ಸೋಲಿನ ಸತ್ಯ ಒಪ್ಪಿಕೊಳ್ಳದಿದ್ದರೆ ಬಿಜೆಪಿ ಆತ್ಮವಂಚನೆ ಮಾಡಿಕೊಂಡಂತೆ: ಕಾಂಗ್ರೆಸ್‌

Date:

2023ರ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಬಿಜೆಪಿಯು ರಾಜ್ಯದ ಹಲವು ಕಡೆಗಳಲ್ಲಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಆತ್ಮಾವಲೋಕನ ಮಾಡಿಕೊಳ್ಳಲು ಮುಂದಾಗಿದೆ. ಆತ್ಮಾವಲೋಕನ ಸಭೆಯಲ್ಲಿ ನಾಯಕರ ವಿಭಿನ್ನವಾದ ಹೇಳಿಕೆಗಳ ಕುರಿತು ಕಾಂಗ್ರೆಸ್‌ ಟೀಕೆ ಮಾಡಿದೆ.

ಕರ್ನಾಟಕದಲ್ಲಿ ಈ ಹಿಂದೆ ಆಪರೇಷನ್‌ ಕಮಲ ಮೂಲಕ ಅಧಿಕಾರಕ್ಕೆ ಬಂದಿದ್ದ ಬಿಜೆಪಿಯು ತನ್ನ ಆಡಳಿತ ಅವಧಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ಆರೋಪ, ಹಗರಣಗಳನ್ನು ಮೈಮೇಲೆ ಎಳೆದುಕೊಂಡಿತ್ತು. ಬೆಲೆ ಏರಿಕೆ, ಭ್ರಷ್ಟಾಚಾರ, ಆಡಳಿತ ವಿರೋಧಿ ಅಲೆಯಿಂದಾಗಿ ಬಿಜೆಪಿ ಸೋಲು ಅನುಭವಿಸಿತ್ತು.

ಬಿಜೆಪಿಯ ಆತ್ಮಾವಲೋಕನ ಸಭೆಯಲ್ಲಿ ಬಿಜೆಪಿ ನಾಯಕರ ಹೇಳಿಕೆಗಳ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್, “ಬಿಜೆಪಿಯ ಒಂದು ಬಣ ಹೊಂದಾಣಿಕೆ ರಾಜಕೀಯದಿಂದ ನಮಗೆ ಸೋಲಾಯಿತು ಎನ್ನುತ್ತಿದೆ. ಮತ್ತೊಂದು ಬಣ ಕಾಂಗ್ರೆಸ್ ಗ್ಯಾರಂಟಿಗಳಿಂದ ನಮಗೆ ಸೋಲಾಯ್ತು ಎನ್ನುತ್ತಿದೆ. ಎರಡೂ ಬಣದವರು ಸತ್ಯ ಹೇಳಲು, ಒಪ್ಪಿಕೊಳ್ಳಲು ತಯಾರಿಲ್ಲ” ಎಂದು ಕುಟುಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“40% ಕಮಿಷನ್ ಭ್ರಷ್ಟಾಚಾರದಿಂದ, ದುರಾಡಳಿತದಿಂದ, ಜನಪರ ಚಿಂತನೆಗಳು ಇಲ್ಲದಿರುವುದರಿಂದ, ಹಗರಣಗಳಿಂದ ಸೋಲಾಗಿದ್ದನ್ನು ಒಪ್ಪಿಕೊಳ್ಳದಿದ್ದರೆ ಬಿಜೆಪಿಯದ್ದು ಆತ್ಮಾವಲೋಕನ ಆಗುವುದಿಲ್ಲ, ಆತ್ಮ ವಂಚಕತನ ಆಗುತ್ತದೆ” ಎಂದು ತಿರುಗೇಟು ನೀಡಿದೆ.

ಬಿಜೆಪಿ ಸಂವಿಧಾನ ಪರವೋ? ಸಮಾಜಘಾತಕರ ಪರವೋ?

