ಪ್ರದೀಪ್‌ ಈಶ್ವರ್‌ ರಾಜೀನಾಮೆ ನೀಡಿ ಸ್ವತಂತ್ರವಾಗಿ ಸ್ಪರ್ಧಿಸಿ ಗೆಲ್ಲಲಿ ನೋಡೋಣ; ಸುಧಾಕರ್‌ ಸವಾಲು

Date:

  • ಸ್ವತಂತ್ರವಾಗಿ ಸ್ಪರ್ಧಿಸಿದರೆ 5 ಸಾವಿರ ಮತ ಪಡೆಯಲು ಸಾಧ್ಯವಿಲ್ಲ
  • ಕಾಂಗ್ರೆಸ್‌ ಪಕ್ಷ ಮತ್ತು ಮುಖಂಡರ ಶ್ರಮದಿಂದ ಗೆದ್ದಿರಬಹುದು

ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ರಾಜೀನಾಮೆ ನೀಡಿ ಸ್ವತಂತ್ರವಾಗಿ ನನ್ನ ವಿರುದ್ಧ ಸ್ಪರ್ಧಿಸಲಿ ಯಾರು ಗೆಲ್ಲುತ್ತಾರೆ ಎಂಬುದನ್ನು ನೋಡೇ ಬಿಡೋಣ ಎಂದು ಮಾಜಿ ಸಚಿವ ಡಾ. ಕೆ ಸುಧಾಕರ್‌ ಸವಾಲು ಹಾಕಿದರು.

ಬಿಜೆಪಿ ಮುಖಂಡನ ಮೇಲೆ ಶಾಸಕ ಪ್ರದೀಪ್‍ ಈಶ್ವರ್‌ ಬೆಂಬಲಿಗರು ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆ ನಡೆಸಲು ಯತ್ನಿಸಿದ್ದನ್ನು ಖಂಡಿಸಿ ಚಿಕ್ಕಬಳ್ಳಾಪುರ ನಗರದ ಎಸ್‌ಪಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಎಸ್‌ಪಿ ಡಿ ಎಲ್‍ ನಾಗೇಶ್‍ ಅವರಿಗೆ ದೂರು ಸಲ್ಲಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಡಾ. ಕೆ ಸುಧಾಕರ್‌ ಮಾತನಾಡಿದರು.

“ಇವರು ಸ್ವತಂತ್ರವಾಗಿ ಸ್ಪರ್ಧಿಸಿದರೆ 5 ಸಾವಿರ ಮತಗಳನ್ನು ಪಡೆಯಲು ಸಾಧ್ಯವಿಲ್ಲ. ಕಾಂಗ್ರೆಸ್‌ ಪಕ್ಷ ಮತ್ತು ಮುಖಂಡರ ಶ್ರಮದಿಂದ ಗೆದ್ದಿರಬಹುದು. ಆದರೆ, ಈಗ ರಾಜೀನಾಮೆ ನೀಡಿ ನನ್ನ ವಿರುದ್ಧ ಸ್ವತಂತ್ರವಾಗಿ ಸ್ಪರ್ಧೆಗೆ ನಿಂತು ಗೆಲ್ಲಲಿ ನೋಡೋಣ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಸೋತಿರಬಹುದು. ಆದರೆ, ಸತ್ತಿಲ್ಲ. ನಮ್ಮ ಪಕ್ಷದ ಯಾವುದೇ ಕಾರ್ಯಕರ್ತನಿಗೆ ತೊಂದರೆ ಕೊಟ್ಟರೆ ಸುಮ್ಮನೆ ಕೂರುವುದಿಲ್ಲ. ಆರು ತಿಂಗಳವರೆಗೂ ಯಾವುದೇ ಪ್ರತಿಕ್ರಿಯೆ ಕೊಡುವುದು ಬೇಡ ಎಂದು ಸುಮ್ಮನಿದ್ದೆ. ಆದರೆ, ಕ್ಷೇತ್ರದಲ್ಲಿ ದಿನೇ ದಿನೇ ಶಾಸಕರ ಬೆಂಬಲಿಗರ ಉಪಟಳ ಹೆಚ್ಚಾಗಿದೆ. ದಿಬ್ಬೂರಲ್ಲಿ ಇತ್ತೀಚೆಗೆ ನಮ್ಮ ಬಿಜೆಪಿ ಕಾರ್ಯಕರ್ತ ನವೀನ್‌ ಎಂಬುವರ ಮೇಲೆ ದೌರ್ಜನ್ಯ ಎಸಗಿದ್ದಾರೆ. ಇದೆಲ್ಲವನ್ನು ಸಹಿಸಲ್ಲ” ಎಂದು ಎಚ್ಚರಿಕೆ ನೀಡಿದರು.

