ಲಾಲೂ ಪ್ರಸಾದ್ ಟೀಕೆಯನ್ನೇ ಅಸ್ತ್ರವನ್ನಾಗಿಸಿಕೊಂಡ ಬಿಜೆಪಿ: ‘ಮೋದಿ ಕಾ ಪರಿವಾರ್’ ಅಭಿಯಾನ!

Date:

ನಿನ್ನೆ ಪಾಟ್ನಾದಲ್ಲಿ ನಡೆದಿದ್ದ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಟೀಕಿಸಿದ್ದರು. ಈಗ ಇದನ್ನೇ ಅಸ್ತವನ್ನಾಗಿಸಿಕೊಂಡಿರುವ ಬಿಜೆಪಿ ಪಾಳಯ, ಸೋಷಿಯಲ್ ಮೀಡಿಯಾದಲ್ಲಿ ‘ಮೋದಿ ಕಾ ಪರಿವಾರ್’ ಎಂಬ ಅಭಿಯಾನವನ್ನು ಆರಂಭಿಸಿದೆ.

ಪಾಟ್ನಾದಲ್ಲಿ ನಡೆದಿದ್ದ ಸಮಾವೇಶದಲ್ಲಿ ನರೇಂದ್ರ ಮೋದಿ ಕುಟುಂಬದ ಬಗ್ಗೆ ಮಾತನಾಡಿದ್ದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್, “ನಮ್ಮದು ಕುಟುಂಬ ರಾಜಕಾರಣ ಅಲ್ಲ ಎಂದು ಮೋದಿ ಹೇಳುತ್ತಾರೆ. ಮೋದಿಗೆ ಸ್ವಂತ ಕುಟುಂಬ ಇಲ್ಲದಿದ್ದರೆ ನಾವೇನು ಮಾಡೋಕೆ ಸಾಧ್ಯ?, ಅವರಿಗೇಕೆ ಮಕ್ಕಳಿಲ್ಲ?. ರಾಮಮಂದಿರದ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುತ್ತಾರೆ. ಅವರು ನಿಜವಾದ ಹಿಂದೂ ಕೂಡ ಅಲ್ಲಾ. ಹಿಂದೂ ಸಂಪ್ರದಾಯದಲ್ಲಿ ತಂದೆ-ತಾಯಿ ಸತ್ತರೆ ತಲೆ ಕೂದಲು ಬೋಳಿಸಬೇಕು. ಆದರೆ ತಾಯಿ ಮೃತಪಟ್ಟಾಗ ಮೋದಿ ಆ ರೀತಿ ಮಾಡಲಿಲ್ಲ” ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗ ಇದನ್ನೇ ಅಸ್ತ್ರವನ್ನಾಗಿಸಿಕೊಂಡಿರುವ ಬಿಜೆಪಿ ನಾಯಕರು, ತಮ್ಮ ‘ಎಕ್ಸ್'(ಟ್ವಿಟ್ಟರ್) ಖಾತೆಗಳಲ್ಲಿ ಹೆಸರಿನ ಮುಂದೆ ಇಂಗ್ಲಿಷ್ ಹಾಗೂ ಹಿಂದಿ ಭಾಷೆಯಲ್ಲಿ ‘ಮೋದಿ ಕಾ ಪರಿವಾರ್’ ಅಂದರೆ ಮೋದಿಯ ಪರಿವಾರದವರು ಎಂಬರ್ಥದ ಪದವನ್ನು ಸೇರಿಸಿಕೊಂಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಬಹುತೇಕ ಎಲ್ಲ ಬಿಜೆಪಿಯ ರಾಷ್ಟ್ರಮಟ್ಟದ ನಾಯಕರು ಇಂದು ತಮ್ಮ ಸೋಶಿಯಲ್‌ ಮೀಡಿಯಾ ಖಾತೆಗಳಲ್ಲಿ ‘ಮೋದಿ ಕಾ ಪರಿವಾರ್’ ಅನ್ನು ಸೇರಿಸಿದ್ದಾರೆ.

ಈ ನಡುವೆ ತೆಲಂಗಾಣದ ಆದಿಲಾಬಾದ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ತನ್ನ ಭಾಷಣದಲ್ಲೂ ಲಾಲೂ ಪ್ರಸಾದ್‌ರ ಟೀಕೆಗೆ ಉತ್ತರವಾಗಿ, “ನೀವು ನನ್ನವರು, ಮೋದಿ ನಿಮ್ಮವ” ಎಂದು ತಿಳಿಸಿದ್ದಾರೆ.

