ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜ ಎಂದ ಸಿ ಟಿ ರವಿ ಒಬ್ಬ ಗಾ…ಡು: ಶಾಸಕ ನರೇಂದ್ರಸ್ವಾಮಿ ಕಿಡಿ

Date:

ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಉಂಟಾಗಿರುವ ಧ್ವಜ ವಿವಾದದ ಕುರಿತು ಮಾತನಾಡುವಾಗ ಬಿಜೆಪಿ ನಾಯಕ ಸಿ.ಟಿ ರವಿ, ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜಕ್ಕೆ ಹೋಲಿಕೆ ಮಾಡಿರುವುದು ಈಗ ಮತ್ತೊಂದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

ಧ್ವಜ ವಿವಾದದ ಬಗ್ಗೆ ನಿನ್ನೆ ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಹಿಂದಿಯಲ್ಲಿ ಮಾತನಾಡುತ್ತಿದ್ದ ವೇಳೆ ಸಿ.ಟಿ ರವಿ, “ಹನುಮ ಧ್ವಜವನ್ನು ಕೆಳಗಿಳಿಸಿ ತಾಲಿಬಾನ್‌ ಧ್ವಜವನ್ನು ಹಾರಿಸಿದ್ದಾರೆ” ಎಂದಿದ್ದಾರೆ. ಅಧಿಕಾರಿಗಳು ಕೆರಗೋಡಿನಲ್ಲಿ ಹನುಮ ಧ್ವಜ ಇಳಿಸಿದ್ದು ನಿಜ, ಅದರ ಬದಲಾಗಿ ರಾಷ್ಟ್ರ ಧ್ವಜವನ್ನು ಹಾರಿಸಿದ್ದಾರೆ. ರಾಷ್ಟ್ರಧ್ವಜವನ್ನು ತಾಲಿಬಾನಿ ಧ್ವಜಕ್ಕೆ ಹೋಲಿಕೆ ಮಾಡಿರುವುದು ಕಾಂಗ್ರೆಸ್ ಪಾಳಯಕ್ಕೆ ಅಸ್ತ್ರವಾಗಿ ಸಿಕ್ಕಿದೆ.

ಧ್ವಜ ವಿವಾದದ ಬಗ್ಗೆ ಇಂದು ಮಂಡ್ಯದ ಪತ್ರಕರ್ತರ ಭವನದಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಸುದ್ದಿಗೋಷ್ಠಿಯನ್ನು ಆಯೋಜಿಸಲಾಗಿತ್ತು. ಈ ಸುದ್ದಿಗೋಷ್ಠಿಯಲ್ಲಿ ಮಂಡ್ಯ ಶಾಸಕ ಗಣಿಗ ರವಿ, ಮಳವಳ್ಳಿ ಶಾಸಕ ಪಿ.ಎಂ ನರೇಂದ್ರಸ್ವಾಮಿ, ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸೇರಿದಂತೆ ಮತ್ತಿತತರು ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಪತ್ರಕರ್ತರನ್ನುದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಆಕ್ರೋಶಭರಿತರಾದ ಮಳವಳ್ಳಿ ಶಾಸಕ ನರೇಂದ್ರಸ್ವಾಮಿ, “ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜಕ್ಕೆ ಹೋಲಿಸಿದ ಬಿಜೆಪಿಯ ಸಿ ಟಿ ರವಿ ಒಬ್ಬ ಅಯೋಗ್ಯ, ಗಾ…ಡು” ಎಂದು ಹೇಳಿಕೆ ನೀಡಿದ್ದಾರೆ.

