ಸೋಲುವ ಭೀತಿಯಿಂದ ಬಿಜೆಪಿ ಸುಳ್ಳು ಸೃಷ್ಟಿ, ಗಮನಕೊಡಬೇಡಿ: ಮತದಾರರಿಗೆ ಸಿಎಂ ಮನವಿ

Date:

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವು ಖಚಿತ. ಸಾಮಾನ್ಯ ಕಾರ್ಯಕರ್ತರಾಗಿ ಬುಡಮಟ್ಟದಿಂದ ಬೆಳೆದು ಈಗ ಅಭ್ಯರ್ಥಿಯಾಗಿದ್ದಾರೆ. ನಿಮ್ಮೆಲ್ಲರ ಸಹಕಾರ, ಆಶೀರ್ವಾದ ಗೌತಮ್ ಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಇರಲಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.

ಕೋಲಾರದಲ್ಲಿ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ನಡೆಸಿದ ರೋಡ್ ಶೋ ನಲ್ಲಿ ಮಾತನಾಡಿದರು.

“ಮೋದಿ ಸರ್ಕಾರ ಪೆಟ್ರೋಲ್, ಡೀಸೆಲ್,ಅಡುಗೆ ಗ್ಯಾಸ್ ಸಿಲಿಂಡರ್, ರಸಗೊಬ್ಬರ, ಅಡುಗೆ ಎಣ್ಣೆ, ಬೇಳೆ-ಕಾಳು, ತರಕಾರಿ ಸೇರಿ ಪ್ರತಿಯೊಂದರ ಬೆಲೆಯನ್ನು ವಿಪರೀತ ಏರಿಸಿತ್ತು. ಇದರಿಂದ ನಾಡಿನ ಪ್ರತೀ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದವು. ಈ ಸಂಕಷ್ಟಕ್ಕೆ ಸ್ಪಂದಿಸಿ ಕಷ್ಟ ಕಡಿಮೆ ಮಾಡುವ ಉದ್ದೇಶದಿಂದ ಐದು ಗ್ಯಾರಂಟಿ ಭರವಸೆಗಳನ್ನು ಘೋಷಿಸಿದೆವು. ಅಧಿಕಾರಕ್ಕೆ ಬಂದು ಐದಕ್ಕೆ ಐದನ್ನೂ ಜಾರಿ ಮಾಡಿದೆವು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೊದಲಿಗೆ ಗ್ಯಾರಂಟಿಗಳ ಜಾರಿ ಸಾಧ್ಯವೇ ಇಲ್ಲ ಎನ್ನುವ ಸುಳ್ಳನ್ನು ಬಿಜೆಪಿ ಹುಟ್ಟಿಸಿತು. ಗ್ಯಾರಂಟಿಗಳು ಜಾರಿಯಾದ ಬಳಿಕ ಹೊಸ ಸುಳ್ಳು ಸೃಷ್ಟಿಸಿದ್ದಾರೆ. ಗ್ಯಾರಂಟಿಗಳು ನಿಂತು ಹೋಗುತ್ತವೆ ಎನ್ನುತ್ತಿದ್ದಾರೆ. ಯಾವುದೇ ಕಾರಣಕ್ಕೂ ನಮ್ಮ ಗ್ಯಾರಂಟಿಗಳು ನಿಲ್ಲುವುದಿಲ್ಲ. ಕಾಂಗ್ರೆಸ್ ಗ್ಯಾರಂಟಿಗಳಿಗೆ ಐದು ವರ್ಷ ವಾರಂಟಿ ಇದೆ” ಎಂದು ಹೇಳಿದರು‌.

“ಸೋಲುವ ಭೀತಿಯಿಂದ ಬಿಜೆಪಿ ಸೃಷ್ಟಿಸುವ ಸುಳ್ಳುಗಳಿಗೆ ಸೊಪ್ಪಾಕಬೇಡಿ. ಬಿಜೆಪಿ ಸುಳ್ಳಿನ ಕಾರ್ಖಾನೆ. ನಾವು ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಮತಕ್ಕೆ ಘನತೆ ತಂದಿದ್ದೇವೆ. ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲ್ಲಿಸಿ ನಿಮ್ಮ ಮತಕ್ಕೆ ಮೌಲ್ಯ ತಂದು ಕೊಡುವ ರೀತಿಯಲ್ಲಿ ಸರ್ಕಾರ ಕೆಲಸ ಮಾಡುತ್ತದೆ” ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಸಿ.ಸುಧಾಕರ್, ಬೈರತಿ ಸುರೇಶ್, ಮಾಜಿ ಸಚಿವ ರಮೇಶ್ ಕುಮಾರ್ , ಮಾಜಿ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್ ಸೇರಿ ಕೋಲಾರ ಜಿಲ್ಲೆಯ ಎಲ್ಲಾ ಶಾಸಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...