ರಾಹುಲ್-ಪ್ರಿಯಾಂಕಾ ಗಾಂಧಿ ಬಾಂಧವ್ಯದ ಬಗ್ಗೆ ನಾಲಿಗೆ ಹರಿಬಿಟ್ಟ ಬಿಜೆಪಿ ಸಚಿವ

Date:

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಮತ್ತು ಅವರ ಸಹೋದರಿ, ಸಂಸದೆ ಪ್ರಿಯಾಂಕಾ ಗಾಂಧಿ ಅವರ ಬಾಂಧವ್ಯದ ಬಗ್ಗೆ ಮಧ್ಯಪ್ರದೇಶದ ನಗರಾಭಿವೃದ್ಧಿ ಸಚಿವ, ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗೀಯ ನಾಲಿಗೆ ಹರಿಬಿಟ್ಟಿದ್ದಾರೆ. ವಿವಾದಾತ್ಮಕ ಹೇಳಿಕೆ ನೀಡಿ, ವಿರೋಧಕ್ಕೆ ಗುರಿಯಾಗಿದ್ದಾರೆ.

ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. “ನಾವು ಹಳೆಯ ಸಂಸ್ಕೃತಿಯ ಜನರು. ನಮ್ಮ ಸಹೋದರಿಯರ ಹಳ್ಳಿಯಲ್ಲಿ, ನಾವು ನೀರನ್ನು ಕೂಡ ಕುಡಿಯುವುದಿಲ್ಲ. ನನ್ನ ಚಿಕ್ಕಮ್ಮ ವಾಸಿಸುತ್ತಿದ್ದ ಜಿರಾಪುರಕ್ಕೆ, ನನ್ನ ತಂದೆ ತನ್ನ ಮನೆಯಿಂದ ಒಂದು ಪಾತ್ರೆಯಲ್ಲಿ ನೀರನ್ನು ಹೊತ್ತುಕೊಂಡು ಹೋಗುತ್ತಿದ್ದರು. ಇಂದಿನ ನಮ್ಮ ವಿರೋಧ ಪಕ್ಷದ ನಾಯಕರು ತಮ್ಮ ತಂಗಿಯನ್ನು ರಸ್ತೆಯಲ್ಲಿ ಚುಂಬಿಸುತ್ತಾರೆ. ನಾನು ನಿಮ್ಮನ್ನು ಕೇಳಲು ಬಯಸುತ್ತೇನೆ, ನಿಮ್ಮಲ್ಲಿ ಯಾರು ನಿಮ್ಮ ಕಿರಿಯ ಸಹೋದರಿಯರನ್ನು ಅಥವಾ ಹೆಣ್ಣುಮಕ್ಕಳನ್ನು ಸಾರ್ವಜನಿಕವಾಗಿ ಚುಂಬಿಸುತ್ತೀರಿ?” ಎಂದು ದ್ವೇಷಪೂರಿತ ಭಾಷಣ ಮಾಡಿದ್ದಾರೆ.

“ರಸ್ತೆಯಲ್ಲಿ ತಮ್ಮ ಮನೆಯ ಹೆಣ್ಣುಮಕ್ಕಳನ್ನು ಚುಂಬಿಸುವುದು ಮೌಲ್ಯಗಳ ಕೊರತೆ. ಇವು ವಿದೇಶದಲ್ಲಿ ಬೆಳೆದ ವಿದೇಶಿ ಮೌಲ್ಯಗಳು. ಆದಾಗ್ಯೂ, ಅವರು ಪ್ರಧಾನಿಯ ಬಗ್ಗೆ ಮಾತನಾಡುತ್ತಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದು ರಾಹುಲ್‌ ಗಾಂಧಿಯವರ ತಪ್ಪಲ್ಲ. ವಿರೋಧ ಪಕ್ಷದ ನಾಯಕ ವಿದೇಶದಲ್ಲಿ ಅಧ್ಯಯನ ಮಾಡಿ ಆ ಮೌಲ್ಯಗಳನ್ನು ಅಳವಡಿಸಿಕೊಂಡಿದ್ದಾರೆ. ಅವರಿಗೆ ಭಾರತೀಯ ಸಂಪ್ರದಾಯಗಳು ಅರ್ಥವಾಗುವುದಿಲ್ಲ” ಎಂದು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಜಿಎಸ್‌ಟಿ ಕಡಿತ | ಬಿಜೆಪಿ ಸಂಭ್ರಮಿಸುವಂಥಾದ್ದು ಏನಿದೆ?

ವಿಜಯವರ್ಗೀಯ ಹೇಳಿಕೆಗೆ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ. “ಕೈಲಾಶ್ ವಿಜಯವರ್ಗೀಯವರು ಪವಿತ್ರ ಸಹೋದರ-ಸಹೋದರಿಯರ ಬಾಂಧವ್ಯವನ್ನು ಅವಮಾನಿಸಿದ್ದಾರೆ. ಅವರ ಭಾಷೆ ಎಲ್ಲರಿಗೂ ತಿಳಿದಿದೆ. ಅವರು ಮಹಿಳೆಯರನ್ನು ಪದೇ ಪದೇ ಅವಮಾನಿಸಿದ್ದಾರೆ. ಕೆಲವೊಮ್ಮೆ ಮಹಿಳೆಯರ ಬಟ್ಟೆ, ಕೆಲವೊಮ್ಮೆ ಅವರ ಶಿಕ್ಷಣ, ಕೆಲವೊಮ್ಮೆ ಅವರ ಮಾತಿನ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆ. ಇದು ಸಹೋದರಿಯರು ಮತ್ತು ಹೆಣ್ಣುಮಕ್ಕಳ ಬಗ್ಗೆ ಅವರ ಚಿಂತನೆ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಇಂತಹ ನಾಚಿಕೆಯಿಲ್ಲದ ಹೇಳಿಕೆಗೆ ಪ್ರತಿಕ್ರಿಯಿಸಲು ನಮಗೆ ನಾಚಿಕೆಯಾಗುತ್ತದೆ” ಎಂದು ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಜಿತು ಪಟ್ವಾರಿ ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...