ನರೇಂದ್ರ ಮೋದಿ ಯಾವುದರಲ್ಲಿ ತಿರುಗಾಡ್ತಾರೆ ಎಂದು ಬಿಜೆಪಿಯವರಲ್ಲಿ ಕೇಳಿ: ವಿಮಾನ ಪ್ರಯಾಣ ಟೀಕೆಗೆ ಸಿಎಂ ಗರಂ

Date:

ರಾಜ್ಯದಲ್ಲಿ ಬರಗಾಲವಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹಮದ್, ಕೃಷ್ಣಬೈರೇಗೌಡ ಐಷಾರಾಮಿ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಬರವಿದ್ದರೆ, ಆಕಾಶದಲ್ಲಿ ದೊರೆ ತೇಲಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ, ವಿಪಕ್ಷಗಳ ಮುಖಂಡರು ಟೀಕಿಸುತ್ತಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, “ನರೇಂದ್ರ ಮೋದಿಯವರು ಯಾವ ವಿಮಾನದಲ್ಲಿ ತಿರುಗಾಡ್ತಾರೆ ಎಂದು ಬಿಜೆಪಿಯವರಲ್ಲಿ ಕೇಳಿ” ಎಂದು ತಿರುಗೇಟು ನೀಡಿದ್ದಾರೆ.

ಇಂದು ಬೆಳಗ್ಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರು ಕೇಳಿದ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿಯವರು ನಡೆಸುತ್ತಿರುವ ಟೀಕೆಯ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಖಾರವಾಗಿಯೇ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, “ಪ್ರಧಾನಿ ನರೇಂದ್ರ ಮೋದಿಯವರು ಯಾವುದರಲ್ಲಿ ತಿರುಗಾಡ್ತಾರೆ? ನನಗೆ ಕೇಳಿದ ಪ್ರಶ್ನೆಯನ್ನೇ ಬಿಜೆಪಿಯವರಿಗೆ ಕೇಳಿ. 60 ಸೀಟಿನ ಸಾಮರ್ಥ್ಯವಿರುವ ವಿಮಾನದಲ್ಲಿ ಒಬ್ಬರೇ ತಿರುಗಾಡ್ತಾರಲ್ಲ. ಅದಕ್ಕೆ ಬಿಜೆಪಿಯವರು ಏನಂತಾರೆ?” ಎಂದು ಪತ್ರಕರ್ತರಿಗೆ ಮರು ಪ್ರಶ್ನೆ ಹಾಕಿದರು.

ಸಂಸತ್ತಿನಲ್ಲಿ ದೊಡ್ಡ ಸಂಖ್ಯೆಯಲ್ಲಿ ಸಂಸದರನ್ನು ಅಮಾನತ್ತು ಮಾಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ. ಲೋಕಸಭೆಯ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಸದರನ್ನು ಅಮಾನತ್ತು ಮಾಡಿರಲಿಲ್ಲ. ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಕೇಂದ್ರ ಸರ್ಕಾರದವರು ಪ್ರಭಾಪ್ರಭುತ್ವವನ್ನು ಹಾಗೂ ಜನರ ಭಾವನೆಯನ್ನು ಗೌರವಿಸುತ್ತಿಲ್ಲ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಜನರು ಸರಿಯಾದ ತೀರ್ಮಾನವನ್ನು ತೆಗೆದುಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.

ಬರಪರಿಹಾರ: ನಾಳೆ ಅಮಿತ್‌ ಷಾ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನ
ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಷಾ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿ ಕುರಿತು ವಿವರಿಸಲಾಗಿದ್ದು, ಡಿಸೆಂಬರ್‌ 23 ರಂದು ಅಮಿತ್‌ ಷಾ ಅವರ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಪರಿಹಾರ ಬಿಡುಗಡೆ ಕುರಿತು ತೀರ್ಮಾನವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಇದನ್ನು ಓದಿದ್ದೀರಾ? ರಾಜ್ಯದಲ್ಲಿ ಬರ; ಆಕಾಶದಲ್ಲಿ ತೇಲಾಡುತ್ತಿರುವ ದೊರೆ: ವಿಜಯೇಂದ್ರ ಲೇವಡಿ

ಪ್ರಧಾನ ಮಂತ್ರಿಯವರನ್ನು ಭೇಟಿಯಾದ ಸಂದರ್ಭದಲ್ಲಿ ಬರ ಪರಿಸ್ಥಿತಿಯ ಜೊತೆಗೆ ಮಹದಾಯಿ, ಮೇಕೆದಾಟು, ಭದ್ರಾಮೇಲ್ದಂಡೆ ಯೋಜನೆಗಳ ಬಗ್ಗೆ, ಹಾಗೂ ನರೇಗಾ ಯೋಜನೆಯಡಿ ಮಾನವ ದಿನಗಳನ್ನು 150 ದಿನಗಳಿಗೆ ವಿಸ್ತರಿಸುವ ಬಗ್ಗೆ ಶೀಘ್ರ ತೀರ್ಮಾನ ಕೈಗೊಳ್ಳಲು ಮನವಿ ಮಾಡಲಾಗಿದೆ. ಪ್ರಧಾನಿ ಮೋದಿಯವರು ಕರ್ನಾಟಕ ಬರ ಪರಿಸ್ಥಿತಿ ಹಾಗೂ ಮೇಲಿನ ಬೇಡಿಕೆಗಳ ಬಗ್ಗೆ ಸಮಾಧಾನಚಿತ್ತರಾಗಿ ಆಲಿಸಿ, ಸಂಬಂಧಪಟ್ಟ ಸಚಿವರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದರು.

ಮೈಸೂರಿನಲ್ಲಿ 6 ಜನರಿಗೆ ಕೋವಿಡ್ ತಗುಲಿದ್ದು, ಅವರಿಗೆ ಇತರೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಭವಿಷ್ಯದಲ್ಲಿ ಪ್ರವಾಸಿ ತಾಣಗಳನ್ನು ಬಂದ್ ಮಾಡುವ ಸಾಧ್ಯತೆ ಇದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಈಗ ಸದ್ಯದ ಪರಿಸ್ಥಿತಿಯಲ್ಲಿ ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ. ಆದರೆ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...