ಬಿಜೆಪಿ ರೈತರ ದೊಡ್ಡ ಶತ್ರು, ಮಹಾರಾಷ್ಟ್ರ ‘ಮಹಾ ಪರಿವರ್ತನೆ’ ಬಯಸಿದೆ: ಮಲ್ಲಿಕಾರ್ಜುನ ಖರ್ಗೆ

Date:

ಮಹಾರಾಷ್ಟ್ರದ ರೈತರ ದೊಡ್ಡ ಶತ್ರು ಬಿಜೆಪಿ, ಮಹಾರಾಷ್ಟ್ರ ‘ಮಹಾ ಪರಿವರ್ತನೆ’ ಆಗ್ರಹಿಸುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ. ಹಾಗೆಯೇ ಡಬಲ್ ಎಂಜಿನ್ ಸರ್ಕಾರವನ್ನು ಅಧಿಕಾರದಿಂದ ತೆಗೆದುಹಾಕುವುದರಿಂದ ಮಾತ್ರ ರೈತರಿಗೆ ಲಾಭವಾಗಲಿದೆ ಎಂದು ರಾಜ್ಯವೇ ನಿರ್ಧರಿಸಿದೆ ಎಂದಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ ಅವರು ಮಹಾರಾಷ್ಟ್ರದಲ್ಲಿ ರೈತರ ಆತ್ಮಹತ್ಯೆಗಳ ಬಗ್ಗೆ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯವನ್ನು ಬರ ಮುಕ್ತಗೊಳಿಸುವ ಭರವಸೆ ಬರೀ ‘ಜುಮ್ಲಾ’ ಎಂದು ಟೀಕಿಸಿದ್ದಾರೆ.

“ಮಹಾರಾಷ್ಟ್ರದ ರೈತರ ದೊಡ್ಡ ಶತ್ರು ಬಿಜೆಪಿ” ಎಂದಿರುವ ಖರ್ಗೆ, ಮಹಾರಾಷ್ಟ್ರಕ್ಕೆ ಸಂಬಂಧಿಸಿದ ಹಲವು ವಿಚಾರಗಳನ್ನು ಪಟ್ಟಿದ್ದಾರೆ. “20,000 ರೈತರು ಮಹಾರಾಷ್ಟ್ರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷಿ ನಿಧಿಯಲ್ಲಿ ಭಾರೀ ಕಡಿತ ಮಾಡಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಚುನಾವಣೆ ಬಂದಾಗ ‘ಗೋಮಾತೆ’ ಸ್ಮರಣೆ: ದೇಸಿ ಹಸು ರಾಜ್ಯ ಮಾತೆಯಾದರೆ, ಇತರೆ ತಳಿಗಳು ಆಹಾರವೇ?

“20,000 ಕೋಟಿ ರೂಪಾಯಿ ವಾಟರ್ ಗ್ರಿಡ್ ಸುಳ್ಳು ಭರವಸೆ ನೀಡಲಾಗಿದೆ. ಬಿಜೆಪಿಯು ಮಹಾರಾಷ್ಟ್ರವನ್ನು ಬರ ಮುಕ್ತ ಮಾಡುವುದಾಗಿ ಸುಳ್ಳು ಭರವಸೆ ನೀಡಿದೆ. ಹಾಗೆಯೇ ಅನ್ನದಾತರಿಗೆ ಪರಿಹಾರ ನೀಡಲು ಬಿಜೆಪಿ ಸರ್ಕಾರ ನಿರಾಕರಣೆ” ಎಂದು ಆರೋಪಿಸಿದ್ದಾರೆ.

“ವಿಮಾ ಕಂಪನಿಗಳಿಗೆ 8,000 ಕೋಟಿ ರೂಪಾಯಿ ಲಾಭವಾಗಿದೆ. ಈರುಳ್ಳಿ ಮತ್ತು ಸೋಯಾಬೀನ್ ರಫ್ತು ನಿಷೇಧ ಮಾಡಲಾಗಿದೆ ರೈತರ ಮೇಲೆ ಹೆಚ್ಚಿನ ರಫ್ತು ಸುಂಕದ ಹೊರೆ ಹೊರಿಸಲಾಗಿದೆ. ಈ ನಡುವೆ ಹತ್ತಿ ಮತ್ತು ಸೋಯಾಬೀನ್ ಉತ್ಪಾದನೆಯಲ್ಲಿ ಭಾರಿ ಕುಸಿತವಾಗಿದೆ. ರಾಜ್ಯದ ಹಾಲು ಸಹಕಾರಿ ಸಂಘಗಳಲ್ಲಿನ ಬಿಕ್ಕಟ್ಟು ಉಂಟಾಗಿದ್ದು ಸರ್ಕಾರವೇ ಒಪ್ಪಿಕೊಂಡಿದೆ” ಎಂದು ಹೇಳಿದ್ದಾರೆ.

“ಬಿಜೆಪಿಯ ಡಬಲ್ ಇಂಜಿನ್ ಸರ್ಕಾರವನ್ನು ಕಿತ್ತೊಗೆದ ನಂತರವೇ ರೈತರಿಗೆ ಲಾಭವಾಗಲಿದೆ ಎಂದು ಮಹಾರಾಷ್ಟ್ರ ನಿರ್ಧರಿಸಿದೆ. ಮಹಾರಾಷ್ಟ್ರ ಮಹಾ ಪರಿವರ್ತನೆಯನ್ನು ಆಗ್ರಹಿಸುತ್ತಿದೆ” ಎಂದು ಖರ್ಗೆ ಎಕ್ಸ್‌ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ನವೆಂಬರ್ 20ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...