ಸಿಎಂ ರಾಜೀನಾಮೆಗೆ ಆಗ್ರಹಿಸಿ ನಾಳೆ (ಆ.22) ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ

Date:

ರಾಜ್ಯಪಾರಿಗೆ ಅವಮಾನ ಮಾಡಿದ ಕಾಂಗ್ರೆಸ್ ನಡೆಯನ್ನು ಖಂಡಿಸಿ ಹಾಗೂ ವಿವಿಧ ಹಗರಣಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಗುರುವಾರ (ಆ.22) ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‍ಕುಮಾರ್ ತಿಳಿಸಿದರು.

ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಲಿದೆ. ರಾಜ್ಯ ಕೋರ್ ಕಮಿಟಿ ಸದಸ್ಯರು, ಸ್ಥಳೀಯ ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ” ಎಂದರು.

“ಕಾಂಗ್ರೆಸ್ ಪ್ರತಿಭಟನೆ ಸಂದರ್ಭದಲ್ಲಿ ರಾಜ್ಯಪಾಲರ ಭಾವಚಿತ್ರಕ್ಕೆ ಅವಮಾನ ಮಾಡಿದ್ದಾರೆ. ಅಲ್ಲದೆ, ಕೆಲವೆಡೆ ಭಾವಚಿತ್ರವನ್ನು ದಹಿಸಲಾಗಿದೆ. ಇದಲ್ಲದೆ, ಸಚಿವರಾದ ಜಮೀರ್ ಅಹ್ಮದ್, ಕೃಷ್ಣಬೈರೇಗೌಡ, ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜ ಮೊದಲಾದವರು ರಾಜ್ಯಪಾಲರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಕೊಟ್ಟಿದ್ದಾರೆ. ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಅವರು ಪ್ರಧಾನಿಯವರ ವಿರುದ್ಧ ಆಕ್ಷೇಪಾರ್ಹ ಮಾತನಾಡಿದ್ದಾರೆ. ಹಿಂಸೆಗೆ ಪ್ರಚೋದಿಸುವ ಹೇಳಿಕೆಗಳನ್ನು ಕಾಂಗ್ರೆಸ್ಸಿಗರು ನೀಡುತ್ತಿದ್ದು, ಇದರ ವಿರುದ್ಧ ಪೊಲೀಸ್ ಇಲಾಖೆಯು ಸ್ವಯಂಪ್ರೇರಿತ ಪ್ರಕರಣಗಳನ್ನು ದಾಖಲಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್‌ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ರಾಜ್ಯಪಾಲರ ನಡೆಯನ್ನು ವಿರೋಧಿಸಿ ಕಾಂಗ್ರೆಸ್ ರಾಜ್ಯಾಧ್ಯಂತ ಪ್ರತಿಭಟನೆ ನಡೆಸಿದೆ.

ಈ ಪ್ರತಿಭಟನೆಯ ಸಂದರ್ಭದಲ್ಲಿ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ದರು. ಸಚಿವ ಜಮೀರ್ ಅಹ್ಮದ್ ಖಾನ್, ವಿಧಾನಪರಿಷತ್ ಸದಸ್ಯರಾದ ಐವನ್ ಡಿಸೋಜಾ ಎಚ್ಚರಿಕೆಯ ಸಂದೇಶವನ್ನು ರಾಜ್ಯಪಾಲರಿಗೆ ನೀಡಿದ್ದರು. ಬಾಂಗ್ಲಾ ದೇಶದ ಮಾದರಿಯಲ್ಲಿ ದಾಳಿ ನಡೆಯಬಹುದು ಎಂದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...