ಬಿಜೆಪಿ ನಾಯಕರು ಖಿನ್ನತೆಗೆ ಒಳಗಾಗಿದ್ದಾರೆ ಎಂದ ತೇಜಸ್ವಿ ಯಾದವ್!

Date:

ಬಿಹಾರದ ಎರಡನೇ ಹಂತದ ಲೋಕಸಭಾ ಚುನಾವಣೆಯ ನಂತರ ಬಿಜೆಪಿ ನಾಯಕರು ಖಿನ್ನತೆಗೆ ಒಳಗಾಗಿದ್ದಾರೆ ಎಂದು ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್ ಶನಿವಾರ ಹೇಳಿದ್ದಾರೆ. ಈ ಹೇಳಿಕೆಯು ಬಿಜೆಪಿ ಮತ್ತು ಆರ್‌ಜೆಡಿ ನಡುವೆ ನಡೆಯುತ್ತಿರುವ ವಾಕ್ಸಮರವನ್ನು ಇನ್ನಷ್ಟು ತೀವ್ರಗೊಳಿಸಿದೆ.

ಶುಕ್ರವಾರ ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿದ ಎರಡು ಚುನಾವಣಾ ಪ್ರಚಾರ ರ್‍ಯಾಲಿಗಳನ್ನು ತರಾಟೆಗೆ ತೆಗೆದುಕೊಂಡು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ತೇಜಸ್ವಿ, “ರೈತರು, ಯುವಕರು, ಮಹಿಳೆಯರು, ವಿದ್ಯಾರ್ಥಿಗಳು, ಉದ್ಯಮಿಗಳು ಮತ್ತು ಇತರೆ ಉದ್ಯೋಗಿಗಳಿಗೆ ಉದ್ಯೋಗ ಪಡೆಯುವುದು ಈಗ ಕಷ್ಟವಿದೆ ಎಂದು ತಿಳಿದುಬಂದಿದೆ. ಮೋದಿ ಅಧಿಕಾರದಲ್ಲಿದ್ದರೆ ನಿರುದ್ಯೋಗ ಸಮಸ್ಯೆ ಬಗೆಹರಿಯುವುದಿಲ್ಲ ಎಂದೂ ತಿಳಿದಿದೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ?  ಬಿಜೆಪಿಯ ‘400 ಪಾರ್’ ಸಿನಿಮಾ ಮತದಾನದ ಮೊದಲ ದಿನವೇ ಫ್ಲಾಪ್: ತೇಜಸ್ವಿ ಯಾದವ್ ವ್ಯಂಗ್ಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೋದಿ ಮತ್ತೆ ಪ್ರಧಾನಿಯಾದವರೆ ಅವರು ವಿವಿಧ ವಸ್ತುಗಳ ಬೆಲೆ ಏರಿಕೆಯ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಮತ್ತು ಜನರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವುದಿಲ್ಲ. ಶಾಲೆಗಳು ಮತ್ತು ಆಸ್ಪತ್ರೆಗಳ ಸೇವೆ ಜನರಿಗೆ ಲಭ್ಯವಾಗುತ್ತಿದೆಯೇ ಎಂಬ ವಿಷಯಗಳ ಬಗ್ಗೆ ಚರ್ಚಿಸಲು ಸಹ ಕಷ್ಟವಾಗುತ್ತದೆ. ಮೋದಿ ಅಧಿಕಾರದಲ್ಲಿ ಉಳಿಯುವವರೆಗೆ ರೈತರ ಆದಾಯವು ದ್ವಿಗುಣಗೊಳ್ಳುವುದಿಲ್ಲ” ಎಂದು ಹೇಳಿದರು.

ಪ್ರಧಾನಿ ಮೋದಿ ಅಧಿಕಾರವಧಿಯಲ್ಲಿ ಬಿಹಾರ ಬಿಜೆಪಿ ಸಂಸದರು ಯಾವುದೇ ಸಾಧನೆಯನ್ನು ಮಾಡಿಲ್ಲ ಎಂದು ದೂರಿದ ಬಿಹಾದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ, “ಕಳೆದ 10 ವರ್ಷಗಳಲ್ಲಿ ಬಿಹಾರದ 39 ಎನ್‌ಡಿಎ ಲೋಕಸಭಾ ಸದಸ್ಯರು ಮಾಡಿದ ಕೆಲಸಗಳ ಬಗ್ಗೆ ಮತ್ತು ತಮ್ಮ ಸರ್ಕಾರ ಮಾಡಿದ ಸಾಧನೆಗಳ ಬಗ್ಗೆ ಪ್ರಧಾನಿ ಮೋದಿ ಚರ್ಚಿಸಲ್ಲ. ಏನಾದರೂ ಚರ್ಚಿಸಲು ಹೇಗೆ ಸಾಧ್ಯ?. ಅವರು ಸಾಧನೆಯೇ ಮಾಡಿಲ್ಲ” ಎಂದರು.
“ಮೋದಿ ಅವರು ಜನರನ್ನು ತುಂಬಾ ದಾರಿ ತಪ್ಪಿಸಿದ್ದಾರೆ. ಈಗ ಮೋದಿ ಅವರು ಅನೇಕ ಸುಳ್ಳುಗಳನ್ನು ಹೇಳುತ್ತಿದ್ದಾರೆ. ಹಾಗಿರುವಾ ಪ್ರಧಾನಿ ಬಗ್ಗೆ ಮಾತನಾಡಲು ಏನೂ ಉಳಿದಿಲ್ಲ. ಒಟ್ಟಿನಲ್ಲಿ ಪ್ರಧಾನಿ ಸಮಸ್ಯೆಗಳಿಂದ ದೂರ ಓಡುತ್ತಿರುವುದು ಖಚಿತ” ಎಂದು ಪ್ರಧಾನಿಯನ್ನು ತೇಜಸ್ವಿ ಯಾದವ್ ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...