ಬಿಜೆಪಿ ನಾಯಕತ್ವದ ಬಗ್ಗೆ ಬಹಿರಂಗ ಟೀಕೆ; ಶಾಸಕ ಯತ್ನಾಳ್‌ಗೆ ಶೋಕಾಸ್ ನೋಟಿಸ್

Date:

ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕತ್ವದ ಬಗ್ಗೆ ಬಹಿರಂಗವಾಗಿ ಟೀಕೆ ಮಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅವರಿಗೆ ಕೊನೆಗೂ ಬಿಜೆಪಿ ಶೋಕಾಸ್ ನೋಟಿಸ್ ನೀಡಿದೆ.

ಯತ್ನಾಳ್ ಬಿಜೆಪಿ ಅಧಿಕೃತ ನಿರ್ಧಾರದ ವಿರುದ್ಧವಾಗಿ ನಡೆದುಕೊಂಡರೂ, ಪ್ರತ್ಯೇಕ ಸಭೆ- ಕಾರ್ಯಕ್ರಮಗಳನ್ನು ನಡೆಸುತ್ತಿದ್ದರೂ ಈವರೆಗೂ ಯಾವುದೇ ಶಿಸ್ತು ಕ್ರಮ ಕೈಗೊಂಡಿರಲಿಲ್ಲ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಯಾಗಿತ್ತು. ಆರ್‌ಎಸ್‌ಎಸ್ ನಾಯಕ ಬಿ ಎಲ್ ಸಂತೋಷ್ ಬೆಂಬಲವೇ ಯತ್ನಾಳ್ ರಾಜರೋಷವಾಗಿ ಬಿಜೆಪಿ ಕರ್ನಾಟಕ ನಾಯಕತ್ವದ ವಿರುದ್ಧವಾಗಿ ನಡೆದುಕೊಳ್ಳಲು ಕಾರಣ ಎನ್ನಲಾಗಿತ್ತು. ಈ ಎಲ್ಲಾ ವಿಚಾರಗಳು ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಇದೀಗ ಬಿಜೆಪಿ ಹೈಕಮಾಂಡ್ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಇದನ್ನು ಓದಿದ್ದೀರಾ? ಮತದಾನ ಮಾಡದ, ಚುನಾವಣಾ ಪ್ರಚಾರದಲ್ಲಿ ಭಾಗಿಯಾಗದ ಸಂಸದ ಜಯಂತ್ ಸಿನ್ಹಾಗೆ ಬಿಜೆಪಿ ಶೋಕಾಸ್ ನೋಟಿಸ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯ ಮಟ್ಟದ ಪಕ್ಷದ ನಾಯಕತ್ವದ ವಿರುದ್ಧ ನೀವು ಮಾಡಿದ ನಿರಂತರ ವಾಗ್ದಾಳಿ ನಡೆಸಿರುವುದು, ಪಕ್ಷದ ಆದೇಶ ಧಿಕ್ಕರಿಸುವುದು, ರಾಜಕೀಯ ಮತ್ತು ಸಾರ್ವಜನಿಕ ಪ್ರಾಮುಖ್ಯತೆಯ ಎಲ್ಲಾ ವಿಷಯದಲ್ಲಿಯೂ ಪಕ್ಷದ ಅಧಿಕೃತ ನಿಲುವಿಗೆ ವಿರುದ್ಧವಾಗಿ ನಿಲುವು ತೆಗೆದುಕೊಂಡಿರುವುದು ಮಾಧ್ಯಮಗಳು ಮತ್ತು ವಿವಿಧ ಕಡೆಗಳಲ್ಲಿ ವರದಿಯಾಗಿದೆ” ಎಂದು ಶೋಕಾಸ್ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಶೋಕಾಸ್ ನೋಟಿಸ್ 1
ಶೋಕಾಸ್ ನೋಟಿಸ್1

“ಈ ಹಿಂದೆ ಹಲವು ಬಾರಿ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದ್ದು, ನೀವು ಇನ್ನು ತಪ್ಪು ಮಾಡುವುದಿಲ್ಲ ಎಂದು ಭರವಸೆ ನೀಡಿದರೂ ಮತ್ತೆ ಶಿಸ್ತು ಉಲ್ಲಂಘಿಸುತ್ತಿದ್ದೀರಿ” ಎಂದು ಹೈಕಮಾಂಡ್ ಹೇಳಿದೆ. ಹಾಗೆಯೇ 10 ದಿನಗಳ ಒಳಗಾಗಿ ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ತಿಳಿಸಲಾಗಿದೆ. “ಹತ್ತು ದಿನದಲ್ಲಿ ಯಾವುದೇ ಪ್ರತಿಕ್ರಿಯೆ ನೀಡದಿದ್ದರೆ ಈ ವಿಚಾರದಲ್ಲಿ ನಿಮ್ಮ ಉತ್ತರವೇನಿಲ್ಲ ಎಂದು ಭಾವಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು” ಎಂದು ತಿಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...