ಮಲ್ಲಿಕಾರ್ಜುನ ಖರ್ಗೆಯ ಸಾವು ಬಯಸಿದ ಬಿಜೆಪಿ ನಾಯಕ; ಮೋದಿ ಕ್ಷಮೆಗೆ ಕಾಂಗ್ರೆಸ್ ಆಗ್ರಹ

Date:

  • ಮಲ್ಲಿಕಾರ್ಜುನ ಖರ್ಗೆ ವಯಸ್ಸು ಉಲ್ಲೇಖಿಸಿ ಬಿಜೆಪಿ ಅಪಮಾನ
  • ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ಹರಿಹಾಯ್ದ ಸುರ್ಜೇವಾಲ

ರಾಜಸ್ಥಾನ ಬಿಜೆಪಿ ಕಾರ್ಯದರ್ಶಿ, ಶಾಸಕ ಮದನ್ ದಿಲಾವರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾವು ಬಯಸುವ ರೀತಿಯಲ್ಲಿ ಮಾತನಾಡಿ ವಿವಾದಕ್ಕೀಡಾಗಿದ್ದಾರೆ.

“ಮಲ್ಲಿಕಾರ್ಜುನ ಖರ್ಗೆ ಅವರಿಗೆ 80 ವರ್ಷ ವಯಸ್ಸಾಗಿದೆ. ದೇವರು ಅವರನ್ನು ಯಾವಾಗ ಬೇಕಾದರೂ ಕರೆದುಕೊಳ್ಳಬಹುದು” ಎಂದು ಮದನ್ ದಿಲಾವರ್ ಹೇಳಿಕೆ ನೀಡಿದ್ದು, ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿ ನಡೆಸಿರುವ ಎಐಸಿಸಿ ರಾಜ್ಯ ಚುನಾವಣಾ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, “ಬಿಜೆಪಿ ಶಾಸಕ ಖರ್ಗೆ ಅವರ ಸಾವು ಬಯಸುವ ಮೂಲಕ ದಲಿತ ಸಮುದಾಯದ ಶ್ರೇಷ್ಠ ನಾಯಕನ ವಿರುದ್ಧ ಬಿಜೆಪಿಯ ದ್ವೇಷ ಮನೋಭಾವ ಎದ್ದು ಕಾಣುತ್ತಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ ನಾಯಕರು ಖರ್ಗೆ ಅವರ ಸಾವು ಬಯಸಿರುವ ಹಿನ್ನೆಲೆ ಪ್ರಧಾನಿ ಮೋದಿ ಕ್ಷಮೆಯಾಚಿಸಬೇಕು” ಎಂದು ಸುರ್ಜೇವಾಲ ಆಗ್ರಹಿಸಿದ್ದಾರೆ.

“ಮಲ್ಲಿಕಾರ್ಜುನ ಖರ್ಗೆ ಕಾರ್ಮಿಕ ಕುಟುಂಬದಲ್ಲಿ ಜನಿಸಿದ್ದಾರೆ. ಬ್ಲಾಕ್‌ ಅಧ್ಯಕ್ಷ ಸ್ಥಾನದಿಂದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನದವರೆಗೂ ಏರಿದ್ದಾರೆ. ಅಂತವರ ವಿರುದ್ಧ ಕೀಳು ಮಟ್ಟದ ಮಾತುಗಳು ಸಹಿಸಲು ಸಾಧ್ಯವಿಲ್ಲ” ಎಂದು ಕಿಡಿಕಾರಿದ್ದಾರೆ.

“ರಾಜ್ಯದ ಜನರು ಖರ್ಗೆ ಅವರನ್ನು ಪಕ್ಷಾತೀತವಾಗಿ ಸೋಲಿಲ್ಲದ ಸರದಾರ ಎನ್ನುತ್ತಾರೆ. ಇಂತಹವರ ಸಾವನ್ನು ಬಿಜೆಪಿ ಬಯಸುತ್ತಿದೆ. ಮೋದಿ ಅವರು ಖರ್ಗೆ ಅವರನ್ನು ದ್ವೇಷಿಸುವ ಕಾರಣಕ್ಕೆ ಬೊಮ್ಮಾಯಿ ಅವರ ಸರ್ಕಾರ ಅಧಿಕಾರ ಕಳೆದುಕೊಂಡು 40ಕ್ಕಿಂತ ಕಡಿಮೆ ಸ್ಥಾನಕ್ಕೆ ಕುಸಿಯುತ್ತದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೋಮುಗಲಭೆ ಸೃಷ್ಟಿಸುವವರ ಮೇಲೆ ಕಠಿಣ ಕ್ರಮ ಎಂದರೆ ಬಿಜೆಪಿಗೆ ಯಾಕೆ ನೋವು: ಸಿದ್ದರಾಮಯ್ಯ

“ಬಿಜೆಪಿ ನಾಯಕರ ಬಳಿ ಭ್ರಷ್ಟಾಚಾರ, ನಿರುದ್ಯೋಗಕ್ಕೆ ಉತ್ತರವಿಲ್ಲ ಎಂಬ ಕಾರಣಕ್ಕೆ ಖರ್ಗೆ ಅವರ ಸಾವು ಬಯಸುತ್ತಿದೆಯೇ, ಬಿಜೆಪಿ ಇಂತಹ ಕೀಳು ರಾಜಕೀಯಕ್ಕೆ ಇಳಿಯುತ್ತದೆಯೇ” ಎಂದು ಪ್ರಶ್ನಿಸಿದ್ದಾರೆ.

“ಪ್ರಧಾನಮಂತ್ರಿಗಳೇ, ನೀವು ಕರ್ನಾಟಕ ರಾಜ್ಯದಲ್ಲಿದ್ದು, ನಿಮ್ಮ ಶಾಸಕರು ಖರ್ಗೆ ಅವರ ಸಾವು ಬಯಸುತ್ತಿದ್ದು, ನೀವು ಮೌನವಾಗಿರುವುದೇಕೆ? ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಏಕೆ?” ಎಂದು ಕೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...