ಟನಲ್ ರಸ್ತೆ ಯೋಜನೆ ಬಗ್ಗೆ ಟೀಕೆ ಬಿಟ್ಟು ಬಿಜೆಪಿ ನಾಯಕರು ಸಲಹೆ ನೀಡಲಿ: ಡಿಸಿಎಂ ಡಿ ಕೆ ಶಿವಕುಮಾರ್

Date:

“ಟನಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿ ನಾಯಕರು ಟೀಕೆ ಬಿಟ್ಟು ಸಲಹೆಗಳನ್ನು ನೀಡಲಿ. ಈ ಯೋಜನೆ ನನ್ನ ಆಸ್ತಿಯಲ್ಲ. ಸಾರ್ವಜನಿಕರಿಗಾಗಿ ಮಾಡುತ್ತಿರುವ ಯೋಜನೆ. ನನಗೆ ಬಿಜೆಪಿಯವರು ಪರಿಹಾರವನ್ನು ತಿಳಿಸಲಿ” ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು.

ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆಶಿ, “ಲಾಲ್‌ಬಾಗ್ ಅನ್ನು ಹಾಳು ಮಾಡಲು ಮೂರ್ಖನಲ್ಲ. ನನಗೆ ಇದರ ಇತಿಹಾಸವೂ ಗೊತ್ತಿದೆ. ಉದ್ಯಾನದಲ್ಲಿ ಎಷ್ಟು ಭಾಗ ಉಪಯೋಗವಾಗುತ್ತಿದೆ, ಉಪಯೋಗವಾಗುತ್ತಿಲ್ಲ ಎಂಬುದೂ ನನಗೆ ತಿಳಿದಿದೆ” ಎಂದು ಹೇಳಿದರು. ಟನಲ್ ರಸ್ತೆ ಯೋಜನೆಯಿಂದ ಲಾಲ್‌ಬಾಗ್‌ ಪರಿಸರಕ್ಕೆ ಹಾನಿಯಾಗಲಿದೆ ಎಂದು ಬಿಜೆಪಿ ಹೇಳಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಟನಲ್ ರೋಡ್ ದೈತ್ಯ ಯೋಜನೆಯನ್ನು ಸಾರ್ವಜನಿಕ ಚರ್ಚೆಗಿಡಲಿ ಸರ್ಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಟನಲ್ ರಸ್ತೆ ವಿರೋಧಿಸಿ ಬಿಜೆಪಿಯವರು ಸಹಿ ಸಂಗ್ರಹ ಅಭಿಯಾನ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ, “ನನಗೂ ಸಹಿ ಸಂಗ್ರಹ ಅಭಿಯಾನಕ್ಕೆ ಕರೆ ನೀಡಲು ತಿಳಿದಿದೆ. ನಾನು ಅವರಿಗಿಂತ ಅಧಿಕ ಸಂಘಟನೆ ಮಾಡುವವನು. ಅವರು ಒಂದು ಸಂಸ್ಥೆ ಮುಂದಿಟ್ಟುಕೊಂಡು ಸಂಘಟನೆ ಮಾಡುತ್ತಿದ್ದಾರೆ. ಆದರೆ ನಾವು ಪಕ್ಷದ ಮೂಲಕವೆ ಸಂಘಟನೆ ಮಾಡುವವರು. ಯಾವುದೇ ಪರಿಹಾರ ಹೇಳದ ಟೀಕಿಸಿದರೆ ಪ್ರಯೋಜನವೇನು? ಒಳ್ಳೆಯ ಸಲಹೆಗಳನ್ನು ನೀಡಿದರೆ ಒಪ್ಪಬಹುದು” ಎಂದರು.

ಮೆಟ್ರೋ ಸಂಚಾರ ಟನಲ್ ಮೂಲಕವೇ ಅಲ್ಲವೇ?

