ಕಾಲ್ತುಳಿತ ವಿಶೇಷ ಅಧಿವೇಶನಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್ ಸರ್ಕಾರ ನಿರಾಕರಿಸುತ್ತಿರುವುದೇಕೆ?

Date:

ಐಪಿಎಲ್‌ನಲ್ಲಿ ಆರ್‌ಸಿಬಿ ಗೆದ್ದ ಬಳಿಕ ನಡೆದ ಸಂಭ್ರಮಾಚಾರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನವನ್ನು ಕರೆಯುವಂತೆ ವಿಪಕ್ಷ ಬಿಜೆಪಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಆದರೆ ಕಾಂಗ್ರೆಸ್ ಸರ್ಕಾರ ಮಾತ್ರ ವಿಶೇಷ ಅಧಿವೇಶನ ನಡೆಸಲು ನಿರಾಕರಿಸಿದೆ.

ರಾಜ್ಯ ಸರ್ಕಾರ ವಿಶೇಷ ಅಧಿವೇಶನಕ್ಕೆ ಹಿಂದೇಟು ಹಾಕುತ್ತಿದ್ದಂತೆ ಕಾಲ್ತುಳಿತ ವಿಶೇಷ ಅಧಿವೇಶನಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ನಡೆಸಲು ಮುಂದಾಗಿದೆ. ನಾಳೆ(ಜೂನ್ 17) ಪ್ರತಿಭಟನೆ ನಡೆಯಲಿದೆ. ವಿಪಕ್ಷ ಬಿಜೆಪಿ ಕಾಲ್ತುಳಿತದ ಹೊಣೆಯನ್ನು ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರಾಜೀನಾಮೆ ನೀಡಬೇಕೇಂದೂ ಆಗ್ರಹಿಸಿದೆ.

ಇದನ್ನು ಓದಿದ್ದೀರಾ? ಸರ್ಕಾರದ ಹಲವಾರು ಉದ್ಧಟತನಗಳೇ ಕಾಲ್ತುಳಿತಕ್ಕೆ ಕಾರಣ: ಹೆಚ್‌ ಡಿ ಕುಮಾರಸ್ವಾಮಿ ಆರೋಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಉಂಟಾಗಿ ಒಟ್ಟು 11 ಮಂದಿ ಸಾವನ್ನಪ್ಪಿದ್ದರು. ರಾಜ್ಯ ಸರ್ಕಾರ ಅಷ್ಟು ತರಾತುರಿಯಲ್ಲಿ ಈ ವಿಜಯೋತ್ಸವಕ್ಕೆ ಅವಕಾಶ ನೀಡಿರುವುದೇ ಈ ಕಾಲ್ತುಳಿತಕ್ಕೆ ಕಾರಣ ಎಂದು ವಿಪಕ್ಷಗಳು ಆರೋಪಿಸಿವೆ. ಈ ದುರಂತದ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ನಡೆಸುವಂತೆ ವಿಪಕ್ಷ ನಾಯಕ ಆರ್‌.ಅಶೋಕ್ ಅವರು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದರು.

ಭವಿಷ್ಯದಲ್ಲಿ ಈ ರೀತಿಯ ದುರಂತ ನಡೆಯುವುದನ್ನು ತಡೆಯಲು ಅಗತ್ಯ ಕ್ರಮಗಳ ಬಗ್ಗೆ ಅಧಿವೇಶನದಲ್ಲಿ ಚರ್ಚೆ ನಡೆಸಬೇಕಿದೆ. ಮೂರು ದಿನಗಳ ತುರ್ತು ಅಧಿವೇಶನ ಕರೆಯಬೇಕು. ಕಾಲ್ತುಳಿತದ ಬಗ್ಗೆ ಸಂಪೂರ್ಣ ತನಿಖೆ ನಡೆಯಬೇಕು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಸಂತ್ರಸ್ತ ಕುಟುಂಬಗಳಿಗೆ ಪರಿಹಾರದ ವ್ಯವಸ್ಥೆ ಬಗ್ಗೆ ಚರ್ಚಿಸಬೇಕು ಎಂದು ಆರ್ ಅಶೋಕ್ ಪತ್ರದಲ್ಲಿ ಉಲ್ಲೇಖಿಸಿದ್ದರು.

ಆದರೆ ಕಾಂಗ್ರೆಸ್ ಸರ್ಕಾರ ಮಾತ್ರ ವಿಶೇಷ ಅಧಿವೇಶನಕ್ಕೆ ನಿರಾಕರಿಸಿದೆ. ಮುಂಗಾರು ಅಧಿವೇಶನವು ಜುಲೈ ತಿಂಗಳ ಮೊದಲ ವಾರ ಅಥವಾ ಎರಡನೇ ವಾರದಲ್ಲಿ ನಡೆಯಲಿದೆ. ಈ ಕಾರಣದಿಂದಾಗಿ ಮತ್ತೆ ವಿಶೇಷ ಅಧಿವೇಶನ ನಡೆಸುವ ಅಗತ್ಯ ಏನಿಲ್ಲ ಎಂದು ಸರ್ಕಾರ ಹೇಳಿಕೊಂಡಿದೆ. ಆದರೆ ಪಹಲ್ಗಾಮ್ ಬಗ್ಗೆ ವಿಶೇಷ ಅಧಿವೇಶನ ನಡೆಸದ ಕೇಂದ್ರ ಸರ್ಕಾರವನ್ನು ಪ್ರಶ್ನಿಸುವ ಕಾಂಗ್ರೆಸ್ ಇದೀಗ ಕರ್ನಾಟಕದಲ್ಲಿ ವಿಶೇಷ ಅಧಿವೇಶನಕ್ಕೆ ಹಿಂದೇಟು ಹಾಕುತ್ತಿರುವುದು ಚರ್ಚೆಗೆ ಗ್ರಾಸವಾಗುತ್ತಿದೆ.

ಇನ್ನೊಂದೆಡೆ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ವಾಗ್ದಾಳಿ ನಡೆಸಲು ವಿರೋಧ ಪಕ್ಷಗಳು ಕಾಯುತ್ತಿದೆ. ಅದಕ್ಕಾಗಿ ಈ ವಿಶೇಷ ಅಧಿವೇಶನದ ಒತ್ತಡ ಹೇರುತ್ತಿದೆ. ಇನ್ನು ಒಂದು ತಿಂಗಳಲ್ಲೇ ಮುಂಗಾರು ಅಧಿವೇಶನ ಇರುವ ಕಾರಣ ಸರ್ಕಾರ ವಿಶೇಷ ಅಧಿವೇಶನ ನಡೆಸುವುದು ಬಹುತೇಕ ಅಸಾಧ್ಯ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...