ಬಿಜೆಪಿ ಸಾಮಾಜಿಕ ನ್ಯಾಯ ಹಾಗೂ ಮೀಸಲಾತಿ ವಿರೋಧಿ: ಸಿಎಂ ಸಿದ್ದರಾಮಯ್ಯ

Date:

“ಮೀಸಲಾತಿ ಪರವಾಗಿರುವ ಏಕೈಕ ಪಕ್ಷವೆಂದರೆ ಕಾಂಗ್ರೆಸ್ ಪಕ್ಷ . ಬಿಜೆಪಿಯವರು ಎಲ್ಲ ಕಾಲದಲ್ಲಿಯೂ ಸಾಮಾಜಿಕ ನ್ಯಾಯ ಹಾಗೂ ಮೀಸಲಾತಿಯ ವಿರೋಧವಾಗಿ ಕೆಲಸ ಮಾಡಿದ್ದಾರೆ” ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಇಂದು ಯಾದಗಿರಿಯಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿಯಾದ ಜಿ ಕುಮಾರ ನಾಯ್ಕ ಅವರ ಪರವಾಗಿ ಮತದಾರರಲ್ಲಿ ಮತ ಯಾಚಿಸಿ ಮಾತನಾಡಿದರು.

“ಗ್ರಾಮಪಂಚಾಯತಿ, ನಗರಸಭೆ ಸೇರಿದಂತೆ ವಿವಿಧ ಸ್ತರಗಳಲ್ಲಿ ಮಹಿಳೆಯರಿಗೆ, ಹಿಂದುಳಿದವರಿಗೆ ಮೀಸಲಾತಿ ನೀಡುವುದನ್ನು ಬಿಜೆಪಿಯವರು ವಿರೋಧಿಸಿದ್ದರು. ಬಿಜೆಪಿಯ ರಾಮ ಜೋಯಿಸ್ ಅವರು ಈ ಮೀಸಲಾತಿ ನೀಡಿಕೆಯನ್ನು ಸಂವಿಧಾನ ಬಾಹಿರ ಎಂದು ನ್ಯಾಯಾಲಯದಲ್ಲೇ ವಾದಿಸಿದ್ದರು. ಮುಸಲ್ಮಾನರಿಗೆ ಮೀಸಲಾತಿಯನ್ನು ಕಳೆದ 30 ವರ್ಷಗಳಿಂದ ನೀಡಲಾಗುತ್ತಿದೆ. ದಲಿತರಿಗೆ, ಹಿಂದುಳಿದವರಿಗೆ ನೀಡಲಾದ ಮೀಸಲಾತಿಯನ್ನು ರದ್ದುಪಡಿಸಿ ಮುಸಲ್ಮಾನರಿಗೆ ಕಾಂಗ್ರೆಸ್ ನೀಡಲಿದೆ ಎಂದು ಮೋದಿ ನಿರಂತರವಾಗಿ ಸುಳ್ಳು ಹೇಳುತ್ತಾ ಓಡಾಡುತ್ತಿದ್ದಾರೆ. ಈ ಸುಳ್ಳನ್ನು ಯಾರೂ ನಂಬಬಾರದು” ಎಂದು ಸಿದ್ದರಾಮಯ್ಯ ಮನವಿ‌ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ಬಾರಿ ರಾಜ್ಯದಿಂದ ಆಯ್ಕೆಯಾದ 25 ಮಂದಿ ಬಿಜೆಪಿ ಸಂಸದರು ರಾಜ್ಯಕ್ಕಾದ ಅನ್ಯಾಯದ ವಿರುದ್ದ ಒಮ್ಮೆಯೂ ಧ್ವನಿ ಎತ್ತಲಿಲ್ಲ. ಇವರಿಗೆ ಈ ಬಾರಿ ತಕ್ಕ ಪಾಠ ಕಲಿಸಿ” ಎಂದು ಕರೆ ನೀಡಿದರು.