“ನನ್ನ ಜೀವನವು ತೆರೆದ ಪುಸ್ತಕದಂತಿದೆ, ನಾನು ಬಾಲ್ಯದಲ್ಲಿ ನನ್ನ ಮನೆಯನ್ನು ತೊರೆದಿದ್ದೇನೆ. ನಾನು ಈ ದೇಶದ ಜನರಿಗಾಗಿ ಬದುಕುವ ಕನಸನ್ನು ಹೊಂದಿದ್ದೇನೆ. ನನಗೆ ಯಾವುದೇ ವೈಯಕ್ತಿಕ ಕನಸುಗಳಿಲ್ಲ, ಆದರೆ ನಿಮ್ಮ ಕನಸುಗಳು ನನ್ನ ನಿರ್ಣಯವಾಗಿರುತ್ತದೆ” ಎಂದು ಪ್ರಧಾನಿ ಹೇಳಿಕೆ ನೀಡಿದ್ದಾರೆ.

“ದೇಶದ ಕೋಟ್ಯಂತರ ಜನರು ನನ್ನನ್ನು ತಮ್ಮ ಕುಟುಂಬದ ಸದಸ್ಯನೆಂದು ಪರಿಗಣಿಸುತ್ತಾರೆ. ದೇಶದ 140 ಕೋಟಿ ಜನರಿಗೆ ನಾನು ಇದನ್ನು ಹೇಳುತ್ತೇನೆ. ನೀವು ನನ್ನ ಕುಟುಂಬ. ಯಾರೂ ಇಲ್ಲದವರಿಗೂ ಮೋದಿ ಇದ್ದಾನೆ” ಎಂದರು.

2019ರ ಚುನಾವಣೆಯಲ್ಲೂ ಇದೇ ರೀತಿ ಬಳಸಿಕೊಂಡಿದ್ದ ಬಿಜೆಪಿ
2019ರ ಲೋಕಸಭಾ ಚುನಾವಣೆಯ ಸಂದರ್ಭ ಪ್ರಧಾನಿ ಮೋದಿಯವರನ್ನು ಟೀಕಿಸಿದ್ದ ರಾಹುಲ್ ಗಾಂಧಿ, “ಚೌಕೀದಾರ್ ಚೋರ್ ಹೈ” ಎಂದು ಹೇಳಿದ್ದರು. ಆಗ ಇದನ್ನೇ ಬಳಸಿಕೊಂಡಿದ್ದ ಬಿಜೆಪಿ, “ಮೈ ಭಿ ಚೌಕೀದಾರ್’ (ನಾನೂ ಸಹ ಕಾವಲುಗಾರ) ಎಂದು ಅಭಿಯಾನ ನಡೆಸಿದ್ದರು.

‘ಎಲ್ಲವೂ ಬಿಜೆಪಿಯವರ ನಾಟಕ’ ಎಂದ ಕಾಂಗ್ರೆಸ್

‘ಮೋದಿ ಕಾ ಪರಿವಾರ್’ ಅಭಿಯಾನಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್ ಮುಖಂಡ ಪವನ್ ಖೇರಾ, “ಈ ದೇಶದಲ್ಲಿ ಪ್ರತಿ ಗಂಟೆಗೆ ಒಬ್ಬ ರೈತ ಮತ್ತು ಇಬ್ಬರು ಯುವಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಅವರ ಬಗ್ಗೆ ಚಿಂತೆ ಇದ್ದಿದ್ದರೆ ಅವರ ಹೆಸರಿಗೆ ರೈತ ಕುಟುಂಬ ಎಂದು ಸೇರಿಸುತ್ತಿದ್ದರು. ಪ್ರತಿ ಗಂಟೆಗೆ ಆತ್ಮಹತ್ಯೆ ಮಾಡಿಕೊಳ್ಳುವ ಆ ಇಬ್ಬರು ಯುವಕರ ಆತ್ಮಹತ್ಯೆಯ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯಿಸುವಂತೆ ನಾವು ಬಯಸುತ್ತೇವೆ. ಇವೆಲ್ಲವೂ ನಾಟಕ. ನೈಜ ಸಮಸ್ಯೆಗಳ ಬಗ್ಗೆ ಜನರು ಮಾತನಾಡದಂತೆ ಹಾಗೂ ಗಮನ ಬೇರೆಡೆಗೆ ಸೆಳೆಯುವಂತೆ ಮಾಡುವ ಷಡ್ಯಂತ್ರವಷ್ಟೇ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...