ರಾಜ್ಯದ ಗ್ಯಾರಂಟಿ ಯೋಜನೆ ಬಗ್ಗೆ ಬಿಜೆಪಿ ಸುಳ್ಳು ಜಾಹೀರಾತು, ಕ್ರಮಕ್ಕೆ ಚಿಂತನೆ:‌ ಸಚಿವ ಪರಮೇಶ್ವರ್

Date:

ಮಹಾರಾಷ್ಟ್ರ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಕರ್ನಾಟಕದ ಬಗ್ಗೆ ಅವಮಾನ ಆಗುವ ರೀತಿಯಲ್ಲಿ ಜಾಹೀರಾತು ನೀಡಿದವರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಗೃಹ ಡಾ. ಜಿ.ಪರಮೇಶ್ವರ್ ಹೇಳಿದರು.

ಸದಾಶಿವನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಹಾರಾಷ್ಟ್ರ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟವು ಗ್ಯಾರಂಟಿ ಕಾರ್ಡ್ ಬಿಡುಗಡೆ ಮಾಡಿದ ಬಳಿಕ ಬಿಜೆಪಿಯವರು ‘ಕರ್ನಾಟಕದಲ್ಲಿ ಐದು ಗ್ಯಾರಂಟಿ ಯೋಜನೆಗಳು ಅನುಷ್ಟಾನಗೊಂಡಿಲ್ಲ. ಮಹಾರಾಷ್ಟ್ರದಲ್ಲಿಯೂ ಅನುಷ್ಟಾನವಾಗುವುದಿಲ್ಲ’ ಎಂದು ಸುಳ್ಳು ಜಾಹೀರಾತು ನೀಡಿದ್ದಾರೆ. ಇದಕ್ಕೆ ಯಾವ ರೀತಿ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಕುರಿತು ಯೋಚಿಸುತ್ತಿದ್ದೇವೆ” ಎಂದರು.

“ನಮ್ಮ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳಿಗೆ ಬಜೆಟ್‌ನಲ್ಲಿ 56 ಸಾವಿರ ಕೋಟಿ ರೂ. ಮೀಸಲಿಟ್ಟು,
ಸಂಪೂರ್ಣವಾಗಿ ಅನುಷ್ಠಾನಗೊಳಿಸಿದೆ. ಇದಕ್ಕೆ ವಿರುದ್ಧವಾಗಿ ಇಡೀ ದೇಶದಲ್ಲಿ ಕರ್ನಾಟಕದ ಬಗ್ಗೆ ಅವಮಾನ ಆಗುವ ರೀತಿಯಲ್ಲಿ ಜಾಹೀರಾತು ಪ್ರಕಟಿಸಿದ್ದಾರೆ ಎಂದರೆ ನಾವು ಖಂಡಿತವಾಗಿ ಸಹಿಸುವುದಿಲ್ಲ. ಸಂಬಂಧಪಟ್ಟ ಐದು ಇಲಾಖೆಗಳು ಜಾಹೀರಾತು ನೀಡಿದವರ ಮೇಲೆ ಕ್ರಮ ತೆಗೆದುಕೊಳ್ಳಲು ದೂರು ನೀಡಬೇಕಾಗುತ್ತದೆ‌” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತುಮಕೂರಿನಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ ಹಮ್ಮಿಕೊಂಡಿಲ್ಲ. ತುಮಕೂರು ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ಹಾಗೂ ಅನೇಕ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಿಸಲಾಗುತ್ತದೆ. ಇದೇ ರೀತಿ ಎಂಟು ತಿಂಗಳ ಹಿಂದೆಯೂ ಕಾರ್ಯಕ್ರಮ ಮಾಡಲಾಗಿತ್ತು” ಎಂದು ತಿಳಿಸಿದರು‌.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಣಿಪುರ – ಭಾರತವನ್ನು ದೇಶವಾಗಿ ಉಳಿಸಿಕೊಳ್ಳಲು ಶಾಂತಿ, ಸೋದರತೆ ಅಗತ್ಯವೆಂದು ಪ್ರಧಾನಿ ಅರಿತಿರುವರೇ?

“ಬಿಜೆಪಿ ಮತ್ತು ಜೆಡಿಎಸ್‌ನವರು ಸರ್ಕಾರದಲ್ಲಿ ಅನುದಾನವಿಲ್ಲ, ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ ಎಂದು ಜನರಲ್ಲಿ ತಪ್ಪು ಮಾಹಿತಿಯನ್ನು ಹೇಳಿಕೊಂಡು ಬರುತ್ತಿದ್ದಾರೆ. ಎಲ್ಲ ಇಲಾಖೆಗಳಿಗೆ ಅನುದಾನ ಕೊಟ್ಟಿದ್ದೇವೆ. ಯೋಜನೆಗಳನ್ನು ಜನಸಮುದಾಯಕ್ಕೆ ತಲುಪಿಸುತ್ತಿದ್ದೇವೆ ಎಂಬ ಸಂದೇಶ ಈ ಕಾರ್ಯಕ್ರಮದಿಂದ ಹೋಗುತ್ತದೆ” ಎಂದರು‌.

“ಕಳೆದೊಂದು ವಾರದಿಂದ ನಕ್ಸಲ್ ಚಟುವಟಿಕೆಗಳ ಮೇಲೆ ಪೊಲೀಸರು ಮೇಲೆ ನಿಗಾವಹಿಸಿದ್ದರು‌. ಕಳೆದ ವಾರ ರಾಜು ಮತ್ತು ಲತಾ ಎಂಬ ನಕ್ಸಲರು ಪತ್ತೆ ಆಗಿದ್ದ ಹಿನ್ನೆಲೆಯಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದರು. ನಿನ್ನೆ ಕೂಂಬಿಂಗ್ ವೇಳೆ ಮಾಹಿತಿ ಆಧರಿಸಿ ಕಾರ್ಯಾಚರಣೆ ಮುಂದುವರಿಸಿದ್ದರು. ಕಾರ್ಯಾಚರಣೆ ವೇಳೆ ಪೊಲೀಸರು ಕಂಡ ತಕ್ಷಣ ನಕ್ಸಲರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಎನ್‌ಕೌಂಟರ್ ಮಾಡಬೇಕಾದ ಪರಿಸ್ಥಿತಿ ಬಂದಿತ್ತು. ಇನ್ನು ಇಬ್ಬರು ಮೂವರು ತಪ್ಪಿಸಿಕೊಂಡಿದ್ದಾರೆ ಎಂಬುದು ಈವರೆಗಿನ ಮಾಹಿತಿ. ಹೆಚ್ಚಿನ ಮಾಹಿತಿ ಲಭ್ಯವಾದ ನಂತರ ಹಂಚಿಕೊಳ್ಳುತ್ತೇನೆ” ಎಂದು ತಿಳಿಸಿದರು.

ಅನುದಾನ ವಿಚಾರವಾಗಿ ಶಾಸಕ ಗವಿಯಪ್ಪ ಅಸಮಾಧಾನದ ಕುರಿತು ಪ್ರತಿಕ್ರಿಯಿಸಿ, “ಮುಖ್ಯಮಂತ್ರಿಯವರು ಕೆಕೆಆರ್‌ಡಿಬಿ ಹಣ ಬಿಡುಗಡೆ ಮಾಡಿದ್ದಾರೆ. ಅಜಯ್ ಸಿಂಗ್ ನೇತೃತ್ವದಲ್ಲಿ ಪ್ರತ್ಯೇಕವಾಗಿ ಸಭೆ ಸಭೆ ನಡೆಸಿದ್ದಾರೆ. ಪ್ರತ್ಯೇಕವಾಗಿ ಸಭೆ ಮಾಡಿ ಅಲೋಕೆಷನ್ ಬಗ್ಗೆ ಕ್ರಮ ತೆಗೆದುಕೊಂಡಿದ್ದಾರೆ. ಕೋವಿಡ್ ಅಕ್ರಮದ ಬಗ್ಗೆ ಜಸ್ಟೀಸ್ ಮೈಕಲ್ ಡಿ.ಕುನ್ಹಾ ಅವರು ಕೊಟ್ಟಿರುವ ವರದಿಯನ್ನು ಪರಿಶೀಲಿಸುತ್ತೇವೆ” ಎಂದು ಹೇಳಿದರು‌.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...