ಇನ್ನು ಇದೇ ಸಂದರ್ಭದಲ್ಲಿ ಮೆಟ್ರೋ ಸಂಚಾರ ಟನಲ್ ಮೂಲಕವೇ ಅಲ್ಲವೇ ಎಂದು ಪ್ರಶ್ನಿಸಿದರು. “ಮೆಟ್ರೋ ಮಾರ್ಗ ಹೋಗುವುದು ಟನಲ್ ಮೂಲಕವೇ ಅಲ್ಲವೇ? ಈ ಯೋಜನೆ ತಂದವರು ಯಾರು? ಎಸ್.ಎಂ.ಕೃಷ್ಣ ಅವರ ಕಾಲದಲ್ಲಿ ಹತ್ತು ದೇಶಗಳನ್ನು ತಿರುಗಿ ಅಧ್ಯಯನ ನಡೆಸಿ ವರದಿ ಮಾಡಿದ್ದೆ. ಎಸ್.ಎಂ. ಕೃಷ್ಣ ಅವರು, ಅನಂತಕುಮಾರ್ ಹಾಗೂ ನಾನು ದೆಹಲಿಗೆ ತೆರಳಿ ಅಂದಿನ ಪ್ರಧಾನಿಗಳಾದ ವಾಜಪೇಯಿ ಅವರಿಗೆ ವರದಿ ನೀಡಿದ್ದೆವು. ಹೀಗೆ ಯೋಜನೆ ಪ್ರಾರಂಭವಾಯಿತು” ಎಂದು ನೆನಪಿಸಿಕೊಂಡರು.

ಈ ಸಂದರ್ಭದಲ್ಲೇ ಸಂಸದ ತೇಜಸ್ವಿ ಸೂರ್ಯ ಅವರಿಗೆ ತಿರುಗೇಟು ನೀಡಿದ ಡಿಸಿಎಂ, “ತೇಜಸ್ವಿ ಸೂರ್ಯ ರೈಲು ಯೋಜನೆ ಮಾಡಿ ಎಂದು ಹೇಳುತ್ತಾನೆ. ಆ ಯೋಜನೆ ಮಾಡಲು ಬೆಂಗಳೂರಿನಲ್ಲಿ ಜಾಗ ಎಲ್ಲಿದೆ?‌ ಕೇಂದ್ರ ಸರ್ಕಾರವೇ ಈ ಯೋಜನೆ ಮಾಡಲಿ. ಬಿಆರ್‌ಟಿಎಸ್‌ ಯೋಜನೆ ಮಾಡಲು ಬೆಂಗಳೂರಿನಲ್ಲಿ ಎಲ್ಲಾದರೂ ಜಾಗ ಇದೆಯೇ? ಅವರಿಗೆ ತಲೆ ಇದೆಯೇ? ಇದರಿಂದ ದಿನಕ್ಕೆ ನೂರಾರು ಜನ ಸಾಯಬೇಕಾಗುತ್ತದೆ. ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಅವರು ಬಿಆರ್‌ಟಿಎಸ್‌ ಯೋಜನೆಯಲ್ಲಿ ವಿಫಲರಾದರು” ಎಂದು ಹೇಳಿದರು.

ಇನ್ನು ಸಂಸದ ತೇಜಸ್ವಿ ಸೂರ್ಯ, ಶಾಸಕ ರಾಮಮೂರ್ತಿಗೆ ಶಿವಕುಮಾರ್ ಧಮ್ಕಿ ಹಾಕುತ್ತಿದ್ದಾರೆ ಎನ್ನುವ ಅಶೋಕ್ ಅವರ ಆರೋಪದ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದ್ದು, “ನಾನೇಕೆ ಧಮ್ಕಿ ಹಾಕಲಿ? ರಾಮಮೂರ್ತಿ ನಮ್ಮ ಹುಡುಗ. ತೇಜಸ್ವಿ ಸೂರ್ಯ ದೊಡ್ಡ ನಾಯಕ, ಅತಿ ಬುದ್ದಿವಂತ. ಅದಕ್ಕೆ ವಿಮಾನದ ತುರ್ತು ನಿರ್ಗಮನ ದ್ವಾರವನ್ನೇ ತೆರೆಯಲು ಹೋಗಿದ್ದ. ಯಾವುದೇ ಅನುಮತಿ ಇಲ್ಲದೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ಮಾಡಲು ಹೋಗಿ ಉಗಿಸಿಕೊಂಡು ಬಂದವನು” ಎಂದು ವ್ಯಂಗ್ಯವಾಡಿದರು.

