ಪ್ರಧಾನಿ ಮೋದಿ ಪ್ರಭಾವ ಮಂಕಾಗಿದೆ ಅನ್ನೋದಕ್ಕೆ ಬಿಜೆಪಿ ಹೀನಾಯವಾಗಿ ಸೋತಿರೋದೆ ಸಾಕ್ಷಿ : ಸಿಎಂ ಸಿದ್ದರಾಮಯ್ಯ

Date:

  • ಹಿಟ್ಲರ್‍‌ಗೆ ಬೈದರೆ ನಿಮಗೇಕೆ ಸಿಟ್ಟು: ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದ ಸಿಎಂ
  • ಜನರ ಜೇಬಿನಲ್ಲಿದ್ದ ಹಣ ಕಿತ್ತುಕೊಂಡಿದ್ದೇ ಬಿಜೆಪಿ ಸೋಲಿಗೆ ಕಾರಣ: ಸಿಎಂ

ದೇಶದಲ್ಲಿ ಬಿಜೆಪಿಯ ಅವನತಿ ಕರ್ನಾಟಕದಿಂದ ಶುರುವಾಗಿದೆ. ಪ್ರಧಾನಿ ಮೋದಿ ಪ್ರಭಾವ ಮಂಕಾಗಿದೆ ಅನ್ನೋದಕ್ಕೆ ರಾಜ್ಯದಲ್ಲಿ ಅವರು ಪ್ರಚಾರ ಮಾಡಿದ ಎಲ್ಲ ಕಡೆ ಬಿಜೆಪಿ ಹೀನಾಯವಾಗಿ ಸೋತಿರುವುದೇ ಇದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುತ್ತಾ ಮಾತನಾಡಿದ ಅವರು, ಬಿಜೆಪಿ ಮತ್ತು ನರೇಂದ್ರ ಮೋದಿಯವರು ಹೇಗೆ ಜನರಿಂದ ದೂರವಾಗುತ್ತಿದೆ, ಜನ ವಿರೋಧಿ ಆಗುತ್ತಿದೆ ಎನ್ನುವುದನ್ನು ಬಿಡಿ ಬಿಡಿಯಾಗಿ ಬಿಚ್ಚಿಟ್ಟರು.

ವಿಧಾನಸಭಾ ಚುನಾವಣೆಯ ವೇಳೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿಯವರು 28 ಬಾರಿ ಬಂದರು. ಹಿಂದಿನ ಯಾವ ಪ್ರಧಾನಿಗಳೂ ರಾಜ್ಯಗಳ ಚುನಾವಣೆ ವೇಳೆ ಹೀಗೆ ವರ್ತಿಸಿರಲಿಲ್ಲ. ಉಳಿದ ಪ್ರಧಾನಿಗಳಿಗೆ ದೇಶವನ್ನು ಮುನ್ನಡೆಸುವುದು ಪ್ರಥಮ ಆದ್ಯತೆ ಆಗಿರುತ್ತಿತ್ತು. ಬರೀ ಚುನಾವಣೆಗಳನ್ನು ಮಾಡುತ್ತಾ ಓಡಾಡುತ್ತಿರಲಿಲ್ಲ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಧಾನಸಭೆ ಚುನಾವಣೆಯಲ್ಲಿ ಮೋದಿ ಅವರು ರೋಡ್ ಶೋ ನಡೆಸಿದ, ಪ್ರಚಾರ ನಡೆಸಿದ ಕ್ಷೇತ್ರಗಳಲ್ಲಿ ಮತ್ತು ಸುತ್ತಮುತ್ತಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಸ್ಪಷ್ಟವಾದ ಬಹುಮತದಿಂದ ಗೆದ್ದಿದೆ. ಹೀಗಾಗಿ ಮೋದಿ ಅವರ ಪ್ರಭಾವ ಮಂಕಾಗುತ್ತಿರುವುದನ್ನು ನೀವು ಒಪ್ಪಿಕೊಳ್ಳಿ. ಇನ್ಮೇಲೆ ಮೋದಿ ಅವರ ಮೇಲೆ ಅವಲಂಬಿತರಾಗಬೇಡಿ ಎಂದು ಪರಿಷತ್‌ನ ಬಿಜೆಪಿ ಸದಸ್ಯರಿಗೆ ತಿಳಿಸಿದರು.

