ಪ್ರಜ್ವಲ್‌ ಪ್ರಕರಣ | ಮಹಿಳಾ ದೌರ್ಜನ್ಯದ ಮೂಲ ಅಪರಾಧವನ್ನೇ ಬಿಜೆಪಿ ಮರೆಮಾಚುತ್ತಿದೆ: ಕಾಂಗ್ರೆಸ್‌ ವಾಗ್ದಾಳಿ

Date:

ಪೆನ್‌ಡ್ರೈವ್ ಪ್ರಕರಣದ ಕೇಂದ್ರ ಬಿಂದು, ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳಿಸಿದ ಬಿಜೆಪಿ ಇತ್ತ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಕರಣವನ್ನು ವ್ಯವಸ್ಥಿತವಾಗಿ ರಾಜಕೀಕರಣ ಮಾಡುವ ಪ್ರಯತ್ನ ಮಾಡುತ್ತಿದೆ. ಮಹಿಳಾ ದೌರ್ಜನ್ಯದ ಮೂಲ ಅಪರಾಧವನ್ನು ಮರೆಮಾಚುತ್ತಿದೆ ಎಂದು ಕಾಂಗ್ರೆಸ್‌ ಟೀಕಿಸಿದೆ.

ಎಕ್ಸ್‌ ತಾಣದಲ್ಲಿ ಈ ಕುರಿತು ಸರಣಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌, “ರೇವಣ್ಣರನ್ನು ಬಂಧಿಸಿದ್ದು ತಪ್ಪು ಎನ್ನುತ್ತಿರುವ ಬಿಜೆಪಿ, ಸಂತ್ರಸ್ತ ಮಹಿಳೆಯನ್ನು ಕಿಡ್ನಾಪ್ ಮಾಡಿ ದೌರ್ಜನ್ಯ ಎಸಗಿದ್ದನ್ನು ಸಮರ್ಥಿಸುತ್ತಿದೆ. ಮತ್ತೊಂದೆಡೆ ದೇವರಾಜೇಗೌಡನನ್ನು ಬಂಧಿಸಿದ್ದನ್ನು ವಿರೋಧಿಸುತ್ತಾ ಆತನ ಲೈಂಗಿಕ ದೌರ್ಜನ್ಯಕ್ಕೆ ಒಪ್ಪಿಗೆಯ ಮುದ್ರೆ ಒತ್ತಿ ಸಂಭ್ರಮಿಸುತ್ತಿದೆ” ಎಂದು ಕಿಡಿಕಾರಿದೆ.

“ಮಹಿಳೆಯರೆಂದರೆ ಬಳಸುವ ವಸ್ತುಗಳು ಎಂಬ ಮನೋಧರ್ಮದ ಬಿಜೆಪಿ ಪಕ್ಷದಿಂದ ಮಹಿಳೆಯರು ಘನತೆಯ ಬದುಕನ್ನು ನಿರೀಕ್ಷಿಸುವುದು ಅಸಾಧ್ಯದ ಮಾತು” ಎಂದು ಕುಟುಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಮಿತ್ ಶಾಗೆ ಅದೆಷ್ಟು ಭಯ?

ದೇವರಾಜೇಗೌಡ ಅಮಿತ್ ಶಾ ಆಡಿಸಿದಂತೆ ಆಡುವ ಆಟದ ಗೊಂಬೆ ಎನ್ನುವುದು ಸ್ವತಃ ದೇವರಾಜೇಗೌಡನಿಂದಲೇ ತಿಳಿದಿದೆ. ಅಮಿತ್ ಶಾ ಅಣತಿಯಂತೆ ಪೆನ್ ಡ್ರೈವ್ ಬಿಡುಗಡೆಯಾಯ್ತಾ? ಜೆಡಿಎಸ್ ಪಕ್ಷವನ್ನು ಮುಳುಗಿಸಲು ಅಮಿತ್ ಶಾ ರೂಪಿಸಿದ ತಂತ್ರವೇ” ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

“ಒಂದು ಪೆನ್‌ರೈವ್ ಇಟ್ಟುಕೊಂಡು ಎರಡು ಪಕ್ಷಗಳನ್ನು ಟಾರ್ಗೆಟ್ ಮಾಡುವ ಹುನ್ನಾರವೇ? ಪೆನ್‌ಡ್ರೈವ್ ವಿಷಯವನ್ನು ಇಟ್ಟುಕೊಂಡು ಡಿಕೆ ಶಿವಕುಮಾರ್‌ ಅವರನ್ನು ಜೈಲಿಗೆ ಹಾಕಿಸುವ ಹುನ್ನಾರ ನಡೆಸಿದ್ದಾರೆ ಎಂದರೆ ಅಮಿತ್ ಶಾ ಅವರಿಗೆ ಕಾಂಗ್ರೆಸ್ ಬಗ್ಗೆ ಅದೆಷ್ಟು ಭಯವಿರಬಹುದು” ಎಂದು ಹೇಳಿದೆ.

“ದೇವರಾಜೇಗೌಡನ ಪ್ರತಿ ನಡೆ, ನುಡಿಯೂ ಅಮಿತ್ ಶಾ ನಿರ್ದೇಶನದಂತೆ ನಡೆಯುತ್ತಿದೆ ಎಂದರೆ ಇದೆಲ್ಲದರ ಮಾಸ್ಟರ್ ಮೈಂಡ್ ಸ್ವತಃ ಅಮಿತ್ ಶಾ ಅಲ್ಲವೇ?” ಎಂದು ಕೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...