ಭವಾನಿ ರೇವಣ್ಣ ಬಂಧನಕ್ಕೆ ಪೊಲೀಸರ ಹುಡುಕಾಟ : ಗೃಹ ಸಚಿವ ಪರಮೇಶ್ವರ್

Date:

ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಭವಾನಿ ರೇವಣ್ಣ ಅವರನ್ನು ಪೊಲೀಸರು ಹುಡುಕುತ್ತಿದ್ದು, ಶೀಘ್ರವೇ ಅವರ ಬಂಧನವಾಗಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಭವಾನಿ ರೇವಣ್ಣ ಅವರನ್ನು ಬಂಧನ ಮಾಡಲು ಎಸ್‌ಐಟಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ. ಅವರು ಸಿಕ್ಕಾಗ ಬಂಧಿಸಲಾಗುವುದು. ಕಾನೂನು ಪ್ರಕಾರ ಕ್ರಮ ಆಗಲಿದೆ” ಎಂದು ತಿಳಿಸಿದ್ದಾರೆ.

“ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ವಿಚಾರವಾಗಿ, ಜೂ.3ರಂದು ಪರಿಷತ್ ಚುನಾವಣೆ ನಾಮಿನೇಷನ್ಗೆ ಕೊನೆಯ ದಿನವಾಗಿದ್ದು, ಅದಕ್ಕೆ ಸಭೆಯನ್ನು ಕರೆಯಲಾಗಿದೆ. ನಾಮಿನೇಷನ್ ಪೇಪರ್ಗೆ 10 ಜನ ಸಹಿ ಮಾಡಬೇಕು. ಇದೇ ಕಾರಣಕ್ಕೆ ಸಭೆ ಕರೆದಿದ್ದಾರೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಎಚ್ ಡಿ ರೇವಣ್ಣಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್‌; ಬಂಧನ ಭೀತಿ

ಅಪಹರಣ ಪ್ರಕರಣದ ವಿಚಾರಣೆಗೆ ಹಾಜರಾಗದೇ ಭವಾನಿ ರೇವಣ್ಣ ಅವರು ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಎಸ್ಐಟಿ ಅಧಿಕಾರಿಗಳು ವಿಚಾರಣೆಗೆಂದು ಹೊಳೆನರಸೀಪುರದಲ್ಲಿರುವ ಅವರ ನಿವಾಸಕ್ಕೆ ತೆರಳಿದ ವೇಳೆ ಭವಾನಿ ರೇವಣ್ಣ ಅವರು ಮನೆಯಲ್ಲಿ ಇರಲಿಲ್ಲ. ಭವಾನಿ ರೇವಣ್ಣ ಅವರಿಗೆ ಬಂಧನ ಭೀತಿ ಎದುರಾಗಿದ್ದು, ಜಾಮೀನಿಗಾಗಿ ನಾಳೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಆ ಬಳಿಕ ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...