ಬಿಜೆಪಿ ನಾಯಕರು ಹತಾಶರಾಗಿ ಸರ್ಕಾರದ ವಿರುದ್ಧ ಅಪಪ್ರಚಾರಕ್ಕಿಳಿದಿದ್ದಾರೆ: ಕೃಷ್ಣಭೈರೇಗೌಡ

Date:

ಬಿಜೆಪಿ ನಾಯಕರು ಹತಾಶರಾಗಿದ್ದಾರೆ, ಹಾಗಾಗಿ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಅಪಪ್ರಚಾರಕ್ಕೆ ಇಳಿದಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಆರೋಪಿಸಿದರು.

ಕಲಬುರಗಿ ವಿಭಾಗೀಯ ಮಟ್ಟದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ “ರಾಜ್ಯ ಸರ್ಕಾರ ನೆರೆ ನಿರ್ವಹಣೆ ವಿಚಾರದಲ್ಲಿ ವಿಫಲವಾಗಿದೆ” ಎಂಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದರು.

“ನಮ್ಮ ಸರ್ಕಾರ ರಾಜ್ಯದ ಜನರ ನಾಡಿಮಿಡಿತ ಅರಿತು ಕೆಲಸ ಮಾಡುತ್ತಿದೆ. ಬಿಜೆಪಿ ನಾಯಕರು ತಮ್ಮ ಮನೆಯ ಹುಳುಕನ್ನು ಮುಚ್ಚಿಕೊಳ್ಳಲು ರಾಜಕೀಯ ಬೆರೆಸುತ್ತಿದ್ದಾರೆ. ಎರಡೂವರೆ ತಿಂಗಳಾದರೂ ವಿಧಾನಸಭೆ, ಪರಿಷತ್‌ನಲ್ಲಿ ವಿರೋಧ ಪಕ್ಷ ನಾಯಕನ ಆಯ್ಕೆ ಮಾಡಿಕೊಳ್ಳುವುದಕ್ಕೆ ಆಗಿಲ್ಲ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅವರ ಮನೆಯ ಹುಳುಕನ್ನು ಮುಚ್ಚಿಕೊಳ್ಳಲು ನಮ್ಮ ವಿರುದ್ಧ ಅಪಪ್ರಚಾರಕ್ಕೆ ಮುಂದಾಗಿದ್ದಾರೆ. ವಿರೋಧ ಪಕ್ಷದ ನಾಯಕ ಯಾರು ಎಂದು ಜನರು ಕೇಳಲು ಮುಂದಾಗಿದ್ದಾರೆ. ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಮತ್ತು ಅವಮಾನ. ಬಿಜೆಪಿಯವರು ತಮ್ಮ ಮನೆಯನ್ನು ಮೊದಲು ಸರಿ ಮಾಡಿಕೊಳ್ಳಲಿ” ಎಂದು ತಿರುಗೇಟು ನೀಡಿದರು.

“ರಾಜ್ಯದ ಹಲವೆಡೆ ಇನ್ನೂ ಮಳೆ ಬರುತ್ತಿದ್ದು, ಸದ್ಯಕ್ಕೆ ಬೆಳೆ ಹಾನಿ ಸರ್ವೆ ಕಷ್ಟವಾಗಿದೆ. ಆದರೂ ಮುಂದಿನ ಒಂದು ವಾರದೊಳಗೆ ಬೆಳೆ ಹಾನಿ ಸರ್ವೆ ಮಾಡಲಾಗುವುದು. ಮಳೆ ಹಾನಿ, ಬೆಳೆ ಹಾನಿ, ಕಟ್ಟಡ ಹಾನಿಗಳ ಬಗ್ಗೆ ಕೂಡ ಸರ್ವೆ ಮಾಡಲು ಇಂದು ದಿನಾಂಕ ನಿಗದಿ ಮಾಡುತ್ತೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕೊರೊನಾ ಹಗರಣ ನ್ಯಾಯಾಂಗ ತನಿಖೆಗೆ ಚಿಂತನೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

“ಶಾಸಕ ಬಿ ಆರ್ ಪಾಟೀಲ ಕ್ಷಮೆ ಕೇಳಿದ್ದಾರೆ ಎಂದು ನಾವು ಯಾರೂ ಹೇಳಿಲ್ಲ. ಅವರ ಮನಸ್ಸಿಗೆ ನೋವು ಆಗಿದೆ. ಅದನ್ನು ಪಕ್ಷದ ವೇದಿಕೆಯಲ್ಲಿ ಬಗೆಹರಿಸಿಕೊಂಡು ಹೋಗೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಮ್ಮ ವೈಯಕ್ತಿಕ ವಿಚಾರ ಬದಿಗಿಟ್ಟು ಜನರ ಕೆಲಸ ಮಾಡಬೇಕಾಗಿದೆ” ಎಂದು ತಿಳಿಸಿದರು.

“ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ಪ್ರಜಾ ಪ್ರತಿನಿಧಿಗಳ ನೇಮಕ ಕಡ್ಡಾಯವಲ್ಲ. ನನಗೆ ಮಾಹಿತಿ ಇರುವ ಪ್ರಕಾರ 80 ಲಕ್ಷ ಮಂದಿ ಈಗಾಗಲೇ ನೋಂದಣಿ ಮಾಡಿಕೊಂಡಿದ್ದಾರೆ. ಮುಂದಿನ ಕೆಲ ದಿನಗಳ ಒಳಗೆ ಪೂರ್ತಿಯಾಗಿ 1.28 ಕೋಟಿ ಕುಟುಂಬಗಳ ನೋಂದಣಿಯಾಗುತ್ತವೆ. ನಾವು ಹೇಳಿದ ದಿನಾಂಕದ ಒಳಗಾಗಿ ಎಲ್ಲರಿಗೂ ಈ ಯೋಜನೆ ಸಿಗುವ ಹಾಗೆ ಮಾಡುತ್ತೇವೆ” ಎಂದು ಭರವಸೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...