ನಮ್ಮನ್ನು ಪ್ರಶ್ನಿಸುವ ಯಾವುದೇ ನೈತಿಕತೆ ಬಿಜೆಪಿಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

“ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಿರಲಿಲ್ಲ. ಹಾಗಿದ್ದಾಗ ಈಗ ನಮ್ಮನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಬಿಜೆಪಿಗರಿಗಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಭಾನುವಾರ (ಜ.18) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ನಾವು ಅಧಿಕಾರದಲ್ಲಿದ್ದಾಗ ಸುಮಾರು ಏಳೆಂಟು ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೆವು. ಅವರು ಅಧಿಕಾರದಲ್ಲಿದ್ದಾಗ ಯಾವುದಾದರೂ ಒಂದು ಪ್ರಕರಣವನ್ನಾದರೂ ಕೊಟ್ಟಿದ್ದರೆ ನಮ್ಮನ್ನು ಪ್ರಶ್ನಿಸಬಹುದಿತ್ತು” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಮುಖ್ಯಮಂತ್ರಿ ಸ್ಥಾನದ ಘನತೆ ಸಿದ್ದರಾಮಯ್ಯ ಅವರ ನಡವಳಿಕೆಯಿಂದ ದಿನೇ ದಿನೇ ಕುಗ್ಗುತ್ತಿದೆ: ವಿಜಯೇಂದ್ರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಲೋಕಸಭಾ ಚುನಾವಣೆಗೆ ಪ್ರಚಾರಕ್ಕೆ ಬಂದಾಗ ನಮಗೆ ಸಾರ್ವಜನಿಕ ಸಭೆ ನಡೆಸಲು ಎಲ್ಲೂ ಸ್ಥಳವನ್ನು ನೀಡಲಿಲ್ಲ. ಕೊನೆಗೆ ಕುರುಬರ ದೇವಸ್ಥಾನದ ಬಳಿ ಸಭೆ ನಡೆಸಿದೆವು. ಇವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಸರ್ವಾಧಿಕಾರದಲ್ಲಿ ನಂಬಿಕೆ ಇದೆ ಎನ್ನಲು ಇದೊಂದು ಉದಾಹರಣೆ ಸಾಕು. ಸಂಸದೀಯ ವ್ಯವಸ್ಥೆಯಲ್ಲಿ ಅವರಿಗೆ ನಂಬಿಕೆಯಿಲ್ಲ. ಗೂಂಡಾಗಿರಿ ಮಾಡುತ್ತಿದ್ದವರಿಂದ ನಾವು ಪಾಠ ಕಲಿಯಬೇಕಿಲ್ಲ” ಎಂದು ತಿಳಿಸಿದರು.

ಹಾಗೆಯೇ ಬಳ್ಳಾರಿ ಪ್ರಕರಣದ ಬಗ್ಗೆ ಬಿಜೆಪಿ ಜನಾಂದೋಲನ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ವಿರೋಧಪಕ್ಷದಲ್ಲಿರುವಾಗ ಯಾವ ಆಂದೋಲನ, ಪ್ರತಿಭಟನೆಗಳನ್ನು ಮಾಡುತ್ತಾರೆ ಎನ್ನುವುದು ಅವರ ಪಕ್ಷಕ್ಕೆ ಸೇರಿದ ವಿಚಾರ. ಅದಕ್ಕೆ ನಾವು ಉತ್ತರ ಕೊಡುತ್ತೇವೆ” ಎಂದರು.

“ಬಿಜೆಪಿಯವರಿಗೆ ಸಂಸ್ಕೃತಿ ಇಲ್ಲ ಎನ್ನುವುದೂ ಸ್ಪಷ್ಟವಾಗಿ ಗೊತ್ತಾಗುತ್ತದೆ. ಜನಾರ್ಧನ ರೆಡ್ಡಿಗೆ ಬಳ್ಳಾರಿಗೆ ಬರಬಾರದೆಂದು ಏಕೆ ಹೇಳಿದ್ದರು? ರಿಪಬ್ಲಿಕ್ ಆಫ್ ಬಳ್ಳಾರಿ ಎಂದು ವರ್ತಿಸಿದವರು ಯಾರು? ಲೋಕಾಯುಕ್ತರಾಗಿದ್ದಾಗ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ವರದಿ ಕೊಟ್ಟಿದ್ದಾರೆ” ಎಂದು ಶ್ರೀರಾಮುಲು, ಜನಾರ್ಧನ ರೆಡ್ಡಿಯವರು ಕಾಂಗ್ರೆಸ್ ನಾಯಕರನ್ನು ಏಕವಚನದಲ್ಲಿ ವಾಗ್ದಾಳಿ ಮಾಡಿರುವ ಬಗ್ಗೆ ಪ್ರತಿಕ್ರಿಯಿಸುತ್ತಾ ಹೇಳಿದರು.

