ಲೋಕಸಭೆ ಚುನಾವಣೆ| ರಾಹುಲ್ ಗಾಂಧಿ ವಿರುದ್ಧದ ಬಿಜೆಪಿ ಅಭ್ಯರ್ಥಿ ಮೇಲಿದೆ 242 ಪ್ರಕರಣಗಳು!

Date:

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಕೇರಳದ ವಯನಾಡಿನಲ್ಲಿ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಕಣಕ್ಕೆ ಇಳಿದಿದ್ದಾರೆ. ಆದರೆ ಈ ಬಿಜೆಪಿ ಅಭ್ಯರ್ಥಿಯ ಮೇಲೆ ಒಂದಲ್ಲ ಎರಡಲ್ಲ ಸುಮಾರು 242 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದೆ.

ಅಭ್ಯರ್ಥಿಯಾಗಿರುವವರು ಎಲ್ಲ ಮಾಹಿತಿ ನೀಡಬೇಕಾದ ಕಾರಣ ಸುರೇಂದ್ರನ್ ಅವರು ಇತ್ತೀಚೆಗೆ ತಮ್ಮ ಮೇಲಿರುವ ಎಲ್ಲ ಪ್ರಕರಣಗಳ ವಿವರಗಳನ್ನು ಪಕ್ಷದ ಮುಖವಾಣಿಯ ಮೂರು ಪುಟಗಳಲ್ಲಿ ಪ್ರಕಟಿಸಿದ್ದರು. ಅದೇ ರೀತಿ ಬಿಜೆಪಿಯ ಎರ್ನಾಕುಲಂ ಕ್ಷೇತ್ರದ ಅಭ್ಯರ್ಥಿ ಕೆ ಎಸ್ ರಾಧಾಕೃಷ್ಣನ್ ವಿರುದ್ಧ ಸುಮಾರು 211 ಪ್ರಕರಣಗಳಿವೆ.

ಇದನ್ನು ಓದಿದ್ದೀರಾ?  ಲೋಕಸಭೆ ಚುನಾವಣೆ | ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿಲ್ಲ ಮಾಜಿ ಸಿಎಂ ಉಮಾ ಭಾರತಿ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಕೇರಳ ರಾಜ್ಯ ಪ್ರಧಾನ ಕಾರ್ಯದರ್ಶಿ ಜಾರ್ಜ್ ಕುರಿಯನ್, “ಹೆಚ್ಚಿನ ಪ್ರಕರಣಗಳು 2018ರಲ್ಲಿ ನಡೆದ ಶಬರಿಮಲೆ ಪ್ರತಿಭಟನೆಗೆ ಸಂಬಂಧಿಸಿವೆ. ಹೆಚ್ಚಿನ ಪ್ರಕರಣಗಳು ನ್ಯಾಯಾಲಯದಲ್ಲಿವೆ. ಪಕ್ಷದ ಮುಖಂಡರು ಮುಷ್ಕರ ಅಥವಾ ಪ್ರತಿಭಟನೆಗೆ ಕರೆ ನೀಡಿದಾಗ ಪೊಲೀಸರು ಅದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸುತ್ತಾರೆ. ಅಭ್ಯರ್ಥಿಗಳ ವಿರುದ್ಧದ ಪ್ರಕರಣಗಳ ವಿವರಗಳನ್ನು ಪ್ರಕಟಿಸುವುದು ಕಡ್ಡಾಯವಾಗಿದೆ” ಎಂದು ಹೇಳಿದ್ದಾರೆ.

ಈ ನಡುವೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಶುಕ್ರವಾರ ಸುರೇಂದ್ರನ್, ರಾಧಾಕೃಷ್ಣನ್, ಬಿಜೆಪಿಯ ಅಲಪ್ಪುಳದ ಅಭ್ಯರ್ಥಿ ಶೋಭಾ ಸುರೇಂದ್ರನ್ ಮತ್ತು ವಟಕರ ಅಭ್ಯರ್ಥಿ ಪ್ರಫುಲ್ ಕೃಷ್ಣ ವಿರುದ್ಧದ ಪ್ರಕರಣಗಳ ವಿವರಗಳನ್ನು ಟ್ವೀಟ್ ಮಾಡಿದ್ದಾರೆ.

ಇದನ್ನು ಓದಿದ್ದೀರಾ?  ಲೋಕಸಭೆ ಚುನಾವಣೆ ಗೆಲ್ಲಲು ಮತ್ತೆ ‘ಪುಲ್ವಾಮಾ, ಬಾಲಕೋಟ್’ ರೀತಿಯ ದಾಳಿ?

“ಭಾರತದ ಕೆಲವು ಭಾಗಗಳಲ್ಲಿ ರಾಷ್ಟ್ರೀಯವಾದಿಯಾಗುವುದು ಕಷ್ಟ. ಇದು ದೈನಂದಿನ ಹೋರಾಟ. ಆದರೆ ಹೋರಾಟಕ್ಕೆ ಯೋಗ್ಯವಾಗಿದೆ” ಎಂದು ಹೇಳಿಕೊಂಡಿದ್ದಾರೆ. ಬಿಜೆಪಿ ರಾಜ್ಯ ಮುಖ್ಯಸ್ಥರ ವಿರುದ್ಧದ ಪ್ರಕರಣಗಳ ವಿವರವನ್ನು ನೀಡಿದ ಕುರಿಯನ್, ಶಬರಿಮಲೆ ಪ್ರತಿಭಟನೆಗೆ ಸಂಬಂಧಿಸಿದಂತೆ 237 ಪ್ರಕರಣಗಳು ಮತ್ತು ಕೇರಳದಲ್ಲಿ ವಿವಿಧ ಆಂದೋಲನಗಳಿಗೆ ಸಂಬಂಧಿಸಿದಂತೆ ಐದು ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದರು.

ಪತ್ತನಂತಿಟ್ಟ ಜಿಲ್ಲೆಯ ಬೆಟ್ಟದ ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶದ ಕುರಿತು ಸುಪ್ರೀಂ ಕೋರ್ಟ್ ಆದೇಶವನ್ನು ಜಾರಿಗೊಳಿಸುವ ಕೇರಳ ಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿ ಮತ್ತು ಅಂಗಸಂಸ್ಥೆಗಳು 2018 ರಲ್ಲಿ ರಾಜ್ಯಾದ್ಯಂತ ಪ್ರತಿಭಟನೆಗಳನ್ನು ಆಯೋಜಿಸಿದ್ದವು. ಇತರೆ ಪಕ್ಷದ ಅಭ್ಯರ್ಥಿಗಳ ಪ್ರಕರಣದ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...