ಬಿಹಾರ ಚುನಾವಣೆ | ‘ಮತ ಹಂಚಿಕೆ’ಯಲ್ಲಿ ಅಗ್ರ ಸ್ಥಾನದಲ್ಲಿದ್ದರೂ, ಸೀಟುಗಳಲ್ಲಿ ಹಿಂದೆಬಿದ್ದ ಆರ್‌ಜೆಡಿ

Date:

ಬಿಹಾರ ವಿಧಾನಸಭಾ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. ಎನ್‌ಡಿಎ ಮೈತ್ರಿಕೂಟವು 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಮಹಘಟಬಂಧನ್ ಕೇವಲ 36 ಸ್ಥಾನಗಳಲ್ಲಿ ಮಾತ್ರವೇ ಮುನ್ನಡೆ ಸಾಧಿಸಿದ್ದು, ತೀವ್ರ ಸೋಲಿನ ಆಘಾತದಲ್ಲಿದೆ. ಇದೇ ಸಮಯದಲ್ಲಿ ಗಮನಾರ್ಹ ವಿಚಾರವೆಂದರೆ, ಮಹಾಘಟಬಂಧನ್‌ ಮೈತ್ರಿಕೂಟವನ್ನು ಮುನ್ನಡೆಸುತ್ತಿರುವ ಆರ್‌ಜೆಡಿ ಅತೀ ಹೆಚ್ಚು ಮತ ಹಂಚಿಕೆ (ಓಟ್‌ ಶೇರ್‌) ಪಡೆದಿದೆ. ಆದರೆ, ಸೀಟುಗಳಲ್ಲಿ ಹಿಂದೆಬಿದ್ದಿದೆ.

ಈವರೆಗೆ ಎಣಿಸಲಾಗಿರುವ ಮತಗಳಲ್ಲಿ ಪೈಕಿ, ಅತೀ ಹೆಚ್ಚು ಮತಗಳನ್ನು ಪಡೆದಿರುವ ಪಕ್ಷಗಳ ಪಟ್ಟಿಯಲ್ಲಿ ಆರ್‌ಜೆಡಿ ಅಗ್ರ ಸ್ಥಾನದಲ್ಲಿದೆ. ಎಣಿಸಲಾದ ಮತಗಳಲ್ಲಿ 22.77% ಮತಗಳನ್ನು ಆರ್‌ಜೆಡಿ ಪಡೆದುಕೊಂಡಿದೆ. 2ನೇ ಸ್ಥಾನದಲ್ಲಿ ಬಿಜೆಪಿ ಇದ್ದು, 20.97% ಮತ ಪಡೆದಿದೆ. ನಿತೀಶ್‌ ಕುಮಾರ್ ಅವರ ಜೆಡಿಯು 18.92% ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್‌ 8.32% ಮತಗಳನ್ನು ಪಡೆದಿದೆ.

ಬಿಜೆಪಿಗಿಂತಲೂ ಆರ್‌ಜೆಡಿ 2% ಹೆಚ್ಚು ಮತಗಳನ್ನು ಪಡೆದಿದ್ದರೂ, ಆರ್‌ಜೆಡಿ ಕೇವಲ 28 ಸ್ಥಾನಗಳಲ್ಲಿ ಮಾತ್ರವೇ ಮುನ್ನಡೆಯಲ್ಲಿದೆ. ಆರ್‌ಜೆಡಿಗಿಂತ ಕಡಿಮೆ (20.97%) ಮತಗಳನ್ನು ಪಡೆದಿರುವ ಬಿಜೆಪಿ ಬರೋಬ್ಬರಿ 90 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಕ್ಷವಾರು ಮತ ಹಂಚಿಕೆ ಮತ್ತು ಮುನ್ನಡೆ ಸ್ಥಾನಗಳ ಸಂಖ್ಯೆ
ಆರ್‌ಜೆಡಿ – 22.77% – 28 ಸ್ಥಾನಗಳು
ಬಿಜೆಪಿ – 20.91% – 90 ಸ್ಥಾನಗಳು
ಜೆಡಿಯು – 18.98% – 80 ಸ್ಥಾನಗಳು
ಕಾಂಗ್ರೆಸ್‌ – 8.33% – 5 ಸ್ಥಾನಗಳು
ಎಡಪಕ್ಷಗಳು – 6.31% – 6 ಸ್ಥಾನಗಳು
ಎಲ್‌ಜೆಪಿ – 5.22% – 22 ಸ್ಥಾನಗಳು
ಎಐಎಂಐಎಂ – 2.06% – 3 ಸ್ಥಾನಗಳು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...