ಮಹಿಳೆಯರ ಉಡುಗೆ ಬಗ್ಗೆ ಬಿಜೆಪಿ ಮುಖಂಡನ ಅವಹೇಳನ; ಬಿಜೆಪಿಯ ಮಹಿಳಾ ವಿರೋಧಿ ಸಿದ್ಧಾಂತದ ಪ್ರತಿಬಿಂಬ

Date:

ಮಹಿಳೆಯರ ಉಡುಗೆಗಳ ಬಗ್ಗೆ ಬಿಜೆಪಿಯ ಮಾಜಿ ಶಾಸಕರೊಬ್ಬರು ನಿಂದನಾತ್ಮಕ ಹೇಳಿಕೆ ನೀಡಿದ್ದು, ಅವರ ಹೇಳಿಕೆಯನ್ನು ಕಾಂಗ್ರೆಸ್‌ ಖಂಡಿಸಿದೆ. ಬಿಜೆಪಿಗರ ಇಂತಹ ಹೇಳಿಕೆಗಳು ಮಹಿಳೆಯರ ಕುರಿತು ಬಿಜೆಪಿ ನಾಯಕರಲ್ಲಿರುವ ವಿಕೃತ ಮನಸ್ಥಿತಿ ಮತ್ತು ಮಹಿಳಾ ವಿರೋಧಿ ಸಿದ್ದಾಂತವನ್ನು ಪ್ರತಿಬಿಂಬಿಸುತ್ತದೆ ಎಂದು ಕಾಂಗ್ರೆಸ್‌ ಹೇಳಿದೆ.

ಉತ್ತರಾಖಂಡದ ಬಿಜೆಪಿ ಮಾಜಿ ಶಾಸಕ ಹರ್ಭಜನ್ ಸಿಂಗ್ ಚೀಮಾ ಅವರು “ಮಹಿಳೆಯರ ವಿರುದ್ಧ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳಿಗೆ ಮಹಿಳೆಯರ ಉಡುಗೆ ತೊಡುಗೆಯೇ ಕಾರಣ. ಮಹಿಳೆಯರು ಭಾರತೀಯ ಸಂಸ್ಕೃತಿಯಂತೆ ಬಟ್ಟೆ ತೊಡಬೇಕು” ಎಂದು ಹೇಳಿದ್ದರು.

ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಉತ್ತರಾಖಂಡದ ಕಾಂಗ್ರೆಸ್ ವಕ್ತಾರ ಗರಿಮಾ ಮೆಹ್ರಾ ದಸೌನಿ, “ಚೀಮಾ ಅವರ ಹೇಳಿಕೆಯು ಬಿಜೆಪಿಯ ಸಂಸ್ಕೃತಿ, ಸ್ವಭಾವ ಮತ್ತು ಮುಖವಾಡವನ್ನು ಬಹಿರಂಗಪಡಿಸಿದೆ. ಮಹಿಳೆಯರ ಪ್ರಗತಿ ಮತ್ತು ಅಭಿವೃದ್ಧಿಗೆ ವಿರುದ್ಧವಾದ ಮನಸ್ಥಿತಿಯನ್ನು ಬಿಜೆಪಿ ಪ್ರಚಾರ ಮಾಡುತ್ತಿದೆ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳಲ್ಲಿ ಹೆಚ್ಚಿನವು ಅಪ್ರಾಪ್ತರ ಮೇಲೆ ನಡೆಯುತ್ತಿವೆ. ಅಪ್ರಾಪ್ತರ ಮೇಲಾಗುವ ಕೃತ್ಯಗಳನ್ನು ತಡೆಯಲು ಅವರು ಏನನ್ನು ಧರಿಸಬೇಕು? ಚೀಮಾ ಅವರ ಹೇಳಿಕೆಯನ್ನು ‘ಕ್ಷಮಿಸಲಾಗದು’. ಅವರು ಕ್ಷಮೆಯಾಚಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಮಹಿಳೆಯರನ್ನು ದೂಷಿಸುವ ಮನಸ್ಥಿತಿಯನ್ನು ಬಿಜೆಪಿ ಉತ್ತೇಜಿಸುತ್ತಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...