ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ; ಜೆಡಿಎಸ್‌ಗೆ ನಾಲ್ಕು ಕ್ಷೇತ್ರ : ಯಡಿಯೂರಪ್ಪ

Date:

ಬಹಳ ದಿನಗಳ ಚರ್ಚೆಯ ನಂತರ ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ ಅಖೈರುಗೊಂಡಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದ್ದು, ಜೆಡಿಎಸ್‌ಗೆ ನಾಲ್ಕು ಸ್ಥಾನಗಳನ್ನು ಬಿಟ್ಟುಕೊಡಲು ಅಮಿತ್ ಶಾ ಒಪ್ಪಿದ್ದಾರೆ ಎಂದು ಬಿಜೆಪಿ ಮುಖಂಡ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳಿಗೆ ಮೈತ್ರಿ ಬಗ್ಗೆ ಮಾಹಿತಿ ನೀಡಿದ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರೂ ಆದ ಬಿ ಎಸ್ ಯಡಿಯೂರಪ್ಪ, ‘ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡರೆ ಬಿಜೆಪಿಗೆ ಹೆಚ್ಚು ಶಕ್ತಿ ಬರಲಿದ್ದು, 25ರಿಂದ 26 ಸ್ಥಾನ ಗೆಲ್ಲಲು ಸಹಕಾರಿಯಾಗಲಿದೆ’ ಎಂದರು.

2024ರ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಇತ್ತೀಚೆಗೆ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹೇಳಿದ್ದರು. ಅದರ ಬೆನ್ನಲ್ಲೇ ಮೈತ್ರಿ ಮಾತುಕತೆಯ ಬಗ್ಗೆ ಅಮಿತ್ ಶಾ ಒಪ್ಪಿದ್ದಾರೆ ಎಂದ ಯಡಿಯೂರಪ್ಪನವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇವೇಗೌಡರು ಹಾಸನ, ಮಂಡ್ಯ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಪಟ್ಟಿಯನ್ನು ಬಿಜೆಪಿಗೆ ಕೊಟ್ಟಿದ್ದು ಇವುಗಳಲ್ಲೇ ನಾಲ್ಕು ಕ್ಷೇತ್ರಗಳನ್ನು ತಮಗೆ ಬಿಟ್ಟುಕೊಡುವಂತೆ ಕೇಳಿದ್ದಾರೆ ಎನ್ನಲಾಗಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸಿದರೆ, ಅದರ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಒಂದು ಸ್ಥಾನವನ್ನು ಗೆದ್ದಿದ್ದರು. ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದ್ದವು.         

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...