ಮಹಾರಾಷ್ಟ್ರ | ಬಂಡಾಯ ಎದ್ದಿದ್ದ 40 ಮುಖಂಡರನ್ನು ಪಕ್ಷದಿಂದ ಹೊರದಬ್ಬಿದ ಬಿಜೆಪಿ

Date:

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ಸಿಗದ ಕಾರಣಕ್ಕಾಗಿ ಬಂಡಾಯ ಎದಿದ್ದ ಪಕ್ಷದ 40 ಮಂದಿ ಮುಖಂಡರು ಬಿಜೆಪಿ ಉಚ್ಚಾಟಿಸಿದೆ. 37 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 40 ಮಂದಿ ಮುಖಂಡರು ಮತ್ತು ಕಾರ್ಯಕರ್ತರು ಬಿಜೆಪಿಯಿಂದ ಉಚ್ಚಾಟನೆಗೊಂಡಿದ್ದಾರೆ.

ನವೆಂಬರ್ 20ರಂದು ಮಹಾರಾಷ್ಟ್ರ ವಿಧಾನಸಭೆಗೆ ಮತದಾನ ನಡೆಯಲಿದೆ. ರಾಜ್ಯದ ಇಟ್ಟು 288 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌, ಶಿವಸೇನೆ (ಉದ್ಧವ್ ಬಣ) ಮತ್ತು ಎನ್‌ಸಿಪಿ (ಶರದ್ ಬಣ)ದ ಮಹಾವಿಕಾಸ್ ಅಘಾಡಿ ಹಾಗೂ ಬಿಜೆಪಿ, ಶಿವಸೇನೆ (ಶಿಂಧೆ ಬಣ) ಮತ್ತು ಎನ್‌ಸಿಪಿ (ಅಜಿತ್ ಬಣ)ದ ಮಹಾಯುತಿ ನಡುವೆ ಪೈಪೋಟಿ ನಡೆಯುತ್ತಿದೆ. ಎರಡೂ ಮೈತ್ರಿಕೂಟಗಳು ಮೈತ್ರಿಯೊಳಗೆ ಕ್ಷೇತ್ರ ಹಂಚಿಕೊಂಡು ಚುನಾವಣೆ ಎದುರಿಸುತ್ತಿವೆ. ತಮ್ಮ ಅಭ್ಯರ್ಥಿಗಳನ್ನು ಘೋಷಿಸಿವೆ.

ಅಭ್ಯರ್ಥಿಗಳ ಪಟ್ಟಿಗಳು ಘೋಷಣೆಯಾದ ಬೆನ್ನಲ್ಲೇ, ಎಲ್ಲ ಪಕ್ಷಗಳಲ್ಲಿಯೂ ಬಂಡಾಯದ ಕಾವು ಭುಗಿಲೆದ್ದಿದೆ. ಬಿಜೆಪಿಯೂ ಹಲವು ಕ್ಷೇತ್ರಗಳಲ್ಲಿ ಟಿಕೆಟ್ ವಂಚಿತರಾದ ಆಕಾಂಕ್ಷಿಗಳಿಂದ ಬಂಡಾಯ ಎದುರಿಸುತ್ತಿದೆ. ಬಂಡಾಯ ಶಮನ ಮಾಡಲಾಗದೆ, ಹಲವು ಕ್ಷೇತ್ರಗಳಲ್ಲಿ ಪಕ್ಷದ 40ಕ್ಕೂ ಹೆಚ್ಚು ಮುಖಂಡರನ್ನು ಉಚ್ಚಾಟಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...