ಜನರ ಜೇಬಿನಲ್ಲಿರುವುದನ್ನು ಕಿತ್ತುಕೊಂಡಿರಿ
ಕಾಂಗ್ರೆಸ್ ಗೆಲುವಿಗೆ ಕಾರಣವಾದ ಸಂಗತಿಗಳನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, “ಕಾಂಗ್ರೆಸ್ ಜನರ ಜೇಬಿನಲ್ಲಿ ಹಣ ಇರಬೇಕು ಎನ್ನುವ ಉದ್ದೇಶದಿಂದ ಐದು ಗ್ಯಾರಂಟಿಗಳನ್ಮು ಘೋಷಿಸಿ, ಜಾರಿ ಮಾಡಿತು. ಬಡವರು-ಮಧ್ಯಮ ವರ್ಗದವರ ಜೇಬಿನಲ್ಲಿ ಹಣ ಇದ್ದರೆ ನಾಡಿನ ಆರ್ಥಿಕತೆ ಬೆಳೆಯುತ್ತದೆ ಎನ್ನುವುದು ಕಾಂಗ್ರೆಸ್‌ನ ಬದ್ಧತೆ ಮತ್ತು ಸಿದ್ಧಾಂತ. ಆದರೆ ಬಿಜೆಪಿ ಜನರ ಜೇಬಿನಲ್ಲಿರುವ ಹಣ ಕಿತ್ತುಕೊಳ್ಳುವ ಮನಸ್ಥಿತಿ ಹೊಂದಿರುವ ಕಾರಣದಿಂದ ಹೀನಾಯವಾಗಿ ಸೋಲು ಕಾಣಬೇಕಾಯಿತು ಎಂದರು.

ಕನ್ನಡ ಮಣ್ಣಿನ ಸೌಹಾರ್ದ ಪರಂಪರೆಯ 2000 ವರ್ಷಗಳ ಮೌಲ್ಯವನ್ಮು ವಿವರಿಸಿದ ಮುಖ್ಯಮಂತ್ರಿಗಳು, ಪಂಪ “ಮನುಷ್ಯ ಜಾತಿ ತಾನೊಂದೇ ವಲಂ” ಎನ್ನುವ ಮೌಲ್ಯದಿಂದ ಕನ್ನಡ ಸಂಸ್ಕೃತಿಯನ್ನು ಅರಳಿಸಿದರು. ಹೀಗೆ ಪಂಪನಿಂದ ಹಿಡಿದು ಬಸವಣ್ಣನವರನ್ನು ಪ್ರಸ್ತಾಪಿಸಿ ಇವರೆಲ್ಲರ ಆಶಯಗಳೇ ನಮ್ಮ ಸಂವಿಧಾನದಲ್ಲಿದೆ. ಆದರೆ ತಾನು ಮಾತ್ರ ಶ್ರೇಷ್ಠ ಎನ್ನುವ ಹಿಟ್ಲರ್ ಒಬ್ಬ ಮತಾಂಧ. ಆತ ಮನುಷ್ಯ ವಿರೋಧಿ ಎಂದರು.

ಹಿಟ್ಲರ್ ಗೆ ಬೈದರೆ ನಿಮಗೇಕೆ ಸಿಟ್ಟು?
ಹಿಟ್ಲರ್ ತನ್ನ ತಿಕ್ಕಲುತನದಿಂದ ಹೇಗೆ ಮನುಷ್ಯರ ಮಾರಣಹೋಮಕ್ಕೆ ಕಾರಣನಾದ ಎಂದು ವಿವರಿಸುತ್ತಿದ್ದಾಗ ಬಿಜೆಪಿ ಸದಸ್ಯರು ಮುಖ್ಯಮಂತ್ರಿಗಳ ಮಾತಿಗೆ ಅಡ್ಡಿಪಡಿಸಿದರು. ಈ ವೇಳೆ ಮುಖ್ಯಮಂತ್ರಿಗಳು, ‘ಹಿಟ್ಲರ್ ಗೆ ಬೈದರೆ ನಿಮಗೇಕೆ ಸಿಟ್ಟು?” ಎಂದು ಅಡ್ಡಿಪಡಿಸಿದ್ದನ್ನು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...