ಪಾಕ್ ಪರ ಘೋಷಣೆ ಆರೋಪ: ಕಾಂಗ್ರೆಸ್ ಸರ್ಕಾರ ವಜಾಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ಬಿಜೆಪಿ ದೂರು

Date:

ವಿಧಾನಸೌಧದಲ್ಲಿ ಪಾಕಿಸ್ತಾನ ಪರವಾದ ಘೋಷಣೆ ಹಾಕಿದ್ದಾರೆ ಎಂದು ವಿವಾದ ಸೃಷ್ಟಿಸಿರುವ ಬಿಜೆಪಿ ಪಾಳಯವು, ಕಾಂಗ್ರೆಸ್ ಸರ್ಕಾರವಯ ಹಿಂದೂ ವಿರೋಧಿ ನೀತಿ ಹಾಗೂ ದೇಶದ್ರೋಹಿಗಳನ್ನು ಬೆಂಬಲಿಸುತ್ತಿದೆ. ಹಾಗಾಗಿ, ಸರ್ಕಾರವನ್ನು ವಜಾಗೊಳಿಸಿ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ ಅವರನ್ನು ಭೇಟಿಯಾಗಿ, ಮನವಿ ಸಲ್ಲಿಸಿದೆ.

ಗುರುವಾರ ಸಂಜೆ ರಾಜಭವನಕ್ಕೆ ತೆರಳಿದ ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದ ಬಿಜೆಪಿ ನಿಯೋಗವು, “ಕಾಂಗ್ರೆಸ್ ಸರ್ಕಾರವು ಹಿಂದೂ ವಿರೋಧಿ ನೀತಿಗಳನ್ನು ಹಾಗೂ ದೇಶದ್ರೋಹಿಗಳನ್ನು ಬೆಂಬಲಿಸುವ ಮನಸ್ಥಿತಿಯನ್ನು ಹೊಂದಿದೆ. ಇದನ್ನು ಬಿಜೆಪಿ ಖಂಡಿಸುತ್ತದೆ. ಹಾಗಾಗಿ, ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಬೇಕು. ಆಗ ಮಾತ್ರ ಕರ್ನಾಟಕದಲ್ಲಿ ಶಾಂತಿ, ನೆಮ್ಮದಿ ನೆಲೆಸಲು ಸಾಧ್ಯ” ಎಂದುಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸಲ್ಲಿಸಿರುವ ಮನವಿಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿಯ ಈ ನಿಯೋಗದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ, ಪರಿಷತ್ ಸಚೇತಕ ರವಿಕುಮಾರ್, ವಿಧಾನ ಪರಿಷತ್ ಸದಸ್ಯ ತುಳಸಿ ಮುನಿರಾಜು ಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ಎಎನ್‌ಐ ಸುದ್ದಿಸಂಸ್ಥೆಯ ಪತ್ರಕರ್ತ ಕಂಡ ಸತ್ಯ; ‘ಅಲ್ಲಿ ಕೂಗಿದ್ದು ನಾಸೀರ್‌ ಸಾಬ್‌ ಜಿಂದಾಬಾದ್’

ವಿಧಾನಸೌಧದ ಆವರಣದಲ್ಲಿ ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದಿದ್ದ ಕಾಂಗ್ರೆಸ್‌ ಅಭ್ಯರ್ಥಿ ನಾಸಿರ್ ಹುಸೇನ್ ಗೆಲುವಿನ ಸಂಭ್ರಮಾಚರಣೆ ವೇಳೆ ಇದೇ ವ್ಯಕ್ತಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಇದನ್ನೇ ಬಳಸಿಕೊಂಡಿರುವ ಬಿಜೆಪಿ ನಾಯಕರು ವಿವಾದವನ್ನಾಗಿಸಿದ್ದಾರೆ. ಆದರೆ, ಕೆಲವೊಂದು ವಿಡಿಯೋಗಳಲ್ಲಿ ‘ನಾಸಿರ್ ಸಾಬ್ ಜಿಂದಾಬಾದ್’ ಎಂದು ಕೂಗಿರುವುದು ಸ್ಪಷ್ಟವಾಗಿ ತಿಳಿದುಬಂದಿತ್ತು. ಅಲ್ಲದೇ, ಈ ಘಟನೆಯ ಸಂದರ್ಭ ಸ್ಥಳದಲ್ಲಿದ್ದ ಕೆಲವು ಪ್ರಾಮಾಣಿಕ ಪತ್ರಕರ್ತರು, ಅಲ್ಲಿ ಪಾಕ್ ಪರ ಘೋಷಣೆ ಕೂಗಿಲ್ಲ, ‘ನಾಸಿರ್ ಸಾಬ್ ಜಿಂದಾಬಾದ್’ ಎಂದು ಕೂಗಿದ್ದು ನಮಗೆ ಕೇಳಿಸಿದ್ದವು ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...