“ಅಧಿಕಾರಿಗಳನ್ನು ಕರೆದುಕೊಂಡು ಬೆಂಗಳೂರಿನ ಅವರ ಸಂಸ್ಥೆಯಲ್ಲಿ ಸಭೆ ನಡೆಸಿರುವುದನ್ನು ಪ್ರಶ್ನಿಸಿದ್ದೇ ತಪ್ಪಾ? ಅವರನ್ನು ಯಾರೂ ಪ್ರಶ್ನಿಸಲೇಬಾರದಾ? ವಾಕ್‌ ಸ್ವಾತಂತ್ರ್ಯವೇ ಇಲ್ಲವೇ? ಪ್ರಶ್ನೆ ಮಾಡಿದ್ದಕ್ಕೆ ಅವರ‍್ಯಾರು ಗೆಲ್ಲಲ್ಲ ಎಂದು ನಗರಸಭೆ ಸದಸ್ಯರ ವಿರುದ್ಧ ಹೇಳಿಕೆ ಕೊಟ್ಟು ಪ್ರಚೋದಿಸಿರುವವರೇ ಇವರು. ಇದರ ವಿರುದ್ಧ ನಮ್ಮ ಮುಖಂಡರು ಮಾತನಾಡಿದರೆ ಅವರ ಅಂಗಡಿ ಬಳಿ ಹೋಗಿ ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿರುವುದು ಖಂಡನೀಯ” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಹಾಲು ಉತ್ಪಾದಕರ ಬ್ಯಾಂಕ್ ಮಾಡಲು ಸರ್ಕಾರದ‌ ಜೊತೆ ಚರ್ಚೆ: ಬಸವರಾಜ ಬೊಮ್ಮಾಯಿ

“ಕೂಡಲೇ ಗೂಂಡಾಗಿರಿ ಮಾಡಲು ಬಂದ ಅವರ ವಿರುದ್ಧ ತನಿಖೆ ನಡೆಸಿ ತಪ್ಪಿದ್ದರೆ ಇನ್ನೊಂದು ದಿನದಲ್ಲಿ ಎಫ್‌ಐಆರ್‌ ದಾಖಲಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು. ಕ್ಷೇತ್ರದಲ್ಲಿ ನಮ್ಮ ಕಾರ್ಯಕರ್ತರ ಮೇಲೆ ದೌರ್ಜನ್ಯವೆಸಗಿದರೆ ಯಾವುದೇ ಕಾರಣಕ್ಕೂ ಸುಮ್ಮನಿರುವ ಪ್ರಶ್ನೆಯೇ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಸ್‌ಪಿ ಡಿ ಎಲ್‌ ನಾಗೇಶ್‌ ಅವರಿಗೆ ಶಾಸಕ ಪ್ರದೀಪ್‌ ಈಶ್ವರ್‌ ಬೆಂಬಲಿಗರ ದೌರ್ಜನ್ಯವನ್ನು ವಿವರಿಸಿ ದೂರು ಕೊಟ್ಟು ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...