ರಾಜ್ಯದ ಕೋಮು ಗಲಭೆಗಳಿಗೆ ಬಿಜೆಪಿ ಪ್ರಚೋದನೆ ನೀಡುತ್ತಿದೆ: ಸಿಎಂ ಸಿದ್ದರಾಮಯ್ಯ ಆರೋಪ

Date:

ರಾಜ್ಯದ ಕೋಮು ಗಲಭೆಗಳಿಗೆ ಬಿಜೆಪಿ ಪ್ರಚೋದನೆ ನೀಡುತ್ತಿದೆ. ಕೋಮು ಘಟನೆಗಳ ಹಿಂದೆ ಬಿಜೆಪಿಯ ಕೈವಾಡವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಅವರು ಇಂದು (ಸೆ.20) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ದಾವಣೆಗರೆಯಲ್ಲಿ ಈ ಬಾರಿ ಅರವತ್ತು ಸಾವಿರ ಗಣೇಶಗಳ ಪ್ರತಿಷ್ಠಾಪನೆಯಾಗಿತ್ತು. ದಾವಣಗೆರೆಯಲ್ಲಿ ಕಲ್ಲು ತೂರಾಟ ನಡೆದಿದ್ದು, ನಾಗಮಂಗಲದಲ್ಲಿ ಗಲಭೆ ನಡೆದಿದ್ದು, ಇಲ್ಲಿ ಪೊಲೀಸರ ಕರ್ತವ್ಯ ನಿರ್ಲಕ್ಷ್ಯ ಕಂಡುಬಂದಿದೆ. ಡಿ.ವೈ.ಎಸ್.ಪಿ ಅವರನ್ನು ಅಮಾನತು ಮಾಡಲಾಗಿದೆ. ಆದರೆ, ರಾಜ್ಯದ ಕೋಮು ಗಲಭೆಗಳಿಗೆ ಬಿಜೆಪಿ ಪ್ರಚೋದನೆ ನೀಡುತ್ತಿದೆ” ಎಂದು ದೂರಿದರು.

ಸರ್ಕಾರ ಯಾರ ಮೇಲೂ ಆರೋಪ ಮಾಡುವುದಿಲ್ಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಪಕ್ಷಗಳು ಗಾಜಿನ ಮನೆಯಲ್ಲಿ ಕುಳಿತು ಸರ್ಕಾರದ ಮೇಲೆ ಆರೋಪ ಹೊರಸುತ್ತಿವೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, “ನಾವು ಯಾರ ಮೇಲೆಯೂ ಆರೋಪ ಹೊರಿಸುವ ಕೆಲಸವನ್ನು ಮಾಡಿಲ್ಲ. ಕುಮಾರಸ್ವಾಮಿಯವರು ಎಂದಿಗೂ ಹಿಟ್ ಎಂಡ್ ರನ್ ಮಾಡುವವರಾಗಿದ್ದು, ಯಾವ ಆರೋಪಕ್ಕೂ ತಾರ್ಕಿಕ ಅಂತ್ಯ ಕಾಣಿಸುವುದಿಲ್ಲ. ಕುಮಾರಸ್ವಾಮಿಯವರು ಕೇಂದ್ರ ಸಚಿವರಾಗಿದ್ದು, ಜವಾಬ್ದಾರಿಯುತವಾಗಿ ವರ್ತಿಸಬೇಕು. ವಿಷಯದ ಸತ್ಯಾಸತ್ಯತೆಯನ್ನು ಅರಿತು ಮಾತನಾಡಬೇಕು” ಎಂದರು.

ಡಿನೋಟಿಫೈ ಪ್ರಕರಣಕ್ಕೆ ಲೋಕಾಯುಕ್ತ ತನಿಖೆ ಬಗ್ಗೆ ಪರಿಶೀಲನೆ

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪರವರ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣದಲ್ಲಿ 2021 ರಿಂದ ಲೋಕಾಯುಕ್ತದವರು ತನಿಖೆ ನಡೆಸದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, “ನಿನ್ನೆ ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಸಂತೋಷ್ ಲಾಡ್ ಸೇರಿದಂತೆ ಸಚಿವರು ಈ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಡಿನೋಟಿಫೈ ಪ್ರಕರಣದ ಜಮೀನು ಬಹಳ ಬೆಲೆಬಾಳುವಂಥದ್ದಾಗಿದ್ದು, ಕುಮಾರಸ್ವಾಮಿಯವರು ತಮ್ಮ ಸಂಬಂಧಿಕರಿಗೆ ಡಿನೋಟಿಫೈ ಮಾಡಿ , ಜಿಪಿಓ ಆಗಿದೆ. ಅಧಿಕಾರಿಗಳು ಈ ಕ್ರಮವನ್ನು ಕಾನೂನಾತ್ಮಕವಲ್ಲವೆಂದರೂ ಈ ರೀತಿ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಪಡೆದು ಪರಿಶೀಲನೆ ನಡೆಸಲಾಗುವುದು” ಎಂದರು.

“ಶಾಸಕ ಮುನಿರತ್ನ ಅವರ ಮೇಲೆ ಮೇಲಿನ ಮೂರು ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಎಸ್.ಐ ಟಿಗೆ ವಹಿಸಬೇಕೆಂದು ಇಂದು ಒಕ್ಕಲಿಗ ಸಚಿವರು ಹಾಗೂ ಶಾಸಕರು ಮನವಿ ಮಾಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಅವರೊಂದಿಗೆ ಮಾತನಾಡುವುದಾಗಿ ತಿಳಿಸಿದ್ದೇನೆ” ಎಂದು ತಿಳಿಸಿದರು.

“ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರು ಪರೀಕ್ಷೆಯನ್ನು ಆದಷ್ಟೂ ಶೀಘ್ರದಲ್ಲಿಯೇ ಏರ್ಪಡಿಸುವಂತೆ ಕೆ.ಪಿ.ಎಸ್.ಸಿ ಗೆ ಸೂಚಿಸಲಾಗಿದೆ. ಪೊಲೀಸ್‌ ಪೇದೆ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಬಗ್ಗೆ ಮಾತನಾಡಿ ಈ ಕುರಿತು ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿದ್ದೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...