ಬಿಜೆಪಿ-ಜೆಡಿಎಸ್ ಮೈತ್ರಿ: ಜೆಡಿಎಸ್ ರಾಜ್ಯ ವಕ್ತಾರೆ ಹುದ್ದೆಗೆ ರಾಜೀನಾಮೆ ನೀಡಿದ ಯು ಟಿ ಫರ್ಝಾನ

Date:

ಮುಂದಿನ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಪಕ್ಷವು ಮೈತ್ರಿ ವಿಚಾರ ಅಧಿಕೃತವಾಗಿ ಘೋಷಣೆಯಾದ ಬೆನ್ನಲ್ಲೇ, ಜೆಡಿಎಸ್ ರಾಜ್ಯ ವಕ್ತಾರೆ ಹುದ್ದೆಗೆ ಮಂಗಳೂರಿನ ಯು ಟಿ ಫರ್ಝಾನ ರಾಜೀನಾಮೆ ನೀಡಿದ್ದಾರೆ.

ಈ ಬಗ್ಗೆ ತನ್ನ ಫೇಸ್‌ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಜೆಡಿಎಸ್‌ನ ಮಾಧ್ಯಮ ಮುಖ್ಯಸ್ಥರಾದ ಶ್ರೀಕಂಠೇಗೌಡ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದಾರೆ.

ರಾಜೀನಾಮೆ ಪತ್ರದಲ್ಲಿ ಕನ್ನಡ ನಾಡಿನ ಸಮೃದ್ಧಿ ಮತ್ತು ಜಾತ್ಯಾತೀತ ನಿಲುವುಗಳು ನನ್ನ ಜೀವನದ ಪ್ರಧಾನ ಆಶಯಗಳಾಗಿದ್ದು, ಆ ನಿಟ್ಟಿನಲ್ಲಿ ಶ್ರಮಿಸುವ ಸಲುವಾಗಿ ನಾನು ತಮ್ಮ ಪಕ್ಷವನ್ನು ಸೇರಿದ್ದೆ. ಆದರೆ ಬದಲಾದ ಕಾಲಘಟ್ಟದಲ್ಲಿ ನನ್ನ ನಿಲುವುಗಳು ಮತ್ತು ಪಕ್ಷದ ನಿಲುವುಗಳಲ್ಲಿ ಹೊಂದಾಣಿಕೆಯಾಗದ ಕಾರಣ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿಂದಾಗ ಜೆಡಿಎಸ್ ಪಕ್ಷ ನೀಡಿದ್ದ ರಾಜ್ಯ ವಕ್ತಾರೆ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಗೌರವದಿಂದ ನಡೆಸಿಕೊಂಡ ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯು ಟಿ ಆಯಿಶಾ ಫರ್ಝಾನ, ಮೂಲತಃ ಕರಾವಳಿ ನಗರವಾದ ಮಂಗಳೂರಿನವರಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜೆಡಿಎಸ್‌ ಪಕ್ಷ ಸೇರ್ಪಡೆಯಾಗಿದ್ದರು. ಆ ಬಳಿಕ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಅವರಿಗೆ ಜೆಡಿಎಸ್ ನಾಯಕ ಎಚ್‌ ಡಿ ಕುಮಾರಸ್ವಾಮಿ, ರಾಜ್ಯ ವಕ್ತಾರೆ ಹುದ್ದೆಗೆ ಆಯ್ಕೆ ಮಾಡಿದ್ದರು.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್‌ ಡಿ ಕುಮಾರಸ್ವಾಮಿ ಅವರು ಶುಕ್ರವಾರ(ಸೆಪ್ಟೆಂಬರ್‌ 22) ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಔಪಚಾರಿಕವಾಗಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸೇರ್ಪಡೆಗೊಂಡ ಬೆನ್ನಲ್ಲೇ, ಈ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...