ಇನ್ನೆರಡು ದಿನದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ: ಬಸವರಾಜ ಬೊಮ್ಮಾಯಿ

Date:

ಸಂಘಟನೆಗೆ ಚುರುಕು ನೀಡಿ ಜನರ ಧ್ವನಿಯಾಗುತ್ತೇವೆ
ಆರ್‌ಎಸ್‌ಎಸ್ ನಾಯಕರನ್ನು ಭೇಟಿಯಾದ ಬೊಮ್ಮಾಯಿ

ಇನ್ನೆರಡು ದಿನಗಳ ಒಳಗಾಗಿ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಅಂತಿಮವಾಗಲಿದೆ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಇಂದು ಸಂಜೆ ಅಥವಾ ನಾಳೆ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಪಕ್ಷದ ಶಾಸಕರ ಸಭೆ ನಡೆಯಲಿದೆ. ಅಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯಾಗಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಳಿದಂತೆ ಚುನಾವಣೆಯಲ್ಲಿ ಪಕ್ಷದ ಸಾಧನೆ ಕುರಿತಂತೆ ಅಭಿಪ್ರಾಯ ಹಂಚಿಕೊಂಡ ಅವರು, “ಚುನಾವಣೆ ಎದುರಿಸುವ ವೇಳೆ ನಮ್ಮಿಂದ ಲೋಪವಾಗಿದೆ. ಅದನ್ನು ಸರಿಪಡಿಸುವ ಪ್ರಕ್ರಿಯೆ ಆರಂಭಿಸುತ್ತೇವೆ. ಕೆಲವೇ ದಿನಗಳಲ್ಲಿ ಸಂಘಟನೆಗೆ ಚುರುಕು ನೀಡಿ ಜನರ ಧ್ವನಿಯಾಗಿ ಕೆಲಸ ಮಾಡುತ್ತೇವೆ” ಎಂದು ಹೇಳಿದರು.

“ಈ ವಿಚಾರವಾಗಿ ಬಿಜೆಪಿ ನಾಯಕರೆಲ್ಲ ಮನೆಗೆ ಬಂದು ಮಾತನಾಡುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಅವರ ಅನುಭವ ಹೇಳುತ್ತಿದ್ದಾರೆ. ಎಲ್ಲವನ್ನೂ ಪಕ್ಷದ ಸಭೆಯಲ್ಲಿ ಸಮಾಲೋಚನೆ ಮಾಡಲಾಗುತ್ತದೆ” ಎಂದರು.

“ಈ ವೇಳೆ ಸರಿಪಡಿಸಿಕೊಳ್ಳಬೇಕಾದ ವಿಚಾರ ಹಾಗೂ ಎಲ್ಲಿ ಲೋಪವಾಗಿದೆ ಎಂಬುದನ್ನು ತಿಳಿದುಕೊಳ್ಳಲಾಗುತ್ತದೆ. ಕೆಲವೇ ದಿನಗಳಲ್ಲಿ ಪಕ್ಷ ಸಂಘಟನೆ ಮಾಡಿ ಮತ್ತೆ ಜನರ ಧ್ವನಿಯಾಗುತ್ತೇವೆ” ಎಂದು ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ?: ಕರ್ನಾಟಕದ ಪ್ರಬುದ್ಧ ಮತದಾರರಿಂದ ದೇಶಕ್ಕೆ ಬಲವಾದ ಸಂದೇಶ : ದಸಂಸ

“ಜನರು ಕಾಂಗ್ರೆಸ್‌ನವರ ಗ್ಯಾರಂಟಿಗಳನ್ನು ನೋಡಿ ಅಧಿಕಾರ ಕೊಟ್ಟಿದ್ದಾರೆ. ಆ ನಂಬಿಕೆಯನ್ನುಅವರು ಎಷ್ಟರ ಮಟ್ಟಿಗೆ ಉಳಿಸಿಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕು” ಎಂದ ಅವರು, “ಸಿಎಂ ಸ್ಥಾನ ಇದ್ದಾಗ ಪೈಪೋಟಿ ಸಹಜ. ಆ ಪಕ್ಷದ ಆಂತರಿಕ ವಿಚಾರದ ಬಗ್ಗೆ ನಾನು ಏನೂ ಹೇಳಲು ಬಯಸುವುದಿಲ್ಲ. ನಮ್ಮ ಪಕ್ಷದಲ್ಲಿ ಯುವಕರೊಂದಿಗೆ ಸೇರಿಕೊಂಡು ಎಲ್ಲರೂ ಸೇರಿ ಪಕ್ಷ ಕಟ್ಟುತ್ತೇವೆ” ಎಂದರು.

ಇದಕ್ಕೂ ಮುನ್ನ ಚಾಮರಾಜನಗರದಲ್ಲಿರುವ ಆರ್‌ಎಸ್‌ಎಸ್‌ ಕಚೇರಿ ಕೇಶವಕೃಪಕ್ಕೆ ತೆರಳಿದ್ದ ಬಸರಾಜ ಬೊಮ್ಮಾಯಿ ಅಲ್ಲಿ ಚರ್ಚೆ ನಡೆಸಿದರು. ಪಕ್ಷ ಎಡವಿದ್ದೆಲ್ಲಿ ಎನ್ನುವುದರ ಬಗ್ಗೆ ಸುದೀರ್ಘವಾಗಿ ಚರ್ಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...