ಬಿಹಾರ | ಎನ್‌ಡಿಎ ಮುಖ್ಯಮಂತ್ರಿ ಅಭ್ಯರ್ಥಿ ಯಾರು? ಬಿಜೆಪಿ ಸಚಿವ ಸ್ಪಷ್ಟನೆ

Date:

ಬಿಹಾರದಲ್ಲಿ ಈ ವರ್ಷವೇ ವಿಧಾನಸಭೆ ಚುನಾವಣೆ ನಡೆಯಲಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಈ ನಡುವೆ ಬಿಹಾರದಲ್ಲಿ ಎನ್‌ಡಿಎ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಇದಕ್ಕೆ ಬಿಜೆಪಿ ಸಚಿವರೊಬ್ಬರು ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಅಂಬೇಡ್ಕರ್ ಜಯಂತಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಬಿಹಾರ ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ, ನಿತೀಶ್ ಕುಮಾರ್ ಅವರ ನೇತೃತ್ವದಲ್ಲೇ ನಾವು ಮುಂದಿನ ವಿಧಾನಸಭೆ ಚುನಾವಣೆಯನ್ನು ಎದುರಿಸಲಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಚುನಾವಣೆ ಬಂದಾಗ ‘ಗೋಮಾತೆ’ ಸ್ಮರಣೆ: ದೇಸಿ ಹಸು ರಾಜ್ಯ ಮಾತೆಯಾದರೆ, ಇತರೆ ತಳಿಗಳು ಆಹಾರವೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರು ಸಾಮ್ರಾಟ್ ಚೌಧರಿ ಬಿಹಾರದ ಮುಂದಿನ ಮುಖ್ಯಮಂತ್ರಿಯಾಗಬಹುದು ಎಂದು ಊಹಿಸಿದ್ದರು. ಈ ಬಗ್ಗೆ ಸಾಮ್ರಾಟ್ ಅವರೇ ಸ್ಪಷ್ಟನೆ ನೀಡಿದ್ದಾರೆ.

“ಎನ್‌ಡಿಎ ಸರ್ಕಾರವು ಒಗ್ಗಟ್ಟಿನಲ್ಲಿದೆ. ನಾವು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಾಯಕತ್ವದಲ್ಲಿ ವಿಧಾನಸಭೆ ಚುನಾವಣೆಯನ್ನು ಎದುರಿಸಲಿದ್ದೇವೆ. ನಿತೀಶ್ ಕುಮಾರ್ ಅವರು ಎನ್‌ಡಿಎಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದಾರೆ, ಅವರೇ ಸಿಎಂ ಅಭ್ಯರ್ಥಿ” ಎಂದು ಹೇಳಿದ್ದಾರೆ.

ಹಾಗೆಯೇ ನಿತೀಶ್ ಕುಮಾರ್ ಅವರನ್ನು ಹಾಡಿ ಹೊಗಳಿದ್ದಾರೆ. ಹಳ್ಳಿಗಳಿಗೆ ವಿದ್ಯುತ್ ಸೌಲಭ್ಯ ಒದಗಿಸಿದ್ದಾರೆ, ರಸ್ತೆ ಸಂಪರ್ಕ ಕಲ್ಪಿಸಿದ್ದಾರೆ, ಉದ್ಯೋಗ ಸೃಷ್ಟಿಗಾಗಿ ನಿರಂತರವಾಗಿ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ನಿತೀಶ್ ಕುಮಾರ್ ವಕ್ಫ್ ಮಸೂದೆ ವಿರೋಧಿಸಬಹುದೆಂಬ ಭರವಸೆ ಈಗಲೂ ಇದೆ: ಕಾಂಗ್ರೆಸ್ ನಾಯಕ ತಾರಿಕ್

ಈ ಹಿಂದೆ ಕೇಂದ್ರ ಸಚಿವ, ಹಿಂದೂಸ್ತಾನಿ ಅವಾಮ್ ಮೋರ್ಚಾ (ಎಚ್‌ಎಎಂ) ಮುಖ್ಯಸ್ಥ ಜಿತನ್ ರಾಮ್ ಮಾಂಜ್ಹಿ ಅವರೂ ಬಿಹಾರ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂಬ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು ಮತ್ತು ಎಲ್ಲಾ ಪ್ರಕ್ರಿಯೆಯೂ ಪ್ರಜಾಪ್ರಭುತ್ವ ಮಾದರಿಯಲ್ಲಿ ನಡೆಯಬೇಕು ಎಂದಿದ್ದರು.

“ಇದು ಪ್ರಜಾಪ್ರಭುತ್ವ ದೇಶ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಮಗೆ ಮತ ಹಾಕುವ ಹಕ್ಕನ್ನು ನೀಡಿದ್ದಾರೆ. ಚುನಾವಣೆಗೂ ಮುನ್ನ ಸಿಎಂ ಅಭ್ಯರ್ಥಿ ಬಗ್ಗೆ ನಾವು ಮಾತನಾಡುವುದು ಸರಿಯಲ್ಲ. 2025ರ ವಿಧಾನಸಭೆ ಚುನಾವಣೆ ನಡೆದ ಬಳಿಕ ಚುನಾಯಿತರಾದ ಶಾಸಕರುಗಳು ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬ ನಿರ್ಧಾರವನ್ನು ಕೈಗೊಳ್ಳುತ್ತಾರೆ” ಎಂದು ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...