ಬಿಜೆಪಿ-ಜೆಡಿಎಸ್‌ ಮೈತ್ರಿ | ನಾವು ಸ್ವತಂತ್ರವಾಗಿರುತ್ತೇವೆ ಎಂದ ಕೇರಳ ಜೆಡಿಎಸ್‌ ಘಟಕ

Date:

ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಮಾಡಿಕೊಂಡಿದೆ. ಈ ವಿಚಾರವಾಗಿ ಜೆಡಿಎಸ್‌ನ ಹಲವು ಮುಖಂಡರು ಬಂಡಾಯವೆದ್ದು ಪಕ್ಷ ತೊರೆದಿದ್ದಾರೆ. ಅಲ್ಲದೆ, ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಇದೆಲ್ಲದರ ನಡುವೆ, ಮೈತ್ರಿ ಬಗ್ಗೆ ಪ್ರತಿಕ್ರಿಯಿಸಿರುವ ಕೇರಳ ಜೆಡಿಎಸ್‌ ಘಟಕದ ಮುಖಂಡ, ಕೇರಳ ವಿದ್ಯುತ್ ಸಚಿವ ಕೆ ಕೃಷ್ಣನ್‌ಕುಟ್ಟಿ, “ಜೆಡಿಎಸ್ ಕೇರಳ ಘಟಕವು ಸ್ವತಂತ್ರ ಪಕ್ಷವಾಗಿ ಮುನ್ನಡೆಯಲು ನಿರ್ಧರಿಸಿದೆ” ಎಂದು ಹೇಳಿದ್ದಾರೆ.

“ನಾನು ಮತ್ತು ಕೇರಳ ಜೆಡಿಎಸ್ ಅಧ್ಯಕ್ಷ ಮ್ಯಾಥ್ಯೂ ಟಿ ಥಾಮಸ್ ಅವರು ಕರ್ನಾಟಕದಲ್ಲಿ ಪಕ್ಷದ ನಾಯಕರನ್ನು ಭೇಟಿಯಾಗಿದ್ದೇವೆ. ಬಿಜೆಪಿಯೊಂದಿಗೆ ಮೈತ್ರಿ ಸ್ವೀಕಾರಾರ್ಹವಲ್ಲ. ಹೈಕಮಾಂಡ್‌ ನಡೆ ಸರಿಯಲ್ಲ ತಿಳಿಸಿದ್ದೇವೆ” ಎಂದು ಕೃಷ್ಣನ್‌ಕುಟ್ಟಿ ಹೇಳಿದ್ದಾರೆ.

“ನಾವು ಕರ್ನಾಟಕ ಜೆಡಿಎಸ್‌ ಜೊತೆಗಿನ ಸಂಬಂಧವನ್ನು ಕೊನೆಗೊಳಿಸುತ್ತಿದ್ದೇವೆ. ನಾವು ಸ್ವತಂತ್ರವಾಗಿ ಉಳಿಯುತ್ತೇವೆಂದು ಹೈಕಮಾಂಡ್‌ಗೆ ತಿಳಿಸಿದ್ದೇವೆ. ಇಲ್ಲಿ ಸಮಿತಿ ಸಭೆ ನಡೆಸಿ ಸ್ವತಂತ್ರವಾಗಿ ನಿಲ್ಲಲು ನಿರ್ಧರಿಸಿದ್ದೇವೆ. ಎಲ್ಲರೂ ಒಪ್ಪಿದ್ದಾರೆ. ನಮ್ಮದು ವಾಸ್ತವ ನಿಲುವು” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಷ್ಟ್ರಮಟ್ಟದಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ನೊಂದಿಗಿನ ಸಂಬಂಧವನ್ನು ಕೇರಳದ ಆಡಳಿತಾರೂಢ ಸಿಪಿಐ(ಎಂ) ಕಡಿತಗೊಳಿಸಿಲ್ಲ ಎಂದು ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಆರೋಪಿಸಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, “ಕರ್ನಾಟಕದಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್‌ ಮೈತ್ರಿಯನ್ನು ನಮ್ಮೊಂದಿಗಿರುವ ಕೇರಳ ಜೆಡಿಎಸ್ ಒಪ್ಪಿಕೊಂಡಿಲ್ಲ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...