ಶಿವಮೊಗ್ಗದಲ್ಲಿ ಬಂಡಾಯ ಸ್ಪರ್ಧೆ ಹಿನ್ನೆಲೆ : ಬಿಜೆಪಿಯಿಂದ ಕೆ ಎಸ್‌ ಈಶ್ವರಪ್ಪ ಉಚ್ಚಾಟನೆ

Date:

ರಾಜ್ಯದ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆಎಸ್‌ ಈಶ್ವರಪ್ಪ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಇಂದು ಸಂಜೆ ಉಚ್ಚಾಟನೆ ಮಾಡಲಾಗಿದೆ.

ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ. ತಮ್ಮ ಮಗ ಕಾಂತೇಶ್‌ಗೆ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗದಿದ್ದಕ್ಕೆ ಆಕ್ರೋಶಗೊಂಡಿದ್ದ ಈಶ್ವರಪ್ಪ, ಶಿವಮೊಗ್ಗದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

ಬಿಜೆಪಿ ಶಿಸ್ತು ಸಮಿತಿ ಈ ನಿರ್ಧಾರ ಕೈಗೊಂಡಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಕೆಎಸ್‌ ಈಶ್ವರಪ್ಪ, ತಮ್ಮ ನಾಮಪತ್ರವನ್ನು ಹಿಂಪಡೆಯಲು ಇಂದು ಕೊನೆಯ ದಿನವಾಗಿತ್ತು. ಆದರೆ, ಈಶ್ವರಪ್ಪ ನಾಮಪತ್ರವನ್ನು ಹಿಂಪಡೆಯಲು ನಿರಾಕರಿಸಿದ ಕಾರಣ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದಿನ ಆರು ವರ್ಷಗಳ ಕಾಲ ಅವರು ಬಿಜೆಪಿ ಪಕ್ಷದಡಿ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಬಿಜೆಪಿಯ ಬಿವೈ ರಾಘವೇಂದ್ರ ಹಾಗೂ ಕಾಂಗ್ರೆಸ್‌ನ ಗೀತಾ ಶಿವರಾಜ್‌ಕುಮಾರ್‌ಗೆ ಎದುರಾಳಿಯಾಗಿ ಈಶ್ವರಪ್ಪ ಸ್ಪರ್ಧೆ ಮಾಡುತ್ತಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್.ಈಶ್ವರಪ್ಪ ಸೇರಿದಂತೆ 17 ಮಂದಿ ಅಂತಿಮವಾಗಿ ಕಣದಲ್ಲಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...