ಕಿರುಚಿದರೆ ಕತ್ತು ಹಿಸುಕುತ್ತೇನೆ: ಪ್ರತಿಭಟನಾನಿರತ ಮಹಿಳೆಯರಿಗೆ ಬೆದರಿಕೆ ಹಾಕಿದ ಬಿಜೆಪಿ ನಾಯಕ

Date:

ಪಶ್ಚಿಮ ಬಂಗಾಳದ ಹಿರಿಯ ಬಿಜೆಪಿ ನಾಯಕ ದಿಲೀಪ್ ಘೋಷ್ ಶುಕ್ರವಾರ ಪ್ರತಿಭಟನಾನಿರತ ಮಹಿಳೆಯರ ಗುಂಪಿನೊಂದಿಗೆ ತೀವ್ರ ವಾಗ್ವಾದ ನಡೆಸಿದ್ದು, “ಕಿರುಚಬೇಡಿ, ನಿಮ್ಮ ಕತ್ತು ಹಿಸುಕುತ್ತೇನೆ” ಎಂದು ಮಹಿಳೆಯರಿಗೆ ಬೆದರಿಕೆ ಹಾಕಿದ್ದಾರೆ.

ಮಹಿಳೆಯರು ಕ್ಷೇತ್ರದ ಅಭಿವೃದ್ಧಿಯಾಗಿಲ್ಲ ಎಂದು ಆರೋಪಿಸಿ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಹಾಗೆಯೇ ದಿಲೀಪ್ ಘೋಷ್ ಸಂಸದರಾಗಿದ್ದ ಸಂದರ್ಭದಲ್ಲಿ ಒಮ್ಮೆಯೂ ಕ್ಷೇತ್ರದಲ್ಲಿ ನೋಡಿಲ್ಲ ಎಂದು ಮಹಿಳೆಯರು ದೂರಿದರು.

ಇದನ್ನು ಓದಿದ್ದೀರಾ? ಚಿತ್ರದುರ್ಗ | ಪಿಎಸ್​ಐ ಮೇಲೆ ಬಿಜೆಪಿ ಮುಖಂಡನಿಂದ ಹಲ್ಲೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಶ್ಚಿಮ ಬಂಗಾಳದ ಖರಗ್‌ಪುರದಲ್ಲಿ ರಸ್ತೆ ಉದ್ಘಾಟನೆಯ ಸಂದರ್ಭದಲ್ಲಿ ಈ ಘರ್ಷಣೆ ಸಂಭವಿಸಿದೆ. ಸ್ಥಳೀಯ ಮಹಿಳೆಯರು ಮಾಜಿ ಬಿಜೆಪಿ ಸಂಸದರನ್ನು ತರಾಟೆಗೆ ತೆಗೆದುಕೊಂಡಿದ್ದು, ತೀವ್ರ ವಾಗ್ವಾದ ಏರ್ಪಟ್ಟಿತು. ದಿಲೀಪ್ ಘೋಷ್ ಅವಾಚ್ಯ ಪದಗಳನ್ನು ಬಳಸಿ ಮಹಿಳೆಯರಿಗೆ ಬೈದಿದ್ದು, “ಕಿರುಚಬೇಡಿ, ಕೂಗಾಡಿದರೆ ನಿಮ್ಮ ಕತ್ತು ಹಿಸುಕುತ್ತೇನೆ” ಎಂದು ಬೆದರಿಕೆ ಹಾಕಿದ್ದಾರೆ.

ಪುರಸಭೆಯಿಂದ ರಸ್ತೆ ನಿರ್ಮಿಸಲಾಗುತ್ತಿದ್ದರೂ ಬಿಜೆಪಿ ನಾಯಕ ರಸ್ತೆ ಉದ್ಘಾಟನೆಗೆ ಏಕೆ ಹಾಜರಾಗುತ್ತಿದ್ದಾರೆ ಎಂದು ಮಹಿಳೆಯರು ಪ್ರಶ್ನಿಸಿದ್ದಾರೆ. ಈ ವೇಳೆ “ಇದಕ್ಕೆ ನಾನು ಹಣ ನೀಡಿದ್ದೇನೆ; ಇದು ನಿಮ್ಮ ಅಪ್ಪನ ಹಣವಲ್ಲ. ಹೋಗಿ ಪ್ರದೀಪ್ ಸರ್ಕಾರ್ (ಸ್ಥಳೀಯ ಟಿಎಂಸಿ ಕೌನ್ಸಿಲರ್) ಅವರನ್ನು ಕೇಳಿ” ಎಂದು ಬಿಜೆಪಿ ನಾಯಕ ಹೇಳಿದ್ದಾರೆ.

“ತಂದೆಯನ್ನು ಮಧ್ಯ ತರುವುದೇಕೆ? ನೀವು ಇಲ್ಲಿ ಈ ಹಿಂದೆ ಸಂಸರಾಗಿದ್ದದ್ದು” ಎಂದು ಮಹಿಳೆಯೊಬ್ಬರು ಪ್ರತ್ಯುತ್ತರ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಘೋಷ್, “ನಾನು ನಿಮ್ಮ ಹದಿನಾಲ್ಕು ತಲೆಮಾರುಗಳನ್ನು ಬೆಳೆಸುತ್ತೇನೆ” ಎಂದು ಹಣದ ದರ್ಪದಿಂದ ನುಡಿದಿದ್ದಾರೆ.

ಘೋಷ್ ಅವರ ಭದ್ರತಾ ಸಿಬ್ಬಂದಿ ಮತ್ತು ಬಿಜೆಪಿ ಕಾರ್ಯಕರ್ತರು ಮಧ್ಯಪ್ರವೇಶಿಸಲು ಪ್ರಯತ್ನಿಸುತ್ತಿದ್ದಂತೆ ಮಹಿಳೆಯರು ಘೋಷ್ ಅವರ ಕಾರನ್ನು ಸುತ್ತುವರೆದರು. ಈ ನಡುವೆ ಪ್ರತಿಭಟನಾಕಾರರು ಟಿಎಂಸಿ ಬೆಂಬಲಿಗರು ಎಂದು ಘೋಷ್ ಆರೋಪಿಸಿದ್ದಾರೆ.

ಬಿಜೆಪಿ ನಾಯಕನ ಈ ವರ್ತನೆಯನ್ನು ಟಿಎಂಸಿ ಖಂಡಿಸಿದೆ. ಹಾಗೆಯೇ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಆದರೆ ಕೆಲವ ಬಿಜೆಪಿ ಕಾರ್ಯಕರ್ತರು ಘೋಷ್ ಮಹಿಳೆಯರಿಗೆ ಬೆದರಿಕೆ ನೀಡಿರುವುದನ್ನು ಹಾಡಿ ಹೊಗಳಿದ್ದಾರೆ. ಬಿಜೆಪಿ ನಾಯಕನ ವರ್ತನೆ ಖಂಡನಾರ್ಹ ಮತ್ತು ಅಧಿಕಾರ, ಹಣದ ದರ್ಪ ಸ್ಪಷ್ಟವಾಗಿ ಕಾಣುತ್ತಿದೆ ಎಂದು ನೆಟ್ಟಿಗರು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...