ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಬಿಜೆಪಿಯಿಂದ ನಿರಂತರ ಅವಮಾನ: ಸಿಎಂ ಸಿದ್ದರಾಮಯ್ಯ

Date:

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ನಾಲ್ಕೂವರೆ ಕೋಟಿ ಫಲಾನುಭವಿಗಳಿಗೆ ಬಿಜೆಪಿ ನಿರಂತರವಾಗಿ ಅವಮಾನಿಸುತ್ತಿದೆ. ಒಂದು ಕಡೆ ಅವಮಾನಿಸುತ್ತಲೇ ಮತ್ತೊಂದು ಕಡೆ ವಿಪರೀತ ಸುಳ್ಳುಗಳನ್ನು ಹೇಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಚಿಕ್ಕಮಗಳೂರಿನಲ್ಲಿ ಭಾನುವಾರ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮತ್ತು ನಾನಾ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಲ್ಲಿ ಬಿಜೆಪಿ ಬೆಂಬಲಿಗರು ಇಲ್ಲವೇ ಸಿ.ಟಿ.ರವಿ? ಎಂದು ಬಿಜೆಪಿಗೆ ಸವಾಲು ಹಾಕಿದ ಸಿಎಂ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳು ರಾಜ್ಯದ ಜನರು ಹಕ್ಕು. ಫಲಾನುಭವಿಗಳನ್ನು ಅವಮಾನಿಸುವುದನ್ನು ತಕ್ಷಣ ನಿಲ್ಲಿಸಿ ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಐದಕ್ಕೆ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲಿಸಿದ ಚಿಕ್ಕಮಗಳೂರು ಜಿಲ್ಲೆಯ ಜನತೆಯ ಸಮಯಪ್ರಜ್ಞೆ ಮತ್ತು ರಾಜಕೀಯ ಪ್ರಜ್ಞೆಗೆ ಮೆಚ್ಚುಗೆ ಸೂಚಿಸಿದ ಮುಖ್ಯಮಂತ್ರಿಗಳು, ನಿಮಗೆ ಬಿಜೆಪಿ ಸರ್ಕಾರದ ಅಚ್ಛೆ ದಿನಗಳು ಬಂದಿದೆಯಾ” ಎಂದು ಪ್ರಶ್ನಿಸಿದರು. ನೆರೆದಿದ್ದ ಜನರು, ‘ಇಲ್ಲ ಇಲ್ಲ’ ಎಂದು ಕೂಗಿದರು.

“ಅಭಿವೃದ್ಧಿ ಶೂನ್ಯ ಬಿಜೆಪಿ, ಸುಳ್ಳುಗಳ ಉತ್ಪಾದನೆ ಮಾಡುತ್ತಿದೆ. ಸುಳ್ಳುಗಳ ಆಧಾರದಲ್ಲೇ ದೇಶವನ್ನು ಆಳುವ ಸರ್ಕಸ್ ಮಾಡುತ್ತಿದೆ. ಬಿಜೆಪಿ ಯಾವಾಗಲೂ ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತದೆ. ಆದರೆ, ಕಾಂಗ್ರೆಸ್, ಹಸಿವು ಮುಕ್ತ ಭಾರತ ನಿರ್ಮಿಸಲು ನಿರಂತರವಾಗಿ ಕೆಲಸ ಮಾಡುತ್ತಿದೆ. ನೀವು ಸ್ವತಂತ್ರ ಭಾರತದ ಇತಿಹಾಸ ನೋಡಿದರೆ ಹಸಿವು ಮುಕ್ತ ಭಾರತಕ್ಕಾಗಿ ಕಾಂಗ್ರೆಸ್ ಏನೆಲ್ಲ ಕಾರ್ಯಕ್ರಮಗಳನ್ನು ಜಾರಿ ಮಾಡಿತು ಎನ್ನುವ ಪಟ್ಟಿಯೇ ಸಿಗುತ್ತದೆ” ಎಂದರು.