“ನರೇಂದ್ರ ಮೋದಿಯವರ ಬಳಿ ಹಣ ಜಾಸ್ತಿ ಇದ್ದರೆ, ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ 30 ಲಕ್ಷ ಹುದ್ದೆಗಳನ್ನು ಏಕೆ ತುಂಬಿಲ್ಲ” ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ 30 ಲಕ್ಷ ಹುದ್ದೆಗಳನ್ನು ತುಂಬಿದ್ದರೆ ಸುಮಾರು 50% ಹಿಂದುಳಿದವರು, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಕೆಲಸ ದೊರಕುತ್ತಿತ್ತು. ಇನ್ನುಳಿದ 50% ಇತರರಿಗೆ ದೊರಕುತ್ತಿತ್ತು. ಈ ಖಾಲಿ ಹುದ್ದೆಗಳನ್ನು ಏಕೆ ತುಂಬಿಲ್ಲ? ಎಂದು ಕೇಳಿದರು.

“ನರೇಂದ್ರ ಮೋದಿಯವರಿಗೆ ದೇಶದಲ್ಲಿ ನಡೆದಿರುವ 2 ಹಂತದ ಚುನಾವಣೆಗಳಲ್ಲಿ ಬಿಜೆಪಿ ನೇತೃತ್ವದ ಎನ್.ಡಿ. ಎ ಗೆ ಕಡಿಮೆ ಸ್ಥಾನಗಳು ಬರಲಿದೆ ಎನ್ನುವುದು ನರೇಂದ್ರ ಮೋದಿಯವರಿಗೆ ಸ್ಪಷ್ಟವಾಗಿ ಗೊತ್ತಾಗಿ ಹತಾಶರಾಗಿದ್ದಾರೆ. ಅದಕ್ಕೇ ಕರ್ನಾಟಕಕ್ಕೆ ಬಂದು ಬಾಯಿಗೆ ಬಂದಂತೆ ಮಾತನಾಡುತ್ತಾ, ಕೇವಲ ಸುಳ್ಳುಗಳನ್ನು ಹೇಳಿಕೊಂಡು ತಿರುಗುತ್ತಿದ್ದಾರೆ. ಕರ್ನಾಟಕದ ಖಜಾನೆ ಖಾಲಿಯಾಗಿದ್ದು ಸರ್ಕಾರಿ ನೌಕರರಿಗೆ ಸಂಬಳ ಕೊಡಲು ದುಡ್ಡಿಲ್ಲ ಎಂಬ ಹಸಿ ಹಸಿ ಸುಳ್ಳು ಹೇಳಿದ್ದಾರೆ” ಎಂದರು.

ಮೋದಿ ಆಡಳಿತದ ಹತ್ತು ವರ್ಷಗಳಲ್ಲಿ ಜನರ ಭಾವನೆಗಳನ್ನು ಕೆರಳಿಸಿ ಜಾತಿ , ಧರ್ಮದ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸ ನಡೆದಿದೆ. ಭಾರತೀಯರನ್ನು ಹಿಂದೂ, ಮುಸಲ್ಮಾನರು, ಕ್ರಿಶ್ಚಿಯನ್ನರ ಹೆಸರಿನಲ್ಲಿ ವಿಭಜಿಸಿ ಬೆಂಕಿ ಹಚ್ಚುವ ಬಿಜೆಪಿ ಕೃತ್ಯದ ವಿರುದ್ಧ, ಸಮಾಜವನ್ನು ಮಾನವೀಯವಾಗಿ ಬೆಸೆಯುವ ಕೆಲಸಕ್ಕೆ ರಾಹುಲ್ ಗಾಂಧಿ ಮುಂದಾದರು. ದೇಶದ ಐಕ್ಯತೆ ಮರು ಸ್ಥಾಪಿಸಲು, ಸಾರ್ವಭೌತ್ವವನ್ನು ಕಾಪಾಡಲು ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ, ಮಣಿಪುರದಿಂದ ಮುಂಬೈವರೆಗೆ ಪಾದಯಾತ್ರೆ ಮಾಡಿದರು. ಸಮಾಜ ಬೆಸೆಯುವ ಕೆಲಸ ಮಾಡಿದರು. ಭಾರತ್ ಜೋಡೋ ಹೆಸರಿನಲ್ಲಿ ದೇಶದ ಜನರನ್ನು ಪ್ರೀತಿ ವಿಶ್ವಾಸದಿಂದ ಒಗ್ಗೂಡಿಸುವ ಪ್ರಯತ್ನ ಮಾಡಿದರು ಎಂದು ಶ್ಲಾಘಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಶಾಸಕ ಚನ್ನಾರೆಡ್ಡಿ, ಸ್ಥಳೀಯ ಕಾಂಗ್ರೆಸ್ ಮುಖಂಡರು, ಜಿಲ್ಲಾ ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...