ಬಿಲ್ ಬಾಕಿ | ಬಿಜೆಪಿ ನಾಯಕರ ಹತಾಶೆಯ ಆರೋಪ : ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು

Date:

  • ‘ಬಾಕಿ ಬಿಲ್ ಪಾವತಿ ವಿಳಂಬ ಆಗುತ್ತಿದೆ ಎಂದು ಗುತ್ತಿಗೆದಾರರು ಹೇಳಿದ್ದಾರೆ’
  • ‘ಪರಿಶೀಲಿಸಿ ಹಣ ಬಿಡುಗಡೆ ಮಾಡುವುದಾಗಿ ಡಿಸಿಎಂ ಡಿಕೆಶಿ ಹೇಳಿದ್ದಾರೆ’

ಬಿಜೆಪಿ ನಾಯಕರು ಹತಾಶೆಯಿಂದ ಆರೋಪ ಮಾಡುತ್ತಿದ್ದಾರೆ. ಎಲ್ಲಿ ಹೋಗಿ ಧ್ವನಿ ಎತ್ತಬೇಕೋ ಅಲ್ಲಿ ಇವರು ಮಾತಾಡುತ್ತಿಲ್ಲ. ಮೊದಲು ಬಿಜೆಪಿಯವರು ವಿಪಕ್ಷ ನಾಯಕರನ್ನು ಆಯ್ಕೆ ಮಾಡಲಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದರು.

ಸಿಸಿಎಂ ಡಿಕೆ ಶಿವಕುಮಾರ್ ವಿರುದ್ಧ 15% ಕಮಿಷನ್ ಆರೋಪ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಗುತ್ತಿಗೆದಾರರು ಕಮಿಷನ್ ಕೇಳಿದ್ದಾರೆ ಅಂತ ಹೇಳಿಲ್ಲ. ಬಾಕಿ ಬಿಲ್ ಪಾವತಿ ವಿಳಂಬ ಆಗುತ್ತಿದೆ ಎಂದು ಹೇಳಿದ್ದಾರೆ” ಎಂದು ಸಮರ್ಥಿಸಿಕೊಂಡರು.

“ಕೆಲಸ ಆಗಿದ್ದರೆ ಹಣ ಬಿಡುಗಡೆ ಮಾಡೋದಾಗಿ ಸಿಎಂ ಹೇಳಿದ್ದಾರೆ. ಪರಿಶೀಲಿಸಿ ಹಣ ಬಿಡುಗಡೆ ಮಾಡುವುದಾಗಿ ಡಿಸಿಎಂ ಹೇಳಿದ್ದಾರೆ. ಆದರೆ, ಈ ಬಿಜೆಪಿ ನಾಯಕರು ಹತಾಶೆಯಿಂದ ಸುಳ್ಳು ಆರೋಪ ಮಾಡುತ್ತಿದ್ದಾರೆ” ಎಂದು ಹರಿಹಾಯ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...