ಬಿಜೆಪಿ ನಾಯಕರೇ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳ್ತೀರಿ?: ಸಿಎಂ ಸಿದ್ದರಾಮಯ್ಯ

Date:

ಬಿಜೆಪಿ ನಾಯಕರೇ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳ್ತೀರಿ? ನಿಮ್ಮ ಸುಳ್ಳುಗಳನ್ನು ಬಯಲು ಮಾಡಲು ಅವಕಾಶ ಕೊಟ್ಟು ಸಮಾಜದ ಎದುರು ಯಾಕೆ ಬೆತ್ತಲಾಗುತ್ತೀರಿ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಕಾಂಗ್ರೆಸ್ ಸರ್ಕಾರ ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಮ್ ಸಮುದಾಯದ ನವಾಜ್ ಅವರನ್ನು ಸದಸ್ಯರನ್ನಾಗಿ ಮಾಡಿದೆ ಎಂದು ಎದೆಬಡಿದುಕೊಳ್ಳೀರಲ್ಲಾ? ನಿಮ್ಮದೇ ಪಕ್ಷದ ಸರ್ಕಾರ 2020 ಮತ್ತು 2022ರ ಸಾಲಿನಲ್ಲಿ ಇದೇ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಮ್ ಸಮುದಾಯ ವ್ಯಕ್ತಿಗಳನ್ನು ಸದಸ್ಯರನ್ನಾಗಿ ಮಾಡಿದಾಗ ನಿಮ್ಮಲ್ಲಿ ಈಗ ಉಕ್ಕಿ ಹರಿಯುತ್ತಿರುವ ಹಿಂದುತ್ವದ ಅಭಿಮಾನ ಆಗ ಎಲ್ಲಿ ಅಡಗಿ ಕೂತಿತ್ತು” ಎಂದು ಪ್ರಶ್ನಿಸಿದ್ದಾರೆ.

“ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನ ಸರ್ವಧರ್ಮಗಳನ್ನು ಸಮಭಾವದಿಂದ ಕಾಣುವ ಹಿಂದು ಧರ್ಮದ ಪರಂಪರೆಗೆ ಸಾಕ್ಷಿಯಾಗಿದೆ. ಅಲ್ಲಿನ ಪ್ರತಿಯೊಂದು ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಎಲ್ಲ ಧರ್ಮಗಳ ಜನತೆ ಭಕ್ತಿ-ಗೌರವದಿಂದ ಭಾಗವಹಿಸುತ್ತಾರೆ. 2020ರಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಈ ದೇವಸ್ಥಾನದ ಬ್ರಹ್ಮರಥೋತ್ಸವ ಸಮಿತಿಗೆ ಇಮ್ತಿಯಾಜ್ ಪಾಷಾ ಅವರನ್ನು ಸದಸ್ಯರನ್ನಾಗಿ ನೇಮಿಸಿತ್ತು. 2022ರಲ್ಲಿ ಬಿಜೆಪಿ ಸರ್ಕಾರ ಮತ್ತೆ ಈ ಸಮಿತಿಗೆ ಅಪ್ಸರ್ ಅವರನ್ನು ಸದಸ್ಯರನ್ನಾಗಿ ಮಾಡಿತ್ತು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಸಂಪತ್ತು ಲೂಟಿ ಮಾಡುವ ದುರುದ್ದೇಶದಿಂದಲೇ ಬಿಜೆಪಿ ಸರ್ಕಾರ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಮರನ್ನು ಸದಸ್ಯರನ್ನಾಗಿ ಮಾಡಿದೆ ಎಂದು ಆರೋಪಿಸುವಷ್ಟು ಕೀಳು ಮಟ್ಟಕ್ಕೆ ನಾನಿಳಿಯಲಾರೆ. ಎಲ್ಲವನ್ನೂ ಕೇಸರಿ ಕಣ್ಣುಗಳಿಂದ ನೋಡುವ ರೋಗದಿಂದ ಶೀಘ್ರ ಗುಣಮುಖರಾಗಿ ಎಂದು ನಿಮಗೂ ನಿಮ್ಮ ಸರ್ವೋಚ್ಚ ನಾಯಕರಾದ ನರೇಂದ್ರ ಮೋದಿ ಅವರಿಗೆ ಹಾರೈಸುತ್ತೇನೆ” ಎಂದು ವ್ಯಂಗ್ಯವಾಡಿದ್ದಾರೆ.

“ರಾಜ್ಯದ ಬಿಜೆಪಿ ನಾಯಕರೇ, ನಿಮಗೆ ಮಾನ-ಮರ್ಯಾದೆ ಎನ್ನುವುದೇನಾದರೂ ಇದ್ದರೆ ಮೊದಲು ಜನರನ್ನು ತಪ್ಪುದಾರಿಗೆಳೆಯುವ ಈ ಹೇಳಿಕೆಯನ್ನು ವಾಪಸು ಪಡೆದು ರಾಜ್ಯದ ಜಾತ್ಯತೀತ ಕನ್ನಡಿಗರ ಕ್ಷಮೆ ಕೇಳಬೇಕೆಂದು ಒತ್ತಾಯಿಸುತ್ತೇನೆ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...