ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ: ರೇಣುಕಾಚಾರ್ಯ, ಯತ್ನಾಳ್‌ಗೆ ಬಿಜೆಪಿ ನೋಟಿಸ್‌

Date:

ಸ್ವಪಕ್ಷೀಯ ನಾಯಕರ ವಿರುದ್ಧವೇ ಬಹಿರಂಗವಾಗಿ ವಾಗ್ದಾಳಿ ನಡೆಸಿ, ಪಕ್ಷಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡಿರುವ ಹಿನ್ನೆಲೆ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮತ್ತು ಮಾಜಿ ಶಾಸಕ ರೇಣುಕಾಚಾರ್ಯ ಸೇರಿದಂತೆ ಕೆಲವರಿಗೆ ಬಹಿರಂಗ ಹೇಳಿಕೆ ನೀಡದಂತೆ ಗುರುವಾರ ನೋಟಿಸ್‌ ಜಾರಿ ಮಾಡಿದೆ.

ನೋಟಿಸ್‌ನಲ್ಲಿ ಏನಿದೆ?

“ತಮಗೆ ಪಕ್ಷ ಸಾಕಷ್ಟು ಬಾರಿ ತಿಳಿ ಹೇಳಿದರೂ ತಾವು ಪದೇ ಪದೆ ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ವಿರುದ್ಧ ಸುದ್ದಿಮಾಧ್ಯಮಗಳ ಮುಂದೆ ಪಕ್ಷಕ್ಕೆ ಮುಜುಗರ ಆಗುವ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿರುವುದನ್ನು ರಾಜ್ಯ ಶಿಸ್ತು ಸಮಿತಿ ಗಂಭೀರವಾಗಿ ಪರಿಗಣಿಸಿ, ತಮ್ಮ ವಿರುದ್ಧ ಯಾಕೆ ಶಿಸ್ತು ಕ್ರಮ ಜರುಗಿಸಬಾರದೆಂದು ಕಾರಣ ಕೇಳಿ ಈ ನೋಟಿಸನ್ನು ನೀಡಲಾಗಿದೆ. ಈ ನೋಟಿಸ್ ತಲುಪಿದ ಒಂದು ವಾರದೊಳಗಾಗಿ ತಾವು ಉತ್ತರವನ್ನು ಲಿಖಿತ ರೂಪದಲ್ಲಿ ನೀಡಬೇಕೆಂದು ಸೂಚಿಸಲಾಗಿದೆ” ಎಂದು ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ನೋಟಿಸ್‌ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
BJP 6

ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ

ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿ, ಪ್ರಧಾನಿ ಮೋದಿ ಅವರನ್ನು ಬೀದಿ ಬೀದಿ ಸುತ್ತಿಸಿದ್ದೇ ಬಿಜೆಪಿ ಸೋಲಿಗೆ ಕಾರಣವಾಯಿತು ಎಂದು ಆರೋಪಿಸಿದ್ದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಪ್ರಣಾಳಿಕೆ ರಚನಾ ಸಮಿತಿ ಅಧ್ಯಕ್ಷರಾಗಿದ್ದ ಡಾ. ಕೆ ಸುಧಾಕರ್‌, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ವಿರುದ್ಧವೂ ವಾಗ್ದಾಳಿ ನಡೆಸಿದ್ದರು. ಇದು ಬಿಜೆಪಿ ವಿರುದ್ಧ ಆಂತರಿಕ ಚರ್ಚೆಗೂ ಕಾರಣವಾಗಿತ್ತು ಮತ್ತು ಮುಜುಗರ ತರಿಸಿತ್ತು. ಹಾಗಾಗಿ ಸ್ವಪಕ್ಷೀಯರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡುವುದಕ್ಕೆ ಕಡಿವಾಣ ಹಾಕಲು ಬಿಜೆಪಿ ಮುಂದಾಗಿದೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್​ ರಾಜೀನಾಮೆಗೆ ರೇಣುಕಾಚಾರ್ಯ ಪಟ್ಟು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...