ಪಿಎಸ್​ಐ ನೇಮಕಾತಿ ಹಗರಣ: ವಿಚಾರಣೆಗೆ ಹಾಜರಾದ ಶಾಸಕ ಅಶ್ವತ್ಥ್​ ನಾರಾಯಣ

Date:

ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ 545 ಪೊಲೀಸ್​ ಸಬ್​ ಇನ್​ಸ್ಪೆಕ್ಟರ್​ಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲೇಶ್ವರಂ ಕ್ಷೇತ್ರದ ಬಿಜೆಪಿ ಶಾಸಕ ಡಾ. ಸಿ ಎನ್ ಅಶ್ವತ್ಥ್​ ನಾರಾಯಣ ಅವರನ್ನು ವಿಶೇಷ ತನಿಖಾ ತಂಡ(ಎಸ್‌ಐಟಿ) ವಿಚಾರಣೆ ನಡೆಸಿದೆ.

ನೇಮಕಾತಿ ಹಗರಣದಲ್ಲಿ ಮಾಗಡಿ ಮೂಲದವರು ಅತಿ ಹೆಚ್ಚಾಗಿ ಮತ್ತು ಸಂಬಂಧಿಕರು ಆಯ್ಕೆ ಆಗಿದ್ದಾರೆ. ಇದನ್ನೆಲ್ಲ ಅಶ್ವತ್ಥ್ ನಾರಾಯಣ ಮಾಡಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. ಕಾಂಗ್ರೆಸ್ ಸರ್ಕಾರ ಪಿಎಸ್‌ಐ ಹಗರಣದ ಮರು ತ‌ನಿಖೆಗೆ ಆದೇಶಿಸಿತ್ತು. ಈ ಬಗ್ಗೆ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಶ್ವತ್ಥ್ ನಾರಾಯಣ ಅವರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಿದೆ.

545 ಪಿಎಸ್​ಐ ಹುದ್ದೆಗಳ ಭರ್ತಿಗಾಗಿ 2021 ಅಕ್ಟೋಬರ್ 3 ರಂದು ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿನ 93 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಹುದ್ದೆಗಳನ್ನು ಅಕ್ರಮವಾಗಿ ಗಿಟ್ಟಿಸಿಕೊಳ್ಳಲು ಹಣ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಪರೀಕ್ಷಾ ಹಗರಣದಲ್ಲಿ ಹಣದ ಹೊಳೆಯೇ ಹರಿದಿರುವುದು ದೃಢವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತಾಯಿಗೆ ಅನಾರೋಗ್ಯ: ಭಾರತೀಯ ಮೂಲದ ಅಮೆರಿಕದ ಜಾತಿ ವಿರೋಧಿ ಹೋರಾಟಗಾರ್ತಿಗೆ ಬೆಂಗಳೂರಿಗೆ ಬರಲು ವಿಸಾ ನಿರಾಕರಣೆ

ಪ್ರಕರಣದ ಗಂಭೀರತೆಯನ್ನು ಅರಿತ ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿತ್ತು. 545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ಹಿನ್ನೆಲೆ ಪಿಎಸ್ಐ ನೇಮಕಾತಿ ವಿಭಾಗದಲ್ಲಿ ಅಧಿಕಾರಿಗಳಿಗಿಂತ ಮಧ್ಯವರ್ತಿಗಳಿಗೆ ಹಣದ ಹೊಳೆ ಹರಿದಿತ್ತು. ಮಧ್ಯವರ್ತಿಗಳ ಹಂತದಲ್ಲಿಯೂ ಕನಿಷ್ಠ 10 ಲಕ್ಷ, ನೇಮಕಾತಿ ವಿಭಾಗದ ಅಧಿಕಾರಿಗೆ 30-35 ಲಕ್ಷ ತಲುಪುತ್ತಿತ್ತು ಎಂಬ ಅಂಶ ತಿಳಿದುಬಂದಿತ್ತು.

ಹಗರಣಕ್ಕೆ ಸಂಬಂಧಿಸಿದಂತೆ 110 ಜನರನ್ನು ಬಂಧಿಸಲಾಗಿತ್ತು. ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಭ್ರಷ್ಟಾಚಾರ ಪ್ರಕರಣದಲ್ಲಿ ಎಡಿಜಿಪಿ ಶ್ರೇಣಿಯ ಐಪಿಎಸ್ ಅಮೃತ್ ಪಾಲ್​ರನ್ನು ಬಂಧಿಸಲಾಗಿತ್ತು.

ಮರು ಪರೀಕ್ಷೆಗೆ 2022 ಏಪ್ರಿಲ್​ನಲ್ಲಿ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಆದೇಶ ಪ್ರಶ್ನಿಸಿ ಅಭ್ಯರ್ಥಿಗಳು ಹೈಕೋರ್ಟ್ ಮೊರೆಹೋಗಿದ್ದರು. ಅರ್ಜಿ ವಜಾಗೊಳಿಸಿದ್ದ ಹೈಕೋರ್ಟ್ ಮರು ಪರೀಕ್ಷೆಗೆ ಸೂಚಿಸಿತ್ತು. ಬಳಿಕ 117 ಕೇಂದ್ರದಲ್ಲಿ 54 ಸಾವಿರ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...