಡಿಎ ಪಕ್ಷಗಳ ಕತೆ ಏನು? ಅವರು ತಮ್ಮ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿಲ್ಲ. ತಮ್ಮ ಪ್ರಣಾಳಿಕೆಯನ್ನೂ ಬಿಡುಗಡೆ ಮಾಡಿಲ್ಲ. ಅವರು ನಮ್ಮ ಭರವಸೆಗಳನ್ನು ನಕಲು ಮಾಡುತ್ತಾರೆ” ಎಂದು ಟೀಕಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಬಿಹಾರ ಚುನಾವಣೆ | ನಿತೀಶ್ ಕುಮಾರ್ ಮತ್ತು ಬಿಜೆಪಿಯ ಸ್ವಯಂ ಸೋಲು

ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಬಿಹಾರಕ್ಕೆ ರಚನಾತ್ಮಕವಾಗಿ ಏನನ್ನೂ ಮಾಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

243 ಸ್ಥಾನಗಳನ್ನು ಹೊಂದಿರುವ ಬಿಹಾರ ವಿಧಾನಸಭೆಗೆ ನವೆಂಬರ್ 6 ಮತ್ತು ನವೆಂಬರ್ 11 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 14 ರಂದು ಫಲಿತಾಂಶಗಳು ಪ್ರಕಟವಾಗಲಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...