ಸಿದ್ದರಾಮಯ್ಯ-ಡಿಕೆಶಿ ಪರಸ್ಪರ ಹೊಡೆದಾಡಿಕೊಳ್ಳುವ ಕಾಲ ದೂರವಿಲ್ಲ: ಯತ್ನಾಳ್‌

Date:

ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್‌ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ವರ್ಷ ಪೂರೈಸುವುದಿಲ್ಲ. ಲೋಕಸಭಾ ಚುನಾವಣೆಗೂ ಮುನ್ನ ಅಥವಾ ನಂತರ ಆಕ್ಸಿಡೆಂಟ್ ಆಗುತ್ತೆ. ಸಿದ್ದರಾಮಯ್ಯ ಮತ್ತು ಡಿಕೆಶಿ ಪರಸ್ಪರ ಬಡಿದಾಡಿಕೊಳ್ಳುವ ದಿನಗಳು ದೂರವಿಲ್ಲ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಯತ್ನಾಳ್, “ಯಡಿಯೂರಪ್ಪ, ಬೊಮ್ಮಾಯಿ ಮನೆಗೆ ಸೌಜನ್ಯದ ಭೇಟಿ ಅಂತಾರೆ. ಇವರು ಸೌಜನ್ಯದ ಭೇಟಿ ಕೊಡುತ್ತಿಲ್ಲ. ಅದು ಸೋನಿಯಾ ಗಾಂಧಿ ಹೆದರಿಸುವ ಕೆಲಸ. ಬಸವರಾಜ ಬೊಮ್ಮಾಯಿಯವರೇ ಮನೆವರೆಗೂ ಅವರನ್ನು ಬಿಟ್ಟುಕೊಳ್ಳಬೇಡಿ” ಎಂದು ಸಲಹೆ ನೀಡಿದರು.

“ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ, ಇಲ್ಲದಿದ್ದರೆ ಪಕ್ಷದಿಂದ ಹೊರ ನಡೆಯಿರಿ. ನಾವ್ಯಾರು ಜಗಳ ಮಾಡಿತ್ತಿಲ್ಲ, ಪಕ್ಷ ನಿರ್ಣಯ ಮಾಡಿದವರ ಪರ ಕೆಲಸ ಮಾಡಿ. ಮುಂದಿನ ಮೂರು ತಿಂಗಳಲ್ಲಿ ಕಾಂಗ್ರೆಸ್​ ಗ್ಯಾರಂಟಿ ಬಣ್ಣ ಬಯಲಾಗಲಿದೆ. ಸಿದ್ದರಾಮಯ್ಯನವರು ಏನ್ ಹೇಳಿದ್ರು ಎನ್ನುವುದನ್ನು ಹೊರತೆಗೆಯುತ್ತೇವೆ. ನಾವು ದನ ಕಾಯುತ್ತಿಲ್ಲ, ಆರ್ಥಿಕ ಸ್ಥಿತಿಗತಿ ಬಗ್ಗೆ ಗೊತ್ತಿದೆ” ಎಂದು ಕಿಡಿ ಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದು ಐದು ವರ್ಷ ನಡೆಯುವ ಸರ್ಕಾರ ಅಲ್ಲ. ಲೋಕಸಭಾ ಚುನಾವಣೆ ಮುನ್ನ, ಇಲ್ಲವೆ ಚುನಾವಣೆ ಮುಗಿದ ಬಳಿಕ ಆಕ್ಸಿಡೆಂಟ್ ಆಗುತ್ತೆ. ಅಷ್ಟರಲ್ಲಿ ಇಬ್ಬರು (ಸಿದ್ದರಾಮಯ್ಯ-ಡಿಕೆ ಶಿವಕುಮಾರ್) ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ಳುತ್ತಾರೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಡವರು ಕಾಂಗ್ರೆಸ್‌ಗೆ ಮತ ಚಲಾಯಿಸಿದ ಕಾರಣಕ್ಕೆ ಕೇಂದ್ರ ಅಕ್ಕಿ ಕೊಡುತ್ತಿಲ್ಲ: ಜೈರಾಮ್‌ ರಮೇಶ್

“ನಾವು ವಿರೋಧ ಪಕ್ಷದವರ ಮನೆಗೆ ಹೋಗುವುದಿಲ್ಲ ಅಂತಾರೆ‌. ಅದೇ ರೀತಿ ನಾವು ಅವರ ಮನೆಗೆ ಹೋಗುವುದಿಲ್ಲ ಎಂದು ಹೇಳಿ. ಅವರನ್ನು ಸ್ವಾಗತಿಸಿಕೊಂಡರೆ ನಮ್ಮ ಕಾರ್ಯಕರ್ತರು ಮಲಗಿ ಬಿಡುತ್ತಾರೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ. ಹಲ್ಕಟಗಿರಿ ಮಾಡುವುದಿದ್ರೆ ಬಿಟ್ಟು ಹೋಗಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ದೇಶದಲ್ಲಿ ಸಮಾನ ನಾಗರಿಕ ಕಾಯ್ದೆ ಜಾರಿಯಾಗಲಿದೆ. ಪಕ್ಷ ನಿರ್ಣಯ ಮಾಡಿದವರು ವಿರೋಧ ಪಕ್ಷದ ನಾಯಕರು ಆಗಲಿದ್ದಾರೆ. ನಮ್ಮಲ್ಲಿ ಯಾವುದೇ ಒಳ ಪೈಪೋಟಿ ಇಲ್ಲ” ಎಂದು ಸ್ಪಷ್ಟಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...