ಗುಜರಾತ್‌| ಕ್ಷತ್ರಿಯ ಸಮುದಾಯದ ಪ್ರತಿಭಟನೆ; ಬಿಜೆಪಿಯಲ್ಲಿ ಮುಂದುವರಿದ ತಿಕ್ಕಾಟ

Date:

ಲೋಕಸಭೆ ಚುನಾವಣೆಯ ಹೊಸ್ತಿಲಲ್ಲೇ ಗುಜರಾತ್ ಬಿಜೆಪಿಯಲ್ಲಿ ತಿಕ್ಕಾಟ ಮುಂದುವರಿದಿದೆ. ಗುಜರಾತ್‌ನಲ್ಲಿ ಕ್ಷತ್ರಿಯ ಸಮುದಾಯದ ಪ್ರತಿಭಟನೆಗಳ ನಡುವೆ ಬಿಜೆಪಿ ನಾಯಕರ ನಡುವೆ ಭಿನ್ನಾಭಿಪ್ರಾಯ ಶಮನವಾಗದೆ,  ಪಕ್ಷದೊಳಗಿನ ಆಂತರಿಕ ಕಲಹ ಮುಂದುವರಿದಿದೆ.

ಪ್ರಸ್ತುತ ಬಿಜೆಪಿ ಗುಜರಾತ್ ಘಟಕದ ರಾಜ್ಯಾಧ್ಯಕ್ಷ ಸಿ.ಆರ್.ಪಾಟೀಲ್ ಅವರು ಕ್ಷತ್ರಿಯ ಸಮುದಾಯದ ಕುರಿತು ರಾಜಕೋಟ್‌ನ ಬಿಜೆಪಿ ಅಭ್ಯರ್ಥಿ ಪರ್ಷೋತ್ತಮ್ ರೂಪಾಲಾ ಅವರ ಹೇಳಿಕೆಯಿಂದ ಆಕ್ರೋಶಗೊಂಡಿರುವ ಸಮುದಾಯವನ್ನು ಪತ್ರಿಕಾಗೋಷ್ಠಿ ನಡೆಸಿ ಸಮಾಧಾನಪಡಿಸುವ ಪ್ರಯತ್ನ ಮಾಡಿದ್ದಾರೆ.

ಇನ್ನೊಂದೆಡೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಮತ್ತು ಮಾಜಿ ಸಂಸದ ರಾಜೇಂದ್ರ ಸಿಂಗ್ ರಾಣಾ ಮಾತ್ರ “ರೂಪಾಲಾ ಅವರ ಹೇಳಿಕೆ ಕ್ಷತ್ರಿಯರ ಭಾವನೆಗೆ ನೋವುಂಟು ಮಾಡಿದೆ, ಆದ್ದರಿಂದ ಪ್ರತಿಭಟನೆ ಮುಂದುವರಿಯುತ್ತದೆ. ಈ ಹೋರಾಟದ ಪರಿಣಾಮವನ್ನು ಎಲ್ಲರೂ ಒಪ್ಪಿಕೊಳ್ಳಲಿದ್ದಾರೆ” ಎಂದು ಪರೋಕ್ಷವಾಗಿ ಬಿಜೆಪಿ ಅಭ್ಯರ್ಥಿಯನ್ನು ಬಿಜೆಪಿ ನಾಯಕರೇ ಸೋಲಿಸುವ ಸುಳಿವು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?   ಗುಜರಾತ್ ಬಿಜೆಪಿಯಲ್ಲಿ ಭಾರೀ ಕಲಹ; ಘರ್ಷಣೆಯಿಂದ ಆಸ್ಪತ್ರೆ ಸೇರಿದ ಕಾರ್ಯಕರ್ತರು

ಬಿಜೆಪಿ ರಾಜ್ಯಾಧ್ಯಕ್ಷ ಸಿ.ಆರ್.ಪಾಟೀಲ್ ಅವರು ಪರ್ಷೋತ್ತಮ್ ರೂಪಾಲಾ ಅವರನ್ನು ಕ್ಷಮಿಸಬೇಕೆಂದು ರಜಪೂತ ಸಮುದಾಯದವರನ್ನು ಒತ್ತಾಯಿಸಿದ್ದಾರೆ. “ರೂಪಾಲಾ ತನ್ನ ಹೇಳಿಕೆಗೆ ಮೂರು ಬಾರಿ ಕ್ಷಮೆಯಾಚಿಸಿದರೂ ರಜಪೂತರು ಸಿಟ್ಟಿಗೆದ್ದಿದ್ದಾರೆ. ಹೀಗಾಗಿ ಸಿಎಂ ಹಾಗೂ ಪಕ್ಷದ ರಜಪೂತ ಮುಖಂಡರ ಸಮ್ಮುಖದಲ್ಲಿ ಸಭೆ ನಡೆಸಲಾಗಿದೆ. ಸಮುದಾಯವು ಔದಾರ್ಯ ತೋರಿ ಅವರನ್ನು ಕ್ಷಮಿಸಬೇಕು” ಎಂದು ಸಿ ಆರ್ ಪಾಟೀಲ್ ಮನವಿ ಮಾಡಿದ್ದಾರೆ.

ಇದಲ್ಲದೆ, ರಜಪೂತ ಅಥವಾ ಕ್ಷತ್ರಿಯ ಸಮುದಾಯದ ಸದಸ್ಯರನ್ನು ಸಮಾಧಾನಪಡಿಸಲೆಂದು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಸಮ್ಮುಖದಲ್ಲಿ ಪಾಟೀಲ್ ಅವರು ಪಕ್ಷದ ರಜಪೂತ ನಾಯಕರೊಂದಿಗೆ ಸಭೆ ನಡೆಸಿದರು.

ಇದನ್ನು ಓದಿದ್ದೀರಾ?   ಶೇ.62 ರಷ್ಟು ಹೊಸ ಸೈನಿಕ ಶಾಲೆಗಳನ್ನು ಸಂಘ ಪರಿವಾರ, ಬಿಜೆಪಿ ನಾಯಕರಿಗೆ ಹಸ್ತಾಂತರಿಸಿದ ಕೇಂದ್ರ!

ಇದಲ್ಲದೆ, ರಜಪೂತ ಅಥವಾ ಕ್ಷತ್ರಿಯ ಸಮುದಾಯದ ಸದಸ್ಯರನ್ನು ಸಮಾಧಾನಪಡಿಸುವ ಉದ್ದೇಶದಿಂದ ನಿರ್ಣಯವನ್ನು ಪಡೆಯಲು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಸಮ್ಮುಖದಲ್ಲಿ ಪಾಟೀಲ್ ಅವರು ಪಕ್ಷದ ರಜಪೂತ ನಾಯಕರೊಂದಿಗೆ ಸಭೆ ನಡೆಸಿದರು.

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಾಜಕೋಟ್‌ನ ಅಭ್ಯರ್ಥಿ ಪರ್ಷೋತ್ತಮ್‌ ರೂಪಾಲಾ, “ಹಲವಾರು ರಜಪೂತ ಆಡಳಿತಗಾರರು ಬ್ರಿಟಿಷರಿಗೆ ಸಹಕಾರ ನೀಡಿದ್ದರು” ಎಂದು ಆರೋಪಿಸಿದ್ದರು. ಅವರ ಹೇಳಿಕೆಯ ನಂತರ, ಕರ್ಣಿ ಸೇನಾದ ಮುಖ್ಯಸ್ಥ ರಾಜ್ ಶೆಖಾವತ್ ಶನಿವಾರ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...