“ಸಿ ಟಿ ರವಿ ಒಬ್ಬ ಅಯೋಗ್ಯ. ಇದನ್ನು ಬಹಿರಂಗವಾಗಿಯೇ ಹೇಳುತ್ತೇನೆ. ಯಾಕೆಂದರೆ ಆತ ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜಕ್ಕೆ ಹೋಲಿಸಿದ್ದಾನೆ. ನಾಲಗೆಯಲ್ಲಿ ಹಿಡಿತವಿರಲಿ. ಯಾವ ವಿಚಾರಕ್ಕೆ ಅವರು ಪ್ರಚೋದನೆ ಕೊಡಲು ಮಂಡ್ಯಕ್ಕೆ ಬರುತ್ತಿದ್ದಾರೆ. ರಾಷ್ಟ್ರಕ್ಕೆ, ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡ್ತಿದ್ದಾರೆ. ಹೆತ್ತ ತಾಯಿಗೆ ಅವಮಾನ ಮಾಡ್ತಾರೆ” ಎನ್ನುತ್ತಿದ್ದಾಗ, ಪತ್ರಕರ್ತರು, “ಅವರ ವಿರುದ್ಧ ಕ್ರಮ ಕೈಗೊಳ್ಳಲು ನಿಮ್ಮ ಸರ್ಕಾರಕ್ಕೆ ಭಯ ಯಾಕೆ?” ಎಂದು ಕೇಳಿದಾಗ, “ನಮಗೆ ಅವರ ಬಗ್ಗೆ ಏನೂ ಭಯವಿಲ್ಲ. ಅವನೊಬ್ಬ ಗಾ…ಡು. ನಾವು ಗಂಡಸು. ರಾಷ್ಟ್ರದ ವಿಚಾರ ಬಂದಾಗ ನಾವು ಪ್ರಾಣ ಕೊಡುವುದಕ್ಕೂ ಸಿದ್ಧ” ಎಂದು ಆಕ್ರೋಶಭರಿತರಾಗಿ ಶಾಸಕ ನರೇಂದ್ರಸ್ವಾಮಿ ನುಡಿದಿದ್ದಾರೆ.

ಇದೇ ಸಂದರ್ಭದಲ್ಲಿ ಹತ್ತಿರ ಕುಳಿತಿದ್ದ ಸಚಿವ ಚಲುವರಾಯಸ್ವಾಮಿ ಮಾತಿನ ಹಿಡಿತ ತಪ್ಪದಂತೆ ಸೂಚಿಸಿರುವುದು ಕಂಡು ಬಂತು.

ಇದನ್ನು ಓದಿದ್ದೀರಾ? ಅಫ್ಘಾನಿಸ್ತಾನ | ತಾಲಿಬಾನ್ ಆಯೋಜಿಸಿದ್ದ ಸಮಾವೇಶದಲ್ಲಿ ಭಾರತ ಸಹಿತ 10 ದೇಶಗಳು ಭಾಗಿ

“ಸಿ ಟಿ ರವಿಯ ವಿರುದ್ಧ ಇಂದೇ ದೂರು ಕೊಡುತ್ತೇನೆ. ಸೋಷಿಯಲ್ ಮೀಡಿಯಾದಲ್ಲಿ ಬಹಿರಂಗವಾಗಿಯೇ ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜಕ್ಕೆ ಹೋಲಿಸಿದ್ದಾನೆ. ಗಡಿಯಲ್ಲಿ ನಿಂತು ದೇಶ ಕಾಯುವ ಸೈನಿಕ, ತನ್ನ ಪ್ರಾಣ ಕಳಕೊಂಡರೂ ಕೂಡ ಧ್ವಜವನ್ನು ಕೆಳಗೆ ಬೀಳದಂತೆ ಕಾಪಾಡುತ್ತಾನೆ. ಅಂತಹ ಧ್ವಜಕ್ಕೆ ನಮ್ಮ ಜಿಲ್ಲೆಗೆ ಬಂದು ಸಿ ಟಿ ರವಿ ಅವಮಾನ ಮಾಡಿದ್ದಾರೆ. ಜನರಿಗೆ ಮಾಧ್ಯಮಗಳು ಈ ಬಗ್ಗೆ ದಿಕ್ಕು ತೋರಿಸಬೇಕು. ರಾಷ್ಟ್ರಧ್ವಜದ ವಿಚಾರದಲ್ಲಿ ಇಡೀ ದೇಶ ಒಗ್ಗೂಡಬೇಕಿದೆ. ಪ್ರತಿಭಟನೆ ನಡೆಸಬೇಕು” ಎಂದು ಇದೇ ವೇಳೆ ಶಾಸಕ ನರೇಂದ್ರಸ್ವಾಮಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...