ಸುಳ್ಳಿನ ರಾಜಕಾರಣ ಮಾಡುವ ಬಿಜೆಪಿಗೆ ಸತ್ಯ ಹೇಳಿ ಅಭ್ಯಾಸವೇ ಇಲ್ಲ: ಸಿಎಂ ಸಿದ್ದರಾಮಯ್ಯ

Date:

ಸುಳ್ಳುಗಳ ಮೇಲೆಯೇ ರಾಜಕಾರಣ ನಡೆಸುತ್ತಾ ಬಂದಿರುವ ಬಿಜೆಪಿಗೆ ಸತ್ಯ ಹೇಳಿ ಅಭ್ಯಾಸವೇ ಇಲ್ಲ. ಮೊನ್ನೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಬಂದು ಸುಳ್ಳುಗಳನ್ನು ಉದುರಿಸಿ ಹೋಗಿದ್ದರು. ಈಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಂದು ಹಳೆಯ ಸುಳ್ಳುಗಳನ್ನು ಪುನರಾವರ್ತಿಸಿದ್ದಾರೆ. ಆದರೆ ಕರ್ನಾಟಕದ ಪ್ರಜ್ಞಾವಂತ ಜನತೆಗೆ ಸತ್ಯ ತಿಳಿದಿದೆ. ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಾಡುತ್ತಿರುವ ಅನ್ಯಾಯಗಳು ಮನದಟ್ಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶನಿವಾರ ಬೆಂಗಳೂರಿಗೆ ಬಂದಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಮನ್‌ ಅವರು ರಾಜ್ಯದ ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರಕ್ಕೆ 697 ಕೋಟಿ ರೂ. ನೀಡಿರುವುದಾಗಿ ಹೇಳಿದ್ದಾರೆ. ಅವರ ಹೇಳಿಕೆ ಸುಳ್ಳು ಎಂದು ಪತ್ರಿಕಾ ಪ್ರಕಟಣೆ ನೀಡಿರುವ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ನಿರ್ಮಲಾ ಸೀತಾರಾಮನ್ ಅವರು ಸತ್ಯವನ್ನು ಬಚ್ಚಿಟ್ಟಿದ್ದಾರೆ. ಪ್ರಕೃತಿ ವಿಕೋಪದ ಪರಿಹಾರಕ್ಕೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ಎರಡು ನಿಧಿಗಳಿವೆ. ಮೊದಲನೆಯದು ಎಸ್ ಡಿಆರ್ ಎಫ್, ಎರಡನೆಯದ ಎನ್ ಡಿಆರ್ ಎಫ್. ಸಾಮಾನ್ಯ ಸ್ವರೂಪದ ಪ್ರಕೃತಿ ವಿಕೋಪಕ್ಕೆ ಎಸ್ ಡಿಆರ್ ಎಫ್ ನಿಂದ ಪರಿಹಾರ ನೀಡಲಾಗುವುದು. ಈ ನಿಧಿಯಡಿಯಲ್ಲಿ ನೀಡುವ ಪರಿಹಾರದಲ್ಲಿ ಶೇಕಡಾ 75ರಷ್ಟು