ಮೋದಿ ನೀತಿಗಳ ಟೀಕಿಸಿದ್ದಕ್ಕೆ ಬಿಜೆಪಿ ಸದಸ್ಯ ಗುರುದತ್ ಶೆಟ್ಟಿ ಕಾರ್ಕಳ ಬಂಧನ: ಸುಬ್ರಮಣಿಯನ್ ಸ್ವಾಮಿ ಆರೋಪ

Date:

ಪ್ರಧಾನಿ ನರೇಂದ್ರ ಮೋದಿ ಅವರ ನೀತಿಗಳನ್ನು ಟೀಕಿಸಿದ್ದ ಕಾರಣಕ್ಕೆ ಗುಜರಾತ್ ಪೊಲೀಸರು ಬೆಂಗಳೂರಿನಲ್ಲಿ ಬಿಜೆಪಿ ಸದಸ್ಯ ಗುರುದತ್ ಶೆಟ್ಟಿ ಕಾರ್ಕಳ ಅವರನ್ನು ಬಂಧಿಸಿದೆ ಎಂದು ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಡಾ. ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, “ಗುಜರಾತ್ ರಾಜ್ಯ ಪೊಲೀಸ್ ತಂಡ ಇಂದು ಬೆಂಗಳೂರಿಗೆ ಹಾರಿ, ಬಿಜೆಪಿಯ ಯುವ ಸದಸ್ಯ ಗುರುದತ್ ಕಾರ್ಕಳ ಶೆಟ್ಟಿ ಅವರನ್ನು ಬಂಧಿಸಿದೆ. ಏಕೆಂದರೆ ಅವರು ಮೋದಿಯ ನೀತಿಗಳನ್ನು ಟೀಕಿಸಿದ್ದರು” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಸೇವಕನನ್ನು ಟ್ರಂಪ್‌ ಆಹ್ವಾನಿಸಿರುವುದು ಪ್ರಧಾನಿಗೆ ದೊಡ್ಡ ಅಪಮಾನ: ಸುಬ್ರಮಣಿಯನ್ ಸ್ವಾಮಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪೊಲೀಸ್ ದೌರ್ಜನ್ಯದ ಬಗ್ಗೆ ಅನೇಕರು ನನಗೆ ದೂರು ನೀಡಿದ್ದಾರೆ. ಕೂಡಲೇ ಗುರುದತ್ ಅವರನ್ನು ಬಿಡುಗಡೆ ಮಾಡಬೇಕು. ವಕೀಲ ಸಮ್ಮುಖದಲ್ಲಿ ಹೇಳಿಕೆಯನ್ನು ನೀಡಲು ಅವಕಾಶ ಮಾಡಿಕೊಡಬೇಕು” ಎಂದು ತಿಳಿಸಿದ್ದಾರೆ.

ಹಾಗೆಯೇ “ನನ್ನ ವಕೀಲ ಸ್ನೇಹಿತರು ಈ ಪ್ರಕರಣವನ್ನು ಕೈಗೆತ್ತಿಕೊಳ್ಳಲು, ಮೂಲಭೂತ ಹಕ್ಕುಗಳು ಮತ್ತು ಸ್ವಾತಂತ್ರ್ಯದ ಪರವಾಗಿ ನಿಲ್ಲುವಂತೆ ನಾನು ಕೇಳಿಕೊಂಡಿದ್ದೇನೆ. ನಮ್ಮ ಸ್ಥಳೀಯ ವಕೀಲರ ಉಪಸ್ಥಿತಿಯಲ್ಲಿ ಅವರನ್ನು ಪ್ರಶ್ನಿಸಬಹುದು” ಎಂದು ಹೇಳಿದ್ದಾರೆ.

ಇನ್ನು ಸುಬ್ರಮಣಿಯನ್ ಸ್ವಾಮಿ ಬಿಜೆಪಿಗರಾದರೂ ಈ ಹಿಂದೆ ಹಲವು ಬಾರಿ ಮೋದಿ ನೀತಿಗಳನ್ನು, ಕೇಂದ್ರದ ಕ್ರಮಗಳನ್ನು ಟೀಕಿಸುತ್ತಾ ಬಂದಿದ್ದಾರೆ. ಪಹಲ್ಗಾಮ್ ದಾಳಿಯ ನಂತರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಸುಬ್ರಮಣಿಯನ್ ಸ್ವಾಮಿ ಆಗ್ರಹಿಸಿದ್ದರು. ಹಾಗೆಯೇ ಚೀನಾ, ಪಾಕಿಸ್ತಾನ ಮತ್ತು ಇತರ ದೇಶಗಳ ಮುಂದೆ ಮೋದಿ, ಶಾ ಶರಣಾಗಿದ್ದಾರೆ ಎಂದು ಆರೋಪಿಸಿದ್ದರು. ಇನ್ನು ಮೋದಿ ನೇತೃತ್ವದಲ್ಲಿ ಬಿಜೆಪಿ ‘ಟೈಟಾನಿಕ್’ ಹಡಗಿನಂತೆ ಮುಳುಗಲಿದೆ 2024ರ ಜುಲೈನಲ್ಲಿ ಹೇಳಿದ್ದರು.

ಸುಬ್ರಮಣಿಯನ್ ಸ್ವಾಮಿ ಬೆಂಬಲಿಗರಾದ ಗುರುದತ್ ಕಾರ್ಕಳ ಶೆಟ್ಟಿ ಎಂಬ ವ್ಯಕ್ತಿ ಪ್ರಧಾನಿ ಮೋದಿ ನೀತಿಗಳನ್ನು ಟೀಕಿಸುತ್ತಿದ್ದರು ಎಂಬುದು ಎಕ್ಸ್‌ ಖಾತೆಯ ಪರಿಶೀಲಿಸಿದಾಗ ಕಂಡುಬಂದಿದೆ.

WhatsApp Image 2025 11 17 at 4.20.34 PM
+ posts

ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...