ಇದನ್ನು ಓದಿದ್ದೀರಾ? ಬೀದರ್ | ಭೀಮಣ್ಣ ಖಂಡ್ರೆ ಅಂತ್ಯಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಆಗಮನ

ಇನ್ನು ಕಾಂಗ್ರೆಸ್ ರಿಪಬ್ಲಿಕ್ ಆಫ್ ಕರ್ನಾಟಕ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, “ಕಾಂಗ್ರೆಸ್ ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಅದರ ಆಶಯಗಳಲ್ಲಿ ನಂಬಿಕೆ ಇಟ್ಟಿರುವ ಪಕ್ಷ. ಜನಾಂದೋಲನದ ಹಿಂದೆ ರಾಜಕೀಯ ಉದ್ದೇಶ ಬಿಟ್ಟರೆ ಬೇರೇನಿದೆ” ಎಂದು ಪ್ರಶ್ನಿಸಿದರು.

ವಿಬಿ-ಜಿ ರಾಮ್ ಜಿ ಬಗ್ಗೆ ಅಧಿವೇಶನ ಆಯೋಜಿಸಿರುವುದು ರಾಜಕೀಯ ದುರ್ಬಳಕೆ ಎಂದು ಬಿಜೆಪಿ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ, “ಹೊಸ ವರ್ಷದಲ್ಲಿ ಜಂಟಿ ಅಧಿವೇಶನ ಕಡ್ಡಾಯವಾಗಿ ಕರೆಯಬೇಕು. ಸಂವಿಧಾನ ಇದನ್ನು ಸ್ಪಷ್ಟವಾಗಿ ಹೇಳಿದೆ. ಅದಕ್ಕಾಗಿ ಕರೆದಿದ್ದೇವೆ” ಎಂದು ಹೇಳಿದರು.

“ಮನರೇಗಾ ಮೂಲಕ ಉದ್ಯೋಗ ಖಾತ್ರಿ, ಶಿಕ್ಷಣ, ಮಾಹಿತಿ ಹಕ್ಕು ಆಹಾರ ಭದ್ರತೆ ತಂದದ್ದು ಯುಪಿಎ ಸರ್ಕಾರ. ಅದನ್ನು ಹಾಳು ಮಾಡಲು ಹೊರಟಿಸುವುದನ್ನು ಖಂಡಿಸಲು ವಿಶೇಷ ಅಧಿವೇಶನ ಕರೆಯಲಾಗಿದೆ. ವಿಬಿ-ಜಿ ರಾಮ್ ಜಿ (ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಅಜೀವಿಕ ಮಿಷನ್ ಗ್ರಾಮೀಣ) ಕಾರ್ಯಕ್ರಮವನ್ನು ರದ್ದು ಮಾಡಬೇಕೆಂದು ಒತ್ತಾಯಿಸಲಾಗುತ್ತಿದೆ. ಅದರರ್ಥ ರಾಮ್ ಅಲ್ಲ” ಎಂದು ಕುಟುಕಿದರು.

ಅಬಕಾರಿ ಡಿಸಿ ಮೇಲೆ ಲೋಕಾಯುಕ್ತ ದಾಳಿಯಾಗಿರುವ ಬಗ್ಗೆ ಹಾಗೂ ಅಬಕಾರಿ ಸಚಿವರ ಹೆಸರು ಪ್ರಸ್ತಾಪವಾಗಿರುವ ಬಗ್ಗೆ ಮಾತಾನಾಡಿ, “ಈ ಬಗ್ಗೆ ಕಾನೂನಿನ ಕ್ರಮಕ್ಕೆ ನಾವು ಅಡ್ಡಿಬರುವುದಿಲ್ಲ. 40% ಕಮಿಷನ್ ಪಡೆಯುತ್ತಾರೆ ಎಂದು ಗುತ್ತಿಗೆದಾರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಆರೋಪ ಮಾಡಿದ್ದರಲ್ಲ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...