ಪಾಲನ್ನು ಕೇಂದ್ರ ನೀಡಿದರೆ ಉಳಿದ ಶೇಕಡಾ 25ರ ಪಾಲನ್ನು ರಾಜ್ಯ ಸರ್ಕಾರ ನೀಡುತ್ತದೆ. ಇದರಡಿಯ ಪರಿಹಾರದ ಮೊತ್ತವನ್ನು ಕೇಂದ್ರ ಹಣಕಾಸು ಆಯೋಗ ನಿರ್ಧಾರ ಮಾಡುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರ್ನಾಟಕ ಈ ಬಾರಿ ಎಂದೂ ಕಂಡರಿಯದ ನಷ್ಟವನ್ನು ಬರಗಾಲದಿಂದಾಗಿ ಅನುಭವಿಸುತ್ತಿದೆ. ನಮ್ಮ 236 ತಾಲೂಕುಗಳ ಪೈಕಿ 223 ತಾಲೂಕುಗಳು ಬರಗಾಲಕ್ಕೀಡಾಗಿವೆ. ರಾಜ್ಯದ 48 ಲಕ್ಷ ಹೆಕ್ಟೇರ್ ಪ್ರದೇಶದ 34 ಲಕ್ಷ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ನಮ್ಮ ರೈತರಿಗೆ ಆಗಿರುವ ನಷ್ಟ ರೂ.37,000 ಕೋಟಿಗೂ ಹೆಚ್ಚಿನದ್ದಾಗಿದೆ. ಕೇಂದ್ರ ಸರ್ಕಾರದಿಂದ ನಾವು ಕೇಳುತ್ತಿರುವ ಪರಿಹಾರ ಕೇವಲ ರೂ.18,171 ಕೋಟಿ. ಈ ಪರಿಹಾರವನ್ನು ಎನ್‌ಡಿಆರ್‌ಎಫ್ ನಿಂದಲೆ ಕೊಡಬೇಕಾಗುತ್ತದೆ. ಈ ಸತ್ಯವನ್ನು ನಿರ್ಮಲಾ ಸೀತಾರಾಮನ್ ಅವರು ಬಚ್ಚಿಡುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ಬರಪರಿಹಾರಕ್ಕಾಗಿ ಎನ್ ಡಿಆರ್ ಎಫ್ ನಿಂದ ರೂ.18,171 ಕೋಟಿ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೆ. ಕೇಂದ್ರ ತಜ್ಞರ ತಂಡ ಬಂದು ಅಧ್ಯಯನ ನಡೆಸಿ ವರದಿಯನ್ನೂ ಕೊಟ್ಟಿದ್ದಾರೆ. ಅದರ ನಂತರ ನಾನು ಕಂದಾಯ ಸಚಿವರೊಂದಿಗೆ ಬಂದು ಪ್ರಧಾನಿ ಮತ್ತು ಗೃಹಸಚಿವರನ್ನು ಭೇಟಿ ಮಾಡಿದ್ದೆವು. ನಮ್ಮ ಉಪಮುಖ್ಯಮಂತ್ರಿಗಳು ಬಂದು ನಿಮ್ಮನ್ನೂ ಭೇಟಿ ಮಾಡಿದ್ದರು. ಹೀಗಿದ್ದರೂ ಬರಪರಿಹಾರದ ಬಗ್ಗೆ ತೀರ್ಮಾನ ಕೈಗೊಳ್ಳಬೇಕಾಗಿರುವ ಗೃಹ ಸಚಿವರ ನೇತೃತ್ವದ ಉನ್ನತಾಧಿಕಾರ ಸಮಿತಿ ಸಭೆಯನ್ನೇ ಇಲ್ಲಿಯ ವರೆಗೆ ನಡೆಸದೆ ಇರುವುದು ಕೇಂದ್ರ ಸರ್ಕಾರದ ಉದ್ದೇಶಪೂರ್ವಕ ಅನ್ಯಾಯ ಅಲ್ಲವೇ?” ಎಂದಿದ್ದಾರೆ.

