ಅಘೋಷಿತ ತುರ್ತು ಪರಿಸ್ಥಿತಿ | ಅಂಬೇಡ್ಕರ್ ರಚಿತ ಸಂವಿಧಾನ ನಾಶಕ್ಕೆ ಬಿಜೆಪಿ ಪಿತೂರಿ: ಶರದ್ ಪವಾರ್

Date:

ಬಿಜೆಪಿ, ಆರ್‌ಎಸ್‌ಎಸ್‌ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಕೇಂದ್ರ ಸಚಿವ, ಎನ್‌ಸಿಪಿ ನಾಯಕ ಶರದ್ ಪವಾರ್, “ದೇಶದಲ್ಲಿ ಪ್ರಸ್ತುತ ಅಘೋಷಿತ ತುರ್ತು ಪರಿಸ್ಥಿತಿಯಿದೆ. ಡಾ. ಬಿ. ಆರ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ನಾಶ ಮಾಡುವ ಪಿತೂರಿ ನಡೆಯುತ್ತಿದೆ” ಎಂದು ಆರೋಪಿಸಿದರು.

ವರ್ದಾ ಲೋಕಸಭೆ ಕ್ಷೇತ್ರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಅಮರ್ ಕಾಳೆ ಪರ ಪ್ರಚಾರದಲ್ಲಿ ಮಾತನಾಡಿದ ಶರದ್ ಪವಾರ್, “ಬಿಜೆಪಿ ನಮ್ಮ ದೇಶವನ್ನು ನಾಶ ಮಾಡುತ್ತಿದೆ. ಸ್ವತಂತ್ರ್ಯ, ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಕೂಡಾ ನಾಶ ಮಾಡುತ್ತಿದೆ. ನಮ್ಮ ಸಂವಿಧಾನ ಜನರಿಗೆ ನೀಡಿದ ಹಕ್ಕುಗಳ ರಕ್ಷಣೆ ಮಾಡಬೇಕಾದರೆ ಚುನಾವಣೆ ಅತೀ ಮುಖ್ಯವಾಗುತ್ತದೆ” ಎಂದು ಹೇಳಿದರು.

“ಅಘೋಷಿತ ತುರ್ತು ಪರಿಸ್ಥಿತಿ ನಮ್ಮ ದೇಶದಲ್ಲಿದೆ. ಈ ಸಂದರ್ಭದಲ್ಲಿ ಡಾ. ಬಿ ಆರ್‌ ಅಂಬೇಡ್ಕರ್ ರಚಿತ ಸಂವಿಧಾನವನ್ನು ನಾಶ ಮಾಡುವ ಸಿದ್ಧಾಂತ ಹೊಂದಿರುವ ಬಿಜೆಪಿ-ಆರ್‌ಎಸ್‌ಎಸ್ ಅನ್ನು ನಾವು ಸೋಲಿಸುವು ಅನಿವಾರ್ಯ, ಅಗತ್ಯ. ನಾವು ಅಲ್ಪಸಂಖ್ಯಾತರು ಸೇರಿದಂತೆ ದೇಶದ ಎಲ್ಲರ ಹಿತಾಸಕ್ತಿಯ ರಕ್ಷಣೆ ಮಾಡಬೇಕಾಗಿದೆ” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ನಿಮ್ಮದು ಬೇರೆ ಪಕ್ಷ, ಶರದ್ ಪವಾರ್ ಚಿತ್ರ, ಚಿಹ್ನೆ ಬಳಸುವುದೇಕೆ?; ಅಜಿತ್‌ ಬಣಕ್ಕೆ ಸುಪ್ರೀಂ ಪ್ರಶ್ನೆ

“ಅಧಿಕಾರದಲ್ಲಿರುವ ಬಿಜೆಪಿಯು ವಿಪಕ್ಷಗಳ ಮೇಲೆ ದಾಳಿ, ದೌರ್ಜನ್ಯ ನಡೆಸಲು ತಮ್ಮ ಅಧಿಕಾರದ ದುರ್ಬಳಕೆ ಮಾಡುತ್ತಿದೆ. ಸರ್ಕಾರವನ್ನು ವಿರೋಧಿಸಿದವರ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ. ಕೇಂದ್ರದ ವಿರುದ್ಧ ಮಾತನಾಡಿದ ಜಾರ್ಖಾಂಡ್ ಮುಖ್ಯಮಂತ್ರಿಯವರನ್ನು ಬಂಧಿಸಲಾಗಿದೆ” ಎಂದು ದೂರಿದರು.

ಇನ್ನು “ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕೇಂದ್ರ ಸರ್ಕಾರದ ನಿರ್ಧಾರಗಳಿಗೆ ಬೆಂಬಲ ನೀಡುತ್ತಿದ್ದರು. ಆದರೂ ಕೂಡಾ ಪ್ರಧಾನಿ ಮೋದಿಗೆ ಕೇಜ್ರಿವಾಲ್ ಅವರ ರಾಜಕೀಯ ನಿಲುವು ಇಷ್ಟವಿಲ್ಲ. ಅದಕ್ಕಾಗಿ ಈಗ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ಕೇಜ್ರಿವಾಲ್‌ ಅವರ ಸಂಪುಟದ ಮೂವರು ಸಚಿವರನ್ನೂ ಕೂಡಾ ಬಂಧಿಸಲಾಗಿದೆ” ಎಂದು ಹೇಳಿದರು.

“ಲೋಕಸಭೆ ಚುನಾವಣೆಯು ಹಲವಾರು ರೀತಿಯಲ್ಲಿ ಅತೀ ಮುಖ್ಯವಾಗಿದೆ. ಬದಲಾಗುತ್ತಿರುವ ಸಂವಿಧಾನದ ಉಳಿವಿಗಾಗಿ, ಜನರ ಹಿತಾಸಕ್ತಿ ರಕ್ಷಣೆಗಾಗಿ, ಹೀಗೆ ಬೇರೆ ಬೇರೆ ರೀತಿಯಲ್ಲಿ ಲೋಕಸಭೆ ಚುನಾವಣೆ ಅತೀ ಮುಖ್ಯ” ಎಂದು ಶರದ್ ಪವಾರ್ ಅಭಿಪ್ರಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...