ಸಚಿವ ಪ್ರಿಯಾಂಕ್‌ ಖರ್ಗೆ ಅವರು ನೀಡಿದ್ದ, ಬಕ್ರೀದ್‌ ಸಂದರ್ಭದಲ್ಲಿ ಗೋ ರಕ್ಷಣೆ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯ ಹೇಳಿಕೆಗೆ ಬಿಜೆಪಿ ನೀಡಿದ್ದ ಪ್ರತಿಕ್ರಿಯೆಗೆ ಕಾಂಗ್ರೆಸ್‌ ತಿರುಗೇಟು ನೀಡಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್, “ಬಿಜೆಪಿಯ ಐಟಿ ಸೆಲ್ ಮೂಢರಿಗೆ ಕನ್ನಡ ಬರುವುದಿಲ್ಲ ಎಂದೆನಿಸುತ್ತದೆ. ಕಾನೂನು ಉಲ್ಲಂಘಿಸುವವರ, ಕಾನೂನನ್ನು ಕೈಗೆತ್ತಿಕೊಳ್ಳುವವರ ವಿರುದ್ಧ ಕ್ರಮ ಜರುಗಿಸಿ ಎಂದರೆ ಬಿಜೆಪಿಗೆ ಉರಿ ಬಿದ್ದಿರುವುದೇಕೆ? ಬಿಜೆಪಿ ಸಂವಿಧಾನ, ಕಾನೂನಿನ ಪರವೋ? ಸಮಾಜಘಾತಕರ ಮತ್ತು ಕೊಲೆಗಡುಕರ ಪರವೋ ಕಾನೂನನ್ನು ಪಾಲಿಸಿ ಎಂದರೆ ಬಿಜೆಪಿಗೆ ಕಸಿವಿಸಿ ಉಂಟಾಗುವುದೇಕೆ?” ಎಂದು ಕಟುವಾಗಿ ಪ್ರಶ್ನಿಸಿದೆ.

ಪಿಜೆಪಿ ಹೇಳಿದ್ದೇನು?

ಸಚಿವ ಪ್ರಿಯಾಂಕ್‌ ಖರ್ಗೆ ಅವರ ಹೇಳಿಕೆ ಕುರಿತು ಟ್ವೀಟ್‌ ಮಾಡಿದ್ದ ಬಿಜೆಪಿ, “ಭಾರತ ಸಂವಿಧಾನದ 48 ನೇ ವಿಧಿಯು ಪ್ರಾಣಿಗಳನ್ನು, ವಿಶೇಷವಾಗಿ ಸಾರ್ವಜನಿಕ ಸ್ಥಳಗಳಲ್ಲಿ ವಧೆ ಮಾಡುವುದನ್ನು ಸ್ಪಷ್ಟವಾಗಿ ನಿಷೇಧಿಸುತ್ತದೆ. ಆದರೂ ಪ್ರಿಯಾಂಕ್‌ ಖರ್ಗೆ ಅಕ್ರಮ ಗೋ ಹತ್ಯೆಯನ್ನು ಉತ್ತೇಜಿಸುವ ಮೂಲಕ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಗೋ ಹತ್ಯೆ ತಡೆಯುವವರನ್ನು ಬಂಧಿಸುವಂತೆ ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ” ಎಂದು ಆರೋಪಿಸಿತ್ತು.

ಈ ಸುದ್ದಿ ಓದಿದ್ದೀರಾ? ಬಿಜೆಪಿಗೆ ಕರೆತಂದ ಕಾಂಗ್ರೆಸ್ಸಿಗರಿಂದ ಅನುಭವಿಸುತ್ತಿದ್ದೇವೆ, ಬಾಲ ಕಟ್ ಮಾಡುತ್ತೇವೆ: ಕೆ ಎಸ್‌ ಈಶ್ವರಪ್ಪ

ಮುಂದುವರಿದು, “ಸ್ವಯಂಘೋಷಿತ ಸಂವಿಧಾನ ತಜ್ಞ ಸಿದ್ದರಾಮಯ್ಯ ಅವರು, ಇದು ಬಾಬಾ ಸಾಹೇಬರ ಭಾರತೀಯ ಸಂವಿಧಾನವನ್ನು ಉಲ್ಲಂಘಿಸುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ವಿವರಿಸಬೇಕು. ಇಲ್ಲದಿದ್ದರೆ, ಇಬ್ಬರೂ ಭಾರತೀಯ ಸಂವಿಧಾನದ ಬಗ್ಗೆ ಶಿಕ್ಷಣ ಪಡೆಯಬೇಕು” ಎಂದು ಬಿಜೆಪಿ ಟ್ವೀಟ್ ಮಾಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...