“ತೆರಿಗೆ ಹಂಚಿಕೆ ಮತ್ತು ಜಿಎಸ್ ಟಿ ಪರಿಹಾರದಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಪರಿಗಣಿಸಿ ಕೇಂದ್ರ ಹಣಕಾಸು ಆಯೋಗ ₹5,495 ಕೋಟಿ ವಿಶೇಷ ಅನುದಾನ ನೀಡಬೇಕೆಂದು ಶಿಫಾರಸು ಮಾಡಿತ್ತು. ಇದಲ್ಲದೆ ಬೆಂಗಳೂರಿನ ಫೆರಿಫೆರಲ್‌ ರಿಂಗ್‌ ರಸ್ತೆಗೆ ರೂ.3,000 ಕೋಟಿ ಮತ್ತು ಕೆರೆಗಳು ಸೇರಿದಂತೆ ಬೆಂಗಳೂರು ಜಲಮೂಲ ಅಭಿವೃದ್ಧಿಗೆ ರೂ. 3000 ನೀಡಲು ಶಿಫಾರಸ್ಸು ಮಾಡಿತ್ತು. ಆದರೆ, ಈ ಶಿಫಾರಸ್ಸುಗಳನ್ನು ತಿರಸ್ಕರಿಸಿದ ಹಣಕಾಸು ಸಚಿವರು ರಾಜ್ಯಕ್ಕೆ ಸುಮಾರು ರೂ.11,495 ಕೋಟಿ ನೀಡದೆ ಅನ್ಯಾಯ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಸಚಿವೆ ನಿರ್ಮಾಲ ಸೀತಾರಾಮನ್ ಅವರು ಸುಳ್ಳು ಹೇಳುತ್ತಿದ್ದಾರೆ. ಹದಿನೈದನೇ ಹಣಕಾಸು ಆಯೋಗ ತನ್ನ ಮೊದಲ ವರದಿಯಲ್ಲಿ ಶಿಫಾರಸು ಮಾಡಿದ್ದ ರೂ.5,495 ಕೋಟಿ ಪರಿಹಾರದ ಉಲ್ಲೇಖ ಅಂತಿಮ ವರದಿಯಲ್ಲಿ ಇಲ್ಲ ಎಂದು ಸಚಿವರು ಹೇಳಿರುವುದು ಸತ್ಯಕ್ಕೆ ದೂರವಾದದ್ದು. 15ನೇ ಹಣಕಾಸು ಆಯೋಗ ಪ್ರಾಥಮಿಕ ಮತ್ತು ಅಂತಿಮ ವರದಿ ನೀಡಿಲ್ಲ. 2020-21ರಲ್ಲಿ ಒಂದು ವರ್ಷಕ್ಕೆ ಸೀಮಿತವಾದ ವರದಿಯನ್ನು ನೀಡಿದ್ದ ಹಣಕಾಸು ಆಯೋಗ 2021-26ರ ಅವಧಿಗೆ ಎರಡನೇ ವರದಿಯನ್ನು ನೀಡಿತ್ತು. ಮೊದಲ ವರದಿಯ ಯಾವ ಅಂಶಗಳನ್ನೂ ಎರಡನೇ ವರದಿಯಲ್ಲಿ ಸೇರಿಸಿಲ್ಲ. ಈ ಸತ್ಯವನ್ನು ಹಣಕಾಸು ಸಚಿವರು ಬಚ್ಚಿಟ್ಟು ಸುಳ‍್ಳು ಮಾಹಿತಿ ನೀಡುತ್ತಿದ್ದಾರೆ” ಎಂದು ಹೇಳಿದ್ದಾರೆ.

“ನಿರ್ಮಲಾ ಸೀತಾರಾಮನ್ ಅವರು ಮತ್ತೆ ಮತ್ತೆ ಬಂದು ಸುಳ್ಳು ಹೇಳುವ ಶ್ರಮ ತೆಗೆದುಕೊಳ್ಳಬೇಡಿ. ಒಂದೇ ಒಂದು ಬಾರಿ ಮುಖಾಮುಖಿ ಚರ್ಚೆಗೆ ಬಂದು ಬಿಡಿ, ರಾಜ್ಯದ ಆರುವರೆ ಕೋಟಿ ಜನತೆಯ ಸಮಕ್ಷಮದಲ್ಲಿ ಬಹಿರಂಗ ಚರ್ಚೆಯಲ್ಲಿ ಪಾಲ್ಗೊಳ್ಳುವ ಪುಣ್ಯದ ಕೆಲಸ ಮಾಡಿಬಿಡಿ. ಯಾರದ್ದು ಸತ್ಯ, ಯಾರದ್ದು ಸುಳ್ಳು ಎನ್ನುವುದನ್ನು ಜನರೇ ತೀರ್ಮಾನಿಸಲಿ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...