ಇದನ್ನು ಓದಿದ್ದೀರಾ? ಕಾರು ಇಲ್ಲದವನನ್ನು ಯಾರೂ ಮದುವೆಯಾಗಲು ಬಯಸಲ್ಲ: ತೇಜಸ್ವಿ ಬಳಿ ಸುರಂಗ ರಸ್ತೆ ಸಮರ್ಥಿಸಿಕೊಂಡ ಡಿ ಕೆ ಶಿವಕುಮಾರ್

“ಈಗ ಕಾರಲ್ಲಿ ಓಡಾಡಬೇಡಿ ಎನ್ನುತ್ತಾನೆ. ಮದುವೆಯಾಗುವ ವೇಳೆಯಲ್ಲಿ ಹೊಸ ಕಾರು ಬೇಕು ಎಂದು ಅರ್ಜಿ ನೀಡಿದ್ದ. ದಾಖಲೆ ಬಿಡುಗಡೆ ಮಾಡಿ ಎಂದರೆ ಬಿಡುಗಡೆ ಮಾಡುತ್ತೇವೆ. ಈಗ ಆತ ಹಾಗೂ ಬಿಜೆಪಿ ನಾಯಕರು ಕಾರಲ್ಲಿ ಓಡಾಡುವುದು ಬಿಟ್ಟು ಮೆಟ್ರೋ, ಸಾರ್ವಜನಿಕ ಸಾರಿಗೆ ಬಳಸಲಿ. ಇವರ ನಾಟಕಗಳನ್ನು ಕೇಳುವವರು ಯಾರು? ಆತನಿಗೆ ಮದುವೆಗೆ ಮುಂಚಿತವಾಗಿ ಹೊಸ ಕಾರು ಏಕೆ ಬೇಕಿತ್ತು? ಕಾರಲ್ಲಿ ಓಡಾಡುವುದು ಪ್ರತಿಷ್ಠೆಯೇ? ಸಾಮಾಜಿಕ ಅನಿವಾರ್ಯತೆ ಅವನಿಗೆ ಎದುರಾಯಿತೇ? ರೈಲು, ಮೆಟ್ರೋದಲ್ಲಿ ಓಡಾಡಲು ಬೇಡ ಎಂದವರಾರು” ಎಂದು ಪ್ರಶ್ನಿಸಿದರು.

“ಯಾವುದೇ ಅಭಿವೃದ್ಧಿ ಕೆಲಸ ಕೈಗೆತ್ತಿಕೊಂಡರೂ ಬಿಜೆಪಿಯವರು ವಿರೋಧ ವ್ಯಕ್ತಪಡಿಸುತ್ತಾರೆ. ಜಾರ್ಜ್ ಅವರ ಸಮಯದಲ್ಲಿ ಸ್ಟೀಲ್ ಬ್ರಿಡ್ಜ್‌‌ಗೆ ವಿರೋಧ ಮಾಡಿದ್ದರು. ಒಂದೂ ಪರಿಹಾರ ಹೇಳುವುದಿಲ್ಲ. ಸಹಿ ಸಂಗ್ರಹ ಅಭಿಯಾನ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಲಿ. ಅಶೋಕ್ ಅವರಲ್ಲಿ ಮನವಿ ಮಾಡುತ್ತೇನೆ. ಅವರ ನೇತೃತ್ವದಲ್ಲಿಯೇ ಸಮಿತಿ ಮಾಡುತ್ತೇವೆ. ಯಾರನ್ನು ಬೇಕಾದರೂ ಅದಕ್ಕೆ ಸೇರಿಸಿಕೊಳ್ಳಲಿ. ಅವರು ಸೂಚಿಸಿದ ತಾಂತ್ರಿಕ ಪರಿಣಿತರನ್ನೇ ಸಮಿತಿಗೆ ಸೇರಿಸೋಣ” ಎಂದು ಹೇಳಿದರು.

ಆರ್‌ಎಸ್ಎಸ್ ಇಲ್ಲದಿದ್ದರೆ ಬಿಜೆಪಿ ಶೂನ್ಯ

“ಆರ್‌ಎಸ್‌ಎಸ್‌ ಇಲ್ಲದಿದ್ದರೆ ಬಿಜೆಪಿ ಶೂನ್ಯ. ಬಿಜೆಪಿ ಬದುಕಿರುವುದೇ ಆರ್‌ಎಸ್‌ಎಸ್‌ನಿಂದಾಗಿ. ಇದು ಬಿಟ್ಟರೆ ಬೇರೆ ಯಾವುದೇ ಅಸ್ತ್ರ ಅವರುಗಳ ಬಳಿ ಇಲ್ಲ. ಅವರಲ್ಲಿ ಶೇ.20ರಷ್ಟು ಜನ ಬಿಟ್ಟರೆ ಮಿಕ್ಕ ಎಲ್ಲರೂ ಕಲುಷಿತಗೊಂಡವರೇ. ಜನತಾ ದಳ, ಕಾಂಗ್ರೆಸ್ ಹಾಗೂ ಬೇರೆ,‌ ಬೇರೆ ಪಕ್ಷಗಳಿಂದ ಹೋಗಿರುವವರೇ ಅಲ್ಲಿರುವುದು” ಎಂದು ಟೀಕಿಸಿದರು.

ಕಾಂಗ್ರೆಸ್ ‌ನಾಯಕರು ದೆಹಲಿಗೆ ಹೋಗುತ್ತಿರುವುದರ ಬಗ್ಗೆ ಕೇಳಿದಾಗ, “ನಾಯಕರುಗಳು ಅವರವರ ಕೆಲಸಗಳಿಗೆ ಹೋಗುತ್ತಿರುತ್ತಾರೆ. ನಾನು ಬರುವ 5 ಅಥವಾ 6ನೇ ತಾರೀಖಿನಂದು ಬಿಹಾರಕ್ಕೆ ತೆರಳುತ್ತಿದ್ದೇನೆ. ಕೇಂದ್ರ‌ ನಗರಾಭಿವೃದ್ಧಿ ಸಚಿವರು ಸಭೆ ಕರೆದಿದ್ದಾರೆ. ಇದರ‌ ನಡುವೆ ಕಾವೇರಿ ನದಿ ನೀರಿನ ತೀರ್ಪಿದೆ. ಈ ಬಗ್ಗೆ ವಕೀಲರಿಂದ ವರದಿಯನ್ನು ತರಿಸಿಕೊಂಡಿದ್ದೇನೆ. ಪರಿಸ್ಥಿತಿ ‌ಹೀಗಿರುವಾಗ ದೆಹಲಿಗೆ ಹೋಗಬೇಕಾಗುತ್ತದೆ. ಅದಕ್ಕೆ ರಾಜಕೀಯ ಬಣ್ಣ ಕಟ್ಟಿದರೆ ಹೇಗೆ? ರಾಜಕೀಯ ಕಾರಣಕ್ಕೆ ಹೋಗಲಾಗುತ್ತದೆ ಎಂದು ತಿಳಿದುಕೊಳ್ಳುವುದು ಏತಕ್ಕೆ? ಶಾಸಕರು, ಸಚಿವರು ಅವರವರ ಕೆಲಸಗಳಿಗೆ ದೆಹಲಿಗೆ ಹೋಗಲಿ ಬಿಡಿ” ಎಂದರು.

“ಒಂದಷ್ಟು ಜನರಿಗೆ ಬಿಹಾರ, ರಿಜ್ವಾನ್, ಶ್ರೀನಿವಾಸ್ ಮಾನೆ ಸೇರಿದಂತೆ ಇತರಿಗೆ ಒರಿಸ್ಸಾ ರಾಜ್ಯಗಳ ಜವಾಬ್ದಾರಿ ನೀಡಿದ್ದಾರೆ. ಸಂಸದ ತುಕಾರಾಂ ಅವರಿಗೆ ಜಿಲ್ಲಾ ಕಾಂಗ್ರೆಸ್ ‌ಅಧ್ಯಕ್ಷರನ್ನು ನೇಮಕ‌ ಮಾಡಲು, ಸಂಘಟನೆ ವಿಚಾರವಾಗಿ ಕಳುಹಿಸಲಾಗಿದೆ. ಹಾಗೆಂದ ಮಾತ್ರಕ್ಕೆ ಎಲ್ಲದರಲ್ಲೂ ರಾಜಕೀಯ ಇರುತ್ತದೆಯೇ” ಎಂದು ಪ್ರಶ್ನಿಸಿದರು.

ಭಾರತಕ್ಕೆ ಜಯವಾಗಲಿ

ಮಹಿಳಾ ಕ್ರಿಕೆಟ್ ವಿಶ್ವಕಪ್ ಪೈನಲ್ ಪಂದ್ಯಾವಳಿ ಬಗ್ಗೆ ಕೇಳಿದಾಗ, “ಜಯ ಎಂದಿಗೂ ಭಾರತದ ಪರವಾಗಿ ಇರುತ್ತದೆ. ನಮ್ಮವರಿಗೆ ಶುಭವಾಗಲಿ” ಎಂದು ಮಹಿಳಾ ಕ್ರಿಕೆಟ್ ವಿಶ್ವಕಪ್‌ನಲ್ಲಿ ವನಿತೆಯರು ಗೆಲುವು ಸಾಧಿಸಲಿ ಎಂದು ಹಾರೈಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...