ಬಿಜೆಪಿಯವರು ಆಧಾರ ರಹಿತವಾಗಿ ಆರೋಪ ಮಾಡುತ್ತಾರೆ: ಸಿಎಂ ಸಿದ್ದರಾಮಯ್ಯ

Date:

  • ತೆರಿಗೆ ಅಧಿಕಾರಿಗಳು ಅವರ ಕೆಲಸ ಮಾಡಿದ್ದಾರೆ: ಸಿಎಂ
  • ಬಿಜೆಪಿಯವರ ಪ್ರತಿಭಟನೆಯನ್ನು ಜನ ನಂಬುವುದಿಲ್ಲ

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಮ್ಮ ಕೆಲಸ ಮಾಡಿದ್ದಾರೆ. ಎಲ್ಲೋ ಹಣ ಸಿಕ್ಕಿದೆ ಎಂದ ಮಾತ್ರಕ್ಕೆ ರಾಜಕೀಯವಾಗಿ ತಳಕು ಹಾಕುವುದು ಸರಿಯಲ್ಲ. ಬಿಜೆಪಿಯವರು ಆಧಾರ ರಹಿತವಾಗಿ ಸುಮ್ಮನೇ ಆರೋಪ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ತಿರುಗೇಟು ನೀಡಿದರು.

ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಬಿಜೆಪಿಯವರ ಪ್ರತಿಭಟನೆಯನ್ನು ಜನ ನಂಬುವುದಿಲ್ಲ. ರಾಜಕೀಯಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ” ಎಂದರು.

ಕಾಂಗ್ರೆಸ್‌ ಗುತ್ತಿಗೆದಾರರು ಎಂದು ಬಿಜೆಪಿಯವರು ಆರೋಪಿಸುತ್ತಿದ್ದಾರಲ್ಲ ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ಗುತ್ತಿಗೆದಾರರಲ್ಲಿ ಕಾಂಗ್ರೆಸ್‌ ಗುತ್ತಿಗೆದಾರರು, ಬಿಜೆಪಿ ಗುತ್ತಿಗೆದಾರರು ಇರುತ್ತಾರಾ? ಹಾಗಾದರೆ ನಾನು ಹಣ ಸಿಕ್ಕವರನ್ನು ಬಿಜೆಪಿ ಗುತ್ತಿಗೆದಾರ ಎನ್ನುತ್ತೇನೆ. ಯಾವುದಾದರೂ ಆಧಾರ ಇದೆಯಾ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತನಿಖೆ ಮಾಡಿಸುತ್ತೀರಾ ಎನ್ನುವ ಪ್ರಶ್ನೆಗೆ ಉತ್ತರಿಸಿ, “ಯಾಕ್ರಿ ಬೇಕು ತನಿಖೆ? ತೆರಿಗೆ ಇಲಾಖೆ ದಾಳಿ ಮಾಡಿದೆ. ಅವರು ತನಿಖೆ ಮಾಡುತ್ತಾರೆ. ಸರ್ಕಾರ ಯಾಕೆ ಇದರಲ್ಲಿ ಮೂಗು ತೂರಿಸಬೇಕು? ಪಂಚರಾಜ್ಯಗಳ ಚುನಾವಣೆಗೂ ನಮಗೂ ಸಂಬಂಧವಿಲ್ಲ. ಸಿ ಟಿ ರವಿ ಬರೀ ಸುಳ್ಳು ಹೇಳುತ್ತಾನೆ. ಅವನಿಗೆ ಪ್ರತಿಕ್ರಿಯೆ ಕೊಡಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ರಾಜೀವ ತಾರಾನಾಥ್ ‘ಕಮಿಷನ್’ ಪ್ರಕರಣ; ಕನ್ನಡ-ಸಂಸ್ಕೃತಿ ಇಲಾಖೆ ಸರ್ಜರಿಗೆ ಸಕಾಲ

“ಐದು ವರ್ಷ ಬಿಜೆಪಿ ಸರ್ಕಾರ ವಿದ್ಯುತ್‌ ಉತ್ಪಾದನೆ ಮಾಡಲಿಲ್ಲ. ಈಗ ಮಳೆ ಇಲ್ಲ. ವಿದ್ಯುತ್‌ ಕೊರತೆಯಾಗಿದೆ. 16 ಸಾವಿರ ಮೆಗಾ ವ್ಯಾಟ್‌ ವಿದ್ಯುತ್‌ ಖರ್ಚು ಆಗುತ್ತಿದೆ. ರೈತರಿಗೆ 5 ತಾಸು ವಿದ್ಯುತ್‌ ಕೊಡಬೇಕು ಎಂದು ಹೇಳಿದ್ದೇನೆ. ಹಾಗೆಯೇ ವಿದ್ಯುತ್‌ ಕೊಂಡುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ” ಎಂದರು.

“ನಾಲ್ಕು ತಾಸು ವಿದ್ಯುತ್ ಕೊಡಿ ‌ರೈತರೇ ಆಗ್ರಹಿಸಿದ್ದಾರೆ. ನಾವು ಐದು ತಾಸು ಕೊಡುತ್ತೇವೆ. 2000 ಮೆಗಾ ವ್ಯಾಟ್‌ ವಿದ್ಯುತ್‌ ಕೊರತೆ ಇದೆ. ಮೇವಿನ ಕೊರತೆ ರಾಜ್ಯದಲ್ಲಿ ಇಲ್ಲ. ಮೇವು ಬೆಳೆಯಬೇಕು ಮತ್ತು ಮೇವು ಶೇಖರಣೆ ಮಾಡಲು ಸೂಚಿಸಿದ್ದೇವೆ. 30 ಸಾವಿರಕ್ಕೂ ಹೆಚ್ಚು ಕೋಟಿ ಹಾನಿಯಾಗಿದೆ. ಕೇಂದ್ರದ ಬಳಿ ಪರಿಹಾರಕ್ಕೆ ಮನವಿ ಮಾಡಿದ್ದೇನೆ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...