ಮುಡಾ ಹಗರಣ | ಆಗಸ್ಟ್ 3ರಂದು ಬೆಳಗ್ಗೆ 8:30ಗೆ ಬಿಜೆಪಿ ಪಾದಯಾತ್ರೆ ಆರಂಭ

Date:

ಮುಡಾ ಹಗರಣದ ವಿರುದ್ಧ ಶನಿವಾರ ಬೆಳಗ್ಗೆ 8:30ಗೆ ಪಾದಯಾತ್ರೆ ಆರಂಭವಾಗಲಿದೆ. ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲಾಗುತ್ತದೆ ಎಂದು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.

ಬಿಜೆಪಿ ಪಾದಯಾತ್ರೆಗೆ ಎನ್‌ಡಿಎ ಒಕ್ಕೂಟದ ಮಿತ್ರ ಪಕ್ಷವಾದ ಜೆಡಿಎಸ್‌ನ ಬೆಂಬಲವಿಲ್ಲ. ಬಿಜೆಪಿ ಈ ಪಾದಯಾತ್ರೆಯ ಬಗ್ಗೆ ಏಕಪಕ್ಷೀಯ ನಿರ್ಧಾರವನ್ನು ಕೈಗೊಂಡಿದೆ ಎಂದು ಬುಧವಾರ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದರು.

ಇದನ್ನು ಓದಿದ್ದೀರಾ? ಬಿಜೆಪಿ ಪಾದಯಾತ್ರೆಗೆ ಜೆಡಿಎಸ್‌ ಬೆಂಬಲ ಇಲ್ಲ; ಕಟುವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಾದ ಬೆನ್ನಲ್ಲೇ ಗುರುವಾರ ಸಂಸತ್ ಭವನದ ಎಚ್‌ಡಿ ಕುಮಾರಸ್ವಾಮಿ ಅವರ ಕಚೇರಿಯಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ್‌ ಜೋಶಿ ಸೇರಿದಂತೆ ಇತರೆ ಬಿಜೆಪಿ ನಾಯಕರು ಎಚ್‌ಡಿಕೆ ಅವರನ್ನು ಭೇಟಿಯಾಗಿದ್ದಾರೆ. ಕೇಂದ್ರ ಸಚಿವರಾದ ಪ್ರಲ್ಹಾದ್‌ ಜೋಶಿ, ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ರಾಜ್ಯ ಬಿಜೆಪಿ ಉಸ್ತುವಾರಿ ರಾಧಮೋಹನ್ ದಾಸ್, ಬಿಜೆಪಿ ನಾಯಕರಾದ ಬಂಡೆಪ್ಪ ಕಾಶೆಂಪೂರ್, ಮಲ್ಲೇಶ್ ಬಾಬು ಸೇರಿ ಎಚ್‌ಡಿ ಕುಮಾರಸ್ವಾಮಿ ಜೊತೆ ಸಭೆ ನಡೆಸಿದ್ದಾರೆ.

ಈ ಸಭೆಯ ಬಳಿಕ ಬಿವೈ ವಿಜಯೇಂದ್ರ, ರಾಧಮೋಹನ್ ದಾಸ್ ಜೊತೆ ಜಂಟಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಪ್ರಲ್ಹಾದ್ ಜೋಶಿ, “ಪಾದಯಾತ್ರೆ ಬಗ್ಗೆ ಕುಮಾರಸ್ವಾಮಿ ಜೊತೆ ಮಾತನಾಡಿದ್ದೇನೆ. ಸಣ್ಣ ಗೊಂದಲ ಬಗೆಹರಿಸಿಕೊಂಡಿದ್ದೇವೆ. ಪಾದಯಾತ್ರೆ ಏಳು ದಿನಗಳ ಕಾಲ ನಡೆಯಲಿದೆ. ಯಾರನ್ನೂ ವಿಶೇಷವಾಗಿ ಕರೆಯಲ್ಲ. ಭ್ರಷ್ಟಾಚಾರದ ವಿರುದ್ಧ ಇರುವವರು ಭಾಗವಹಿಸಬಹುದು” ಎಂದು ಹೇಳಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...