ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ

Date:

ಪೊಲೀಸ್‌ ಅಧಿಕಾರಿ ಆಗಬೇಕೆಂಬ ರಾಜ್ಯದ ಯುವಜನರ ಭವಿಷ್ಯವನ್ನೇ ಹಾಳು ಮಾಡಿದ್ದ ಪಿಎಸ್‌ಐ ಹಗರಣದ ಕಿಂಗ್‌ಪಿನ್‌ ಆರ್‌.ಡಿ ಪಾಟೀಲ್ ಮನೆಗೆ ಕಲಬುರಗಿ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ ನೀಡಿದ್ದಾರೆ. ಆರ್‌.ಡಿ ಪಾಟೀಲ್ ಮನೆಯಲ್ಲಿ ಊಟೋಪಚಾರ ಮಾಡಿದ್ದಾರೆ. ಸಂದ ಜಾಧವ್ ನಡೆಯ ವಿರುದ್ಧ ಕಲಬುರ್ಗಿ ಮತದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಪಿಎಸ್‌ಐ ನೇಮಕಾತಿ ಹಗರಣದಿಂದಾಗಿ 58,000ಕ್ಕೂ ಹೆಚ್ಚು ಯುವಜನರ ಪೊಲೀಸ್‌ ಆಗುವ ಕನಸು ಕಮರಿ ಹೋಗಿದೆ. ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಆರ್‌.ಡಿ ಪಾಟೀಲ್ ಜೈಲು ಸೇರಿದ್ದಾರೆ. ಇದೀಗ, ಆತನ ಮನೆಗೆ ಉಮೇಶ್ ಜಾಧವ್ ಭೇಟಿ ನೀಡಿದ್ದು, ಬೆಂಬಲ ಕೇಳಿದ್ದಾರೆ.

ಉಮೇಶ್ ಜಾಧವ್ ಭೇಟಿಯು ಬಿಜೆಪಿಗೆ ತಿರುಗು ಬಾಣವಾಗಿ ಪರಿಣಮಿಸಿದೆ. ಭೇಟಿಯನ್ನು ಸಮರ್ಥಸಿಕೊಳ್ಳುವುದು ಜಿಲ್ಲೆಯ ಬಿಜೆಪಿ ಕಾರ್ಯಕರ್ತರಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ. ಆರೋಪಿ ಮನೆಗೆ ಭೇಟಿ ನೀಡಿರುವ ಜಾಧವ್, ಯಾವ ನೀಡಲು ಮುಂದಾಗಿದ್ದಾರೆ? ಎಂಬ ಪ್ರಶ್ನೆ ಕ್ಷೇತ್ರದಲ್ಲಿ ಎದುರಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...