“ಬಿಜೆಪಿ ರಾಜ್ಯದ ಜನರ ಬದುಕನ್ನು ಪಕ್ಕಕ್ಕಿಟ್ಟು ಕೇವಲ ಭಾವನೆಗಳನ್ನು ಕೆರಳಿಸುತ್ತದೆ. ಇದುವರೆಗೂ ರಾಜ್ಯದಲ್ಲಿ ಬಿಜೆಪಿ ಒಂದು ಬಾರಿಯೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದರೇ ಹೊರತು ಸ್ವಂತ ಶಕ್ತಿ ಮೇಲೆ ಅಧಿಕಾರ ನಡೆಸಿಯೇ ಇಲ್ಲ” ಎಂದು ಬಿಜೆಪಿಯ ವಿರುದ್ಧ ಕಿಡಿಕಾರಿದರು.

“4 ಕೋಟಿ 64 ಲಕ್ಷ ಜನರಿಗೆ ನಮ್ಮ ಗ್ಯಾರಂಟಿಗಳು ತಲುಪಿ ಅವರಿಗೆ ಸ್ವಲ್ಪ ಸಮಾಧಾನ ತಂದಿದೆ. ಅವರ ಜೇಬಿಗೆ ನೇರವಾಗಿ ನಾವು ಹಣ ಹಾಕುತ್ತಿರುವುದರಿಂದ ನಮ್ಮ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿದೆ. ಇದರ ಪರಿಣಾಮ ರಾಜ್ಯದ ಆರ್ಥಿಕತೆಗೆ ಬಡವರು ಶಕ್ತಿ ತುಂಬಿದ್ದಾರೆ” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ನಮ್ಮ ಐದು ಗ್ಯಾರಂಟಿ ಯೋಜನೆಗಳಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ₹486.86 ಕೋಟಿ ವೆಚ್ಚವಾಗಿರುತ್ತದೆ ಎಂದು ಅಂಕಿ ಅಂಶಗಳ ಸಮೇತ ಮುಖ್ಯಮಂತ್ರಿ ವಿವರಿಸಿದರು.

ಮಲೆನಾಡಿನ ಕಾಫಿ ಪ್ಲಾಂಟರ್ಸ್‌ಗಳಿಗೆ ಸಿಎಂ ಮಹತ್ವದ ಘೋಷಣೆ

ಮಲೆನಾಡ ಭಾಗದಲ್ಲಿ ಕಾಫಿ ಪ್ಲಾಂಟರ್ಸ್ ಗಳ ಬಹುದಿನಗಳ ಬೇಡಿಕೆಯಾಗಿದ್ದ ಕಾಫಿ ಪ್ಲಾಂಟೇಷನ್ ಲೀಸ್ ಮೇಲೆ ನೀಡುವ ಕುರಿತು ನಮ್ಮ ಸರ್ಕಾರ ತೀರ್ಮಾನ ಕೈಗೊಂಡಿದೆ.

ಶೀಘ್ರದಲ್ಲಿ ಈ ಕುರಿತು ಅರ್ಜಿಗಳನ್ನು ಆಹ್ವಾನಿಸಲು ಕ್ರಮ ಕೈಗೊಳ್ಳಲಿದೆ. ಇದರಿಂದ ಕಾಫಿ ಬೆಳೆಗಾರ ಸಮುದಾಯಕ್ಕೆ ಮತ್ತು ಬಹಳಷ್ಟು ಜನರಿಗೆ ಅನುಕೂಲ‌ ಆಗಲಿದೆ ಎಂದು, ತಜ್ಞರಿಂದ ನಿಯಮಗಳನ್ನು ರೂಪಿಸುವಂತೆ ಡಿಸಿ, ಸಿಇಓಗಳಿಗೆ ಸೂಚಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ಮಾಜಿ ಸಚಿವೆ ಮೋಟಮ್ಮ, ಜಿಲ್ಲೆಯ ಶಾಸಕರುಗಳಾದ ನಯನ ಮೋಟಮ್ಮ, ಆನಂದ್ ಕುಮಾರ್, ರಾಜುಗೌಡ, ಶ್ರೀನಿವಾಸ್, ತಮಯ್ಯ ಗೌಡ